ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ

KannadaprabhaNewsNetwork |  
Published : Jan 20, 2025, 01:32 AM IST
51 | Kannada Prabha

ಸಾರಾಂಶ

ಮುಂದಿನ ದಿನಗಳಲ್ಲಿ ಮತ್ತಷ್ಟು ಹಣ ಬಿಡುಗಡೆಗೊಳಿಸಿ ಆದ್ಯತೆಯ ಮೇರೆಗೆ ಮೂಲಭೂತ ಸವಲತ್ತು ಕಲ್ಪಿಸುವುದಾಗಿ ಭರವಸೆ

ಕನ್ನಡಪ್ರಭ ವಾರ್ತೆ ಕೆ.ಆರ್. ನಗರಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾನು ಕಂಕಣ ಬದ್ಧನಾಗಿ ಕೆಲಸ ಮಾಡಲಿದ್ದು ಈ ನಿಟ್ಟಿನಲ್ಲಿ ಸರ್ಕಾರದಿಂದ ಹೆಚ್ಚು ಅನುದಾನ ತಂದು ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತೇನೆ ಎಂದು ಶಾಸಕ ಡಿ. ರವಿಶಂಕರ್ ಹೇಳಿದರು. ಪಟ್ಟಣದ ಹುಣಸೂರು ರಸ್ತೆಯ ರೇಷ್ಮೆ ಹುಳು ಬೀಜ ಉತ್ಪಾದನಾ ಕೇಂದ್ರ ಆವರಣದ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮತದಾರರ ಆಶಯಕ್ಕೆ ಸ್ಪಂದಿಸಿ ಅವರ ಕೆಲಸ ಮಾಡುವುದೇ ನನ್ನ ಪ್ರಮುಖ ಗುರಿ ಎಂದರು.ಈವರೆಗೆ ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲೂಕುಗಳ ಅಭಿವೃದ್ಧಿಗೆ 500 ಕೋಟಿ ರು. ಅನುದಾನ ತಂದಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಹಣ ಬಿಡುಗಡೆಗೊಳಿಸಿ ಆದ್ಯತೆಯ ಮೇರೆಗೆ ಮೂಲಭೂತ ಸವಲತ್ತು ಕಲ್ಪಿಸುವುದಾಗಿ ಭರವಸೆ ನೀಡಿದ ಶಾಸಕರು, ಸಾರ್ವಜನಿಕರು ನಮ್ಮೊಂದಿಗೆ ಕೈ ಜೋಡಿಸಿದರೆ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡಬಹುದು ಎಂದು ಅವರು ತಿಳಿಸಿದರು.30 ಲಕ್ಷ ರು. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಂಡಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ಸರ್ಕಾರಿ ಕಚೇರಿಯನ್ನು ಮೇಲ್ದರ್ಜೆಗೇರಿಸಿ ಅಲ್ಲಿಗೆ ಬರುವ ಸಾರ್ವಜನಿಕರಿಗೆ ಸವಲತ್ತು ಕಲ್ಪಿಸಿ ಅದರೊಂದಿಗೆ ಕೆಲಸಗಳು ವೇಗವಾಗಿ ನಡೆಯುವಂತೆ ಮಾಡಲು ನಾನು ನಿರ್ಧಾರ ಮಾಡಿದ್ದು ಇದಕ್ಕೆ ಕೈ ಜೋಡಿಸಿ ನಾಗರಿಕರಿಗೆ ಅನುಕೂಲ ದೊರಕಿಸಬೇಕು ಎಂದರು.ಪುರಸಭೆ ಅಧ್ಯಕ್ಷ ಶಿವುನಾಯಕ್, ಸದಸ್ಯರಾದ ಕೆ.ಜಿ. ಸುಬ್ರಮಣ್ಯ, ಶಂಕರಸ್ವಾಮಿ, ಸೌಮ್ಯಾ ಲೋಕೇಶ್, ಮಾಜಿ ಸದಸ್ಯ ಕೆ. ವಿನಯ್, ಗ್ರಾಪಂ ಮಾಜಿ ಅಧ್ಯಕ್ಷ ಪ್ರಕಾಶ್, ಮಾಜಿ ಸದಸ್ಯ ಮಹದೇವ್, ಮುಖಂಡರಾದ ಕೆಂಚಿ ಮಂಜು, ಗೌತಮ್ ಜಾಧವ್, ಕೃಷ್ಣೇಗೌಡ, ಕೆ.ಎಚ್. ಬುಡಿಗೌಡ, ಮುತ್ತುರಾಜ್, ಗುತ್ತಿಗೆದಾರರಾದ ಬ್ಯಾಡರಹಳ್ಳಿ ಮುರುಳಿ, ಅರಕೆರೆ ಶರತ್, ಲೋಕೋಪಯೋಗಿ ಇಲಾಖೆ ಎಇಇ ಸುಮಿತ, ಎಂಜಿನಿಯರ್ ಗಳಾದ ಶಿವಲೀಲಾ, ಮಹದೇವಸ್ವಾಮಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ