ಬಿಎಎಂಎಸ್ ಪರೀಕ್ಷೆಯಲ್ಲಿ ಆರ್‌ಕೆಎಂ ವಿದ್ಯಾರ್ಥಿಗಳ ಸಾಧನೆ

KannadaprabhaNewsNetwork |  
Published : Oct 10, 2026, 04:00 AM IST
ಅಂತಿಮ ವರ್ಷದ ಬಿ.ಎ.ಎಂ.ಎಸ್. ಪರೀಕ್ಷೆಯಲ್ಲಿ ಆರ್‌.ಕೆ.ಎಂ. ವಿದ್ಯಾರ್ಥಿಗಳ ಮಹತ್ತರ ಸಾಧನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಆರ್‌.ಕೆ.ಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಅಂತಿಮ ವರ್ಷದ ಬಿಎಎಂಎಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಸಾಧಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯು ಗುಣಮಟ್ಟದ ಆಯುರ್ವೇದ ಶಿಕ್ಷಣ ಮತ್ತು ಶೈಕ್ಷಣಿಕ ಶ್ರೇಷ್ಠತೆಯ ಬಗೆಗಿನ ಸಂಸ್ಥೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂವಿವಿಎಸ್ ಆರ್‌ಕೆಎಂ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದ ಆರ್‌.ಕೆ.ಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಅಂತಿಮ ವರ್ಷದ ಬಿಎಎಂಎಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಸಾಧಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯು ಗುಣಮಟ್ಟದ ಆಯುರ್ವೇದ ಶಿಕ್ಷಣ ಮತ್ತು ಶೈಕ್ಷಣಿಕ ಶ್ರೇಷ್ಠತೆಯ ಬಗೆಗಿನ ಸಂಸ್ಥೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂವಿವಿಎಸ್ ಆರ್‌ಕೆಎಂ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಹೇಳಿದರು.

ಪರೀಕ್ಷೆಯಲ್ಲಿ ಭಾಗ್ಯಲಕ್ಷ್ಮಿ ಶೇ.83.56 ಅಂಕಗಳೊಂದಿಗೆ ಪ್ರಥಮ, ನಿಖಿತಾ ಪವಾರ ಶೇ.82.74 ದ್ವಿತೀಯ, ಝೇಬಾ ನಾಗಠಾಣ ಶೇ.82.19 ತೃತೀಯ ಸ್ಥಾನ ಗಳಿಸಿದ್ದು, ಸಂಸ್ಥೆಯ ಹೆಮ್ಮೆಯಾಗಿದೆ. ಒಟ್ಟು 47 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 14 ವಿದ್ಯಾರ್ಥಿಗಳು ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. ಒಟ್ಟು 33 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 11 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಫಲಿತಾಂಶವು ವಿದ್ಯಾರ್ಥಿಗಳ ಪರಿಶ್ರಮ, ಬೋಧಕ ವರ್ಗದ ಸಮರ್ಪಣೆ ಹಾಗೂ ಸಂಸ್ಥೆಯ ಉತ್ತಮ ಶೈಕ್ಷಣಿಕ ವಾತಾವರಣಕ್ಕೆ ಸಾಕ್ಷಿಯಾಗಿದೆ.

ವಿದ್ಯಾರ್ಥಿಗಳು ಮತ್ತು ಬೋಧಕ ತಂಡದ ಈ ಸಾಧನೆಗೆ ಅಭಿನಂದಿಸಿದರು. ವಿದ್ಯಾರ್ಥಿಗಳ ನಡುವಿನ ಸ್ಪರ್ಧಾತ್ಮಕ ಮನೋಭಾವವು ಆರ್‌ಕೆಎಂ ಸಂಸ್ಥೆಯ ಗುಣಮಟ್ಟದ ಬೋಧನೆ ಮತ್ತು ಉನ್ನತ ಶೈಕ್ಷಣಿಕ ಮಾನದಂಡಗಳನ್ನು ಪ್ರತಿಬಿಂಬಿಸುತ್ತದೆ. ಗುಣಮಟ್ಟದ ಶಿಕ್ಷಣದ ಮೂಲಕ ಸಮರ್ಥ ಆರೋಗ್ಯ ವೃತ್ತಿಪರರನ್ನು ರೂಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಬೋಧಕ ತಂಡ ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಸಂಸ್ಥೆಯ ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿ, ಆಸ್ಪತ್ರೆ ಸಿಬ್ಬಂದಿ ಹಾಗೂ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹೃತ್ಪೂರ್ವಕವಾಗಿ ಅಭಿನಂದಿಸಿ, ಶುಭ ಹಾರೈಸಿದರು. ಕೋಟ್:

ಸಂಸ್ಥೆಯ ವಿದ್ಯಾರ್ಥಿಗಳ ಈ ಸಾಧನೆಯು ಆಯುರ್ವೇದ ಶಿಕ್ಷಣದಲ್ಲಿ ಶೈಕ್ಷಣಿಕ ಶ್ರೇಷ್ಠತೆ, ವೃತ್ತಿಪರ ಕೌಶಲ್ಯ ಮತ್ತು ಸಮಾಜ ಸೇವೆಯ ಮೌಲ್ಯಗಳನ್ನು ಬೆಳೆಸುವಲ್ಲಿ ಯಶಸ್ವಿಯಾಗಿದೆ. ಆರ್‌ಕೆಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ನಿರಂತರ ಬದ್ಧತೆಯನ್ನು ನಮ್ಮ ಸಂಸ್ಥೆ ಮತ್ತೊಮ್ಮೆ ಸಾಬೀತುಪಡಿಸಿದೆ.ಶಂಭುಲಿಂಗಯ್ಯ ಕರ್ಪೂರಮಠ, ಆರ್‌.ಕೆ.ಎಂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

371ಜೆ ಹೋರಾಟಕ್ಕೆ ವಿಜಯೇಂದ್ರ ಬೆಂಬಲ ಭರವಸೆ
ವಿದ್ಯಾರ್ಥಿಗಳಿಗೆ ಯುವ ಸಂಸತ್ ಸಹಕಾರಿ