ಟನ್ ಕಬ್ಬಿಗೆ ₹3500 ದರ ನೀಡುವಂತೆ ಆಗ್ರಹಿಸಿ ತಾಲೂಕಿನ ಹುಲ್ಯಾಳ, ಹಿಪ್ಪರಗಿ ಗ್ರಾಮಗಳಲ್ಲಿ ರೈತರು ಬುಧವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.ಟನ್ ಕಬ್ಬಿಗೆ ₹3500 ದರ ನಿಗದಿ ಪಡಿಸಬೇಕು, ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಟಾವು ಹಾಗೂ ಕಬ್ಬಿನ ಬಿಲ್ ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಜಮಖಂಡಿ
ಟನ್ ಕಬ್ಬಿಗೆ ₹3500 ದರ ನೀಡುವಂತೆ ಆಗ್ರಹಿಸಿ ತಾಲೂಕಿನ ಹುಲ್ಯಾಳ, ಹಿಪ್ಪರಗಿ ಗ್ರಾಮಗಳಲ್ಲಿ ರೈತರು ಬುಧವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.ಟನ್ ಕಬ್ಬಿಗೆ ₹3500 ರೂ ದರ ನಿಗದಿ ಪಡಿಸಬೇಕು, ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಟಾವು ಹಾಗೂ ಕಬ್ಬಿನ ಬಿಲ್ ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು. ಸರ್ಕಾರ ನಿಗದಿ ಪಡಿಸಿರುವ ₹3300 ದರ ನೀಡುವಲ್ಲಿ ಕಾರ್ಖಾನೆ ಮಾಲೀಕರು ಹಿಂದೇಟು ಹಾಕುತ್ತಿದ್ದಾರೆ. ರಿಕವರಿ ವಿಷಯದಲ್ಲಿ ಪಾರದರ್ಶಕತೆ ಇಲ್ಲ. 10.25 ರಿಕವರಿಗೆ ₹3150 ಹಾಗೂ 11.25 ಕ್ಕೆ ₹3300 ನೀಡುವುದಾಗಿ ಹೇಳುತ್ತಿರುವ ಕಾರ್ಖಾನೆ ಮಾಲೀಕರು ರೈತರ ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.
ರಿಕವರಿ ನೆಪ ಹೇಳಿ ಸರ್ಕಾರ ನಿಗದಿ ಪಡಿಸಿದ ₹3300ಗಿಂತಲೂ ಕಡಿಮೆ ದರ ನೀಡುತ್ತಿರುವ ಕಾರ್ಖಾನೆಗಳ ಮಾಲೀಕರ ವಿರುದ್ಧ ಪುನಃ ಹೋರಾಟ ಆರಂಭಿಸಲಾಗಿದೆ ಎಂದು ಹೇಳಿದರು.ಹುಲ್ಯಾಳ, ಮರೆಗುದ್ದಿ, ಹುಣಸಿಕಟ್ಟಿ ಸೇರಿದಂತೆ ವಿವಿಧ ಗ್ರಾಮಗಳ ಕಬ್ಬು ಬೆಳೆಗಾರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.