ದಾಬಸ್‌ಪೇಟೆ: ಕ್ಯಾಂಟರ್ ಲಾರಿ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು ಪ್ರಯಾಣಿಸುತ್ತಿದ್ದ 407 ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿರುವ ದುರ್ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-೪೮ರ ಕುಲುವನಹಳ್ಳಿ ಬಳಿ ಸಂಭವಿಸಿದೆ.
ಕಾರ್ಮಿಕರಾದ ಸಾಬಣ್ಣ, ಕಟ್ಟಪ್ಪ, ಬಂಗಾರಪ್ಪಗೆ ಗಂಭೀರ ಗಾಯಾಳುಗಳಾಗಿದ್ದು, ಯಾದಗಿರಿ ಮೂಲದ ಲಕ್ಷ್ಮೀ, ಅನಂತಪ್ಪ, ಭಾನುಪ್ರಿಯ, ನಾಗರಾಜು ಮತ್ತು 3-4 ಮಂದಿ ಮಕ್ಕಳು ವಾಹನದಲ್ಲಿದ್ದವರು.
ಭಾನುವಾರ ಸಂಜೆ 5.30ರಲ್ಲಿ ತ್ಯಾಮಗೊಂಡ್ಲು ಕಡೆಯಿಂದ ಬಂದ ಮೋಲ್ಡ್ ಹಾಕುವ ಟೆಂಪೋ ಕಾಂಕ್ರೀಟ್ ಕಲಬೆರಕೆ ಮಾಡುವ ಟ್ರ್ಯಾಲಿ ರಾಷ್ಟ್ರೀಯ ಹೆದ್ದಾರಿಗೆ ಬಂದ ಕೂಡಲೇ ತುಮಕೂರು ಕಡೆಯಿಂದ ಬಂದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ.ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿ: 15ಕ್ಕೂ ಅಧಿಕ ಕಟ್ಟಡ ಕಾರ್ಮಿಕರು ಮತ್ತು ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ತುಂಬಿಕೊಂಡು ಬಂದ 407 ಟೆಂಪೋ ಅಪಘಾತದಲ್ಲಿ ಕಾರ್ಮಿಕರು ಮತ್ತು ಸಾಮಗ್ರಿಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿತ್ತು, ಕ್ರೇನ್ ಮೂಲಕ ಡಿಕ್ಕಿಗೆ ಒಳಗಾಗಿದ್ದ ವಾಹನಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
10 ಕಿ.ಮೀ ಟ್ರಾಫಿಕ್ ಜಾಂ:
ಪೊಲೀಸ್ ವಾಹನದಲ್ಲೇ ಗಾಯಾಳು ಆಸ್ಪತ್ರೆಗೆ: ಅಪಘಾತದಲ್ಲಿ ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ವಾಹನದಿಂದ ಹೊರಗೆ ಬರಲು ಸಾಧ್ಯವಾಗದಿದ್ದಾಗ ಸ್ಥಳದಲ್ಲೇ ಇದ್ದ ಪೊಲೀಸರು, ಪೊಲೀಸ್ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು.
ಗಾಯಾಳುಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಲುವನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಕ್ಯಾಂಟರ್ ಲಾರಿ -ಟೆಂಪೋ ನಡುವೆ ಭೀಕರ ಅಪಘಾತ.