ನದಿ ತೀರದ ಜನರು ಎಚ್ಚರದಿಂದ ಇರಿ

KannadaprabhaNewsNetwork | Published : Jul 25, 2024 1:18 AM

ಸಾರಾಂಶ

ಕನ್ನಡಪ್ರಭ ವಾರ್ತೆ ಗೋಕಾಕ ಪಶ್ಚಿಮ ಘಟ್ಟ ಮತ್ತು ಹಿಡಕಲ್ ಜಲಾನಯನ ಪ್ರದೇಶದಲ್ಲಿ ಹಚ್ಚು ಮಳೆಯಾಗುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ನದಿ ತೀರದ ಗ್ರಾಮಸ್ಥರು ಕಟ್ಟೆಚ್ಚರ ವಹಿಸಿ ಎಚ್ಚರದಿಂದ ಇರುವಂತೆ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಬೆಮ್ಯುಲ್)ದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನದಿ ಪಾತ್ರದ ಜನರಲ್ಲಿ ಮನವಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಗೋಕಾಕ

ಪಶ್ಚಿಮ ಘಟ್ಟ ಮತ್ತು ಹಿಡಕಲ್ ಜಲಾನಯನ ಪ್ರದೇಶದಲ್ಲಿ ಹಚ್ಚು ಮಳೆಯಾಗುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ನದಿ ತೀರದ ಗ್ರಾಮಸ್ಥರು ಕಟ್ಟೆಚ್ಚರ ವಹಿಸಿ ಎಚ್ಚರದಿಂದ ಇರುವಂತೆ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಬೆಮ್ಯುಲ್)ದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನದಿ ಪಾತ್ರದ ಜನರಲ್ಲಿ ಮನವಿ ಮಾಡಿದ್ದಾರೆ.

ಒಟ್ಟು 51 ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯದಲ್ಲಿ ಈಗಾಗಲೇ 44 ಟಿಎಂಸಿ ನೀರು ಸಂಗ್ರಹವಾಗಿದ್ದು, ಘಟಪ್ರಭಾ ನದಿಗೆ ಹಿರಣ್ಯಕೇಶಿ ನದಿಯಿಂದ 15,370 ಕ್ಯುಸೆಕ್‌ , ಮಾರ್ಕಂಡೇಯ ನದಿಯಿಂದ 4818 ಕ್ಯುಸೆಕ್‌, ಬಳ್ಳಾರಿ ನಾಲಾದಿಂದ 2207 ಕ್ಯುಸೆಕ್‌ ಸೇರಿ ಈಗ 22,395 ಕ್ಯುಸೆಕ್‌ ನೀರು ಬರುತ್ತಿದೆ. ಯಾವುದೇ ಸಂದರ್ಭದಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ಹಿಡಕಲ್ ಜಲಾಶಯಕ್ಕೆ 31,153 ಕ್ಯುಸೆಕ್‌ ಒಳಹರಿವಿದ್ದು, ಬುಧವಾರ ಸಂಜೆಯಿಂದ ಗುರುವಾರ ಮುಂಜಾನೆಯವರಿಗೆ 10 ಸಾವಿರ ಕ್ಯುಸೆಕ್‌ ನೀರನ್ನು ಹರಿಬಿಡಲಾಗುತ್ತಿದೆ. ಆದ್ದರಿಂದ ನದಿ ತೀರದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಕೋರಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಕ್ಷೇತ್ರದ ಚಿಗಡೊಳ್ಳಿ, ಉದಗಟ್ಟಿ, ಸುಣಧೋಳಿ, ಹುಣಶ್ಯಾಳ ಪಿವೈ, ಢವಳೇಶ್ವರ, ಅವರಾದಿ ಸೇತುವೆಗಳು ಜಲಾವೃತಗೊಂಡಿವೆ. ಲೋಳಸೂರ ಸೇತುವೆ ಮೇಲೆಯೂ ಪರಿಣಾಮ ಬೀರಬಹುದು. ನದಿ ತೀರದ ಅಡಿಬಟ್ಟಿ, ಮೆಳವಂಕಿ, ಕಲಾರಕೊಪ್ಪ, ಹಡಗಿನಾಳ, ಉದಗಟ್ಟಿ, ತಳಕಟ್ನಾಳ, ತಿಗಡಿ, ಸುಣಧೋಳಿ, ಬೈರನಟ್ಟಿ, ಹುಣಶ್ಯಾಳ ಪಿವೈ, ಬೀಸನಕೊಪ್ಪ, ಢವಳೇಶ್ವರ, ಅರಳಿಮಟ್ಟಿ, ಅವರಾದಿ, ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ, ಬೀರನಗಡ್ಡಿ, ಹುಣಶ್ಯಾಳ ಪಿಜಿ, ಫುಲಗಡ್ಡಿ, ಮುಸಗುಪ್ಪಿ, ಪಟಗುಂದಿ, ಕಮಲದಿನ್ನಿ, ಮುನ್ಯಾಳ ನದಿ ತೀರದ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಮೂಡಲಗಿ ಮತ್ತು ಗೋಕಾಕ ತಾಲೂಕಾಡಳಿತಕ್ಕೆ ಸೂಚನೆಯನ್ನು ನೀಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.-------------

Share this article