ರಸ್ತೆ, ಚರಂಡಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ: ಕೆ.ಎಂ.ಉದಯ್

KannadaprabhaNewsNetwork |  
Published : Oct 13, 2025, 02:00 AM IST
11ಕೆಎಂಎನ್ ಡಿ19 | Kannada Prabha

ಸಾರಾಂಶ

ಗ್ರಾಮಗಳ ಅಭಿವೃದ್ಧಿಯಲ್ಲಿ ಮೂಲ ಸೌಕರ್ಯಗಳು ಸಮರ್ಪಕವಾಗಿ ಉಪಯೋಗವಾದಾಗ ಮಾತ್ರ ಕೆಲಸಗಳು ಸಾರ್ಥಕವಾಗುತ್ತವೆ. ಕಾಮಗಾರಿಯೂ ಉತ್ತಮ ಗುಣಮಟ್ಟದ ನಿರ್ವಹಿಸಿಲು ಹಾಗೂ ಸೂಕ್ತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಮದ್ದೂರು ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ವತಿಯಿಂದ ಕೆ.ಶೆಟ್ಟಹಳ್ಳಿ 25 ಲಕ್ಷ ರು., ಹೊನ್ನಾಯಕನಹಳ್ಳಿಯಲ್ಲಿ 25 ಲಕ್ಷ ರು. ವೆಚ್ಚದಲ್ಲಿ ಗ್ರಾಮ ಪರಿಮಿತಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಗ್ರಾಮಸ್ಥರು ಹದಗೆಟ್ಟ ರಸ್ತೆ ಮತ್ತು ಚರಂಡಿಗಳ ನಿರ್ಮಾಣ ಸಂಬಂಧಿಸಿದಂತೆ ಮನವಿ ಸಲ್ಲಿಸಿದ್ದು, ಇದಕ್ಕೆ ಪೂರಕವಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಹಂತ ಹಂತವಾಗಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ ಎಂದರು.

ಗ್ರಾಮಗಳ ಅಭಿವೃದ್ಧಿಯಲ್ಲಿ ಮೂಲ ಸೌಕರ್ಯಗಳು ಸಮರ್ಪಕವಾಗಿ ಉಪಯೋಗವಾದಾಗ ಮಾತ್ರ ಕೆಲಸಗಳು ಸಾರ್ಥಕವಾಗುತ್ತವೆ. ಕಾಮಗಾರಿಯೂ ಉತ್ತಮ ಗುಣಮಟ್ಟದ ನಿರ್ವಹಿಸಿಲು ಹಾಗೂ ಸೂಕ್ತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.

ಈ ವೇಳೆ ಮನ್ನುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಸವರಾಜು, ಕೆ.ಶೆಟ್ಟಹಳ್ಳಿ ಗ್ರಾಪಂ ಅಧ್ಯಕ್ಷೆ ಸುಧಾ, ಮುಖಂಡರಾದ ಚಂದೂಪುರ ಹರೀಶ್, ಪೂಜಾರಿ ಮಹೇಶ್, ಕೆ.ಶೆಟ್ಟಹಳ್ಳಿ ರಘು, ಹೊನ್ನಾಯಕನಹಳ್ಳಿ ಮಹೇಂದ್ರ, ವಿಜಯಕುಮಾರ್, ಪುನೀತ್, ಹೊನ್ನಲಗೆರೆ ನಂದೀಶ್, ಮಲ್ಲೇಶ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಿಎಪಿಸಿಎಂಎಸ್ ನೂತನ ಅಧ್ಯಕ್ಷ - ಉಪಾಧ್ಯಕ್ಷರು, ನಿರ್ದೇಶಕರಿಗೆ ಅಭಿನಂದನೆ

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕು ಟಿಎಪಿಸಿಎಂಎಸ್‌ನ ನೂತನ ಅಧ್ಯಕ್ಷ, ಉಪಾಧ್ಯಕ್ಷೆ ಹಾಗೂ ನಿರ್ದೇಶಕರನ್ನು ಉದ್ಯಮಿ ಸುಂಕಾ ತೊಣ್ಣೂರು ಶಿವಕುಮಾರ್ ಹಾಗೂ ಕನಗನಮರಡಿ ಸೊಸೈಟಿ ಅಧ್ಯಕ್ಷ ಹೆಗ್ಗಡಹಳ್ಳಿ ಎಚ್.ಜೆ.ರಾಮಕೃಷ್ಣ ಅಭಿಮಾನಿಗಳ ಬಳಗದಿಂದ ಅಭಿನಂದಿಸಲಾಯಿತು.

ತಾಲೂಕಿನ ಚಿಕ್ಕಾಡೆ ಗ್ರಾಮದ ಹೊರವಲಯದಲ್ಲಿ ಅಧ್ಯಕ್ಷ ಚಿಕ್ಕಾಡೆ ಗಿರೀಶ್ ಹಾಗೂ ಉಪಾಧ್ಯಕ್ಷೆ ಕನಗನಮರಡಿ ಪ್ರೇಮ ಪುಟ್ಟೇಗೌಡ ಹಾಗೂ ನಿರ್ದೇಶಕರಾದ ಚಿಕ್ಕಾಡೆ ಕಿರಣ್ ಕುಮಾರ್, ಪಿ.ಎಲ್.ಆದರ್ಶ ಅವರನ್ನು ಅಭಿನಂದಿಸಿದರು.

ಉದ್ಯಮಿ ಶಿವಕುಮಾರ್ ಮಾತನಾಡಿ, ಕ್ಷೇತ್ರದ ಮತದಾರರು ಎಲ್ಲಾ ಆಶೀರ್ವಾದದಿಂದ ಟಿಎಪಿಸಿಎಂಎಸ್ ಗೆ ನೂತನವಾಗಿ ಆಯ್ಕೆಯಾಗಿರುವ ಎಲ್ಲರು ಜತೆಗೂಡಿ ಸಂಘದ ಶ್ರೇಯೋಭಿವೃದ್ದಿಗೆ ಶ್ರಮಿಸುವ ಜತೆಗೂ ಸಂಘವನ್ನು ಅಭಿವೃದ್ಧಿಪಡಿಸಬೇಕು ಎಂದು ಸಲಹೆ ನೀಡಿದರು.

ಕನಗನಮರಡಿ ಸೊಸೈಟಿ ಅಧ್ಯಕ್ಷ ಎಚ್.ಜೆ.ರಾಮಕೃಷ್ಣ ಮಾತನಾಡಿ, ಅಭಿನಂದನೆಯಿಂದ ನಿಮ್ಮೆಲ್ಲರ ಜವಾಬ್ದಾರಿ ಹೆಚ್ಚಿದೆ. ಮುಂದಿನ ದಿನಗಳಲ್ಲಿ ಎಲ್ಲರು ಜತೆಗೂಡಿ ಸಂಘವನ್ನು ಅಭಿವೃದ್ಧಿ ಪಡಿಸುವ ಜತೆಗೆ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಈ ವೇಳೆ ವಿಶ್ವಕರ್ಮ ಸಮುದಾಯದ ಜಿಲ್ಲಾಧ್ಯಕ್ಷ ಹೇಮಂತ್ ಕುಮಾರ್, ಉದ್ಯಮಿ ಸತೀಶ್, ರಮೇಶ್ ಸೇರಿದಂತೆ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಜಪೆ, ಕಿನ್ನಿಗೋಳಿ ಪಟ್ಟಣ ಪಂಚಾಯಿತಿ: ಕಾಂಗ್ರೆಸ್‌-ಬಿಜೆಪಿ ಜಿದ್ದಾಜಿದ್ದಿನ ಹೋರಾಟ
ಜಿಲ್ಲಾಡಳಿತದಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ