ರಸ್ತೆ ಅಪಘಾತ: ಒರ್ವ ದುರ್ಮರಣ

KannadaprabhaNewsNetwork |  
Published : Dec 29, 2024, 01:16 AM IST
್ಿಿ | Kannada Prabha

ಸಾರಾಂಶ

ಚಿಕ್ಕಮಗಳೂರು- ಶೃಂಗೇರಿ ಸಂಪರ್ಕ ರಾಜ್ಯ ಹೆದ್ದಾರಿ ಮೆಣಸೆ ಶಿಡ್ಲೆ ಸಮೀಪ ಕಾರು ಹಾಗೂ ಟಿಟಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಭವಿಸಿದೆ.

ಶೃಂಗೇರಿ: ಚಿಕ್ಕಮಗಳೂರು- ಶೃಂಗೇರಿ ಸಂಪರ್ಕ ರಾಜ್ಯ ಹೆದ್ದಾರಿ ಮೆಣಸೆ ಶಿಡ್ಲೆ ಸಮೀಪ ಕಾರು ಹಾಗೂ ಟಿಟಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಭವಿಸಿದೆ.

ಧರ್ಮಪುರಿ ಮೂಲದ ಭುವನ್ (65) ಮೃತ ದುರ್ದೈವಿ.

ಶೃಂಗೇರಿಯಿಂದ ತಮಿಳುನಾಡು ಕಡೆ ತೆರಳುತ್ತಿದ್ದ ಕಾರು ಬೆಂಗಳೂರಿನಿಂದ ಶೃಂಗೇರಿಯತ್ತ ಬರುತ್ತಿದ್ದ ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಭುವನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿದ್ದು ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ವಹಿಸಿದ್ದಾರೆ.

28 ಶ್ರೀ ಚಿತ್ರ 5-ಶೃಂಗೇರಿ ಮೆಣಸೆ ಶಿಡ್ಲೆ ಬಳಿ ಕಾರ್ ಹಾಗೂ ಟಿಟಿ ನಡುವೆ ಅಪಘಾತ ಸಂಭವಿಸಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೀ ಹೆಬ್ಬಾಳಕರ್‌ ಬ್ಯಾಟಿಂಗ್‌ಗೆ ಶಾಸಕ ಆಸೀಫ್ ಸೇಠ್ ಬೋಲ್ಡ್‌
ಮೆಟ್ರೋ ದರ ಏರಿಸಿದ್ದು ನಾವಲ್ಲ, ಕೇಂದ್ರ : ಸಿಎಂ ಸಿದ್ದರಾಮಯ್ಯ