ಮುಂಡಗೋಡ: ನ್ಯಾಷನಲ್ ಹೆರಾಲ್ಡ್ ಹಗರಣದ ಆರೋಪಿಗಳಾದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಬಂಧಿಸುವಂತೆ, ಭ್ರಷ್ಟ ಕಾಂಗ್ರೆಸ್ ವಿರುದ್ಧ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಶುಕ್ರವಾರ ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಇಲ್ಲಿಯ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಕಾಂಗ್ರೆಸ್ ವಿರುದ್ದ ಘೋಷಣೆ ಮೊಳಗಿಸುತ್ತಾ ಸಂಚರಿಸಿತು.ಬಳಿಕ ಶಿವಾಜಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಶಿರಸಿ-ಹುಬ್ಬಳ್ಳಿ ಹೆದ್ದಾರಿ ತಡೆ ಮಾಡಿ ಪ್ರತಿಭಟಿಸಲಾಯಿತು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಪ್ರತಿಕೃತಿ ದಹನ ಮಾಡಲಾಯಿತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ಸಿನ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದು, ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಲಾಯಿತು.
ಯುವ ಜಿಲ್ಲಾಧ್ಯಕ್ಷ ಪ್ರೇಮಕುಮಾರ ನಾಯ್ಕ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್, ಶಿವಾಜಿ ನರಸಾನಿ, ಜಿಲ್ಲಾ ಉಪಾಧ್ಯಕ್ಷ ಎಲ್.ಟಿ. ಪಾಟೀಲ್, ಅಶೋಕ ಚಲವಾದಿ, ಸುಬ್ರಾಯ ವಾಳ್ಕೆ, ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ, ಮುಂಡಗೋಡ ಮಂಡಲ ಅಧ್ಯಕ್ಷ ಮಂಜುನಾಥ ಪಾಟೀಲ್, ರಾಜ್ಯ ಎಸ್ಟಿ ಮೋರ್ಚಾ ಕಾರ್ಯದರ್ಶಿ ಸಂತೋಷ ತಳವಾರ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಮೋದ ನಾಯ್ಕ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಮೇಶ ನಾಯ್ಕ, ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಕಾಂತ ಬಳ್ಳಾರಿ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ರವಿಚಂದ್ರ ಶೆಟ್ಟಿ, ನಾಗರಾಜ ಅಂಡಗಿ, ಬಸವರಾಜ ಠಣಕೆದಾರ, ಮಹೇಶ ಹೊಸಕೊಪ್ಪ, ತುಕಾರಾಮ ಇಂಗಳೆ, ವಿಠ್ಠಲ ಬಾಳಂಬೀಡ, ಭರತರಾಜ ಹದಳಗಿ ಉಪಸ್ಥಿತರಿದ್ದರು.ನ್ಯಾಷನಲ್ ಹೆರಾಲ್ಡ್ ಹಗರಣದ ಖಂಡಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಮುಂಡಗೋಡದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.