ನಾಲತವಾಡ, ನಾಗರಬೆಟ್ಟ, ನಾಗಬೇನಾಳದಲ್ಲಿ ರಸ್ತೆ ತಡೆ

KannadaprabhaNewsNetwork |  
Published : Nov 01, 2026, 04:00 AM IST
ರರರರ | Kannada Prabha

ಸಾರಾಂಶ

ಕಬ್ಬು ಬೆಳೆಗಾರರಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ರಾಜ್ಯಾದ್ಯಂತ ರೈತ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ನಾಲತವಾಡ, ನಾಗಬೇನಾಳ ಹಾಗೂ ನಾಗರಬೆಟ್ಟ ಗ್ರಾಮಗಳಲ್ಲಿ ರೈತರು ರಸ್ತೆ ತಡೆ ನಡೆಸುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ನಾಲತವಾಡ

ಕಬ್ಬು ಬೆಳೆಗಾರರಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ರಾಜ್ಯಾದ್ಯಂತ ರೈತ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ನಾಲತವಾಡ, ನಾಗಬೇನಾಳ ಹಾಗೂ ನಾಗರಬೆಟ್ಟ ಗ್ರಾಮಗಳಲ್ಲಿ ರೈತರು ರಸ್ತೆ ತಡೆ ನಡೆಸುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.

ನಾಗರಬೆಟ್ಟ, ನಾಗಬೇನಾಳ ಹಾಗೂ ವೀರೇಶನಗರ ಗ್ರಾಮಗಳ ಪ್ರಮುಖ ರಸ್ತೆಗಳಲ್ಲಿ ರೈತರು ಬೆಳಗ್ಗೆಯಿಂದಲೇ ರಸ್ತೆ ತಡೆ ನಡೆಸಿ ಪ್ರತಿಭಟನೆ ಆರಂಭಿಸಿದರು. ಇದರಿಂದ ಬಸ್‌ಗಳು, ಶಾಲಾ ವಾಹನಗಳು ಸೇರಿದಂತೆ ಖಾಸಗಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬಂತು. ಇದರಿಂದ ಸವಾರರು ತೀವ್ರ ಪರದಾಡುವಂತಾಯಿತು.

ಈ ಸಂದರ್ಭದಲ್ಲಿ ನಾಗರಬೆಟ್ಟ, ನಾಲತವಾಡ ಹಾಗೂ ವೀರೇಶನಗರ ಗ್ರಾಮದ ರೈತ ಮುಖಂಡರು ಮಾತನಾಡಿ, ಬರಗಾಲದ ನಡುವೆಯೂ ಅಲ್ಪಸ್ವಲ್ಪ ನೀರಿನ ನೆರವಿನಿಂದ ಕಬ್ಬು ಬೆಳೆದಿದ್ದೇವೆ. ಆದರೆ ನೀರಿನ ಕೊರತೆಯಿಂದ ಕಬ್ಬಿನ ಇಳುವರಿ ಹಾಗೂ ತೂಕ ಕಡಿಮೆಯಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಕಬ್ಬಿಗೆ ಸೂಕ್ತ ದರ ನೀಡಬೇಕೆಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದರು.

ಕರ್ನಾಟಕ ರೈತ ಸಂಘದ ಅಧ್ಯಕ್ಷ ಚುನಪ್ಪ ಪೂಜಾರಿ ಹಾಗೂ ಗೌರವಾಧ್ಯಕ್ಷ ಶಶಿಕಾಂತ ಗುರುಜಿ ಅವರ ನೇತೃತ್ವದಲ್ಲಿ ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನಾವೂ ಮುಖ್ಯ ರಸ್ತೆಗಳನ್ನು ಬಂದ್ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದೇವೆ. ಕಬ್ಬಿನ ದರ ಹೆಚ್ಚಿಸುವವರೆಗೆ ಹೋರಾಟ ಹಿಂಪಡೆಯುವುದಿಲ್ಲ ಎಂದು ರೈತ ನಾಯಕರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.

ನಾಲತವಾಡದಲ್ಲಿ ಪ್ರತಿಭಟನೆ:ನಾಗರಬೆಟ್ಟ ಹಾಗೂ ನಾಗಬೇನಾಳ ಗ್ರಾಮಗಳಲ್ಲಿ ಬೆಳಗ್ಗೆಯಿಂದಲೇ ರಸ್ತೆ ತಡೆ ಹೋರಾಟ ನಡೆಸಿದರೆ, ನಾಲತವಾಡ ಪಟ್ಟಣದಲ್ಲಿ ಮಧ್ಯಾಹ್ನದಿಂದ ಪ್ರತಿಭಟನೆ ನಡೆಯಿತು. ಪಟ್ಟಣದ ವೀರೇಶ್ವರ ವೃತ್ತದ ಬಳಿ ರೈತರು ಟ್ರ್ಯಾಕ್ಟರ್‌ಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಸಂಚಾರ ತಡೆದು ಹೋರಾಟ ಆರಂಭಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ಹೋಟೆಲ್‌ ಈಜು ಕೊಳದಲ್ಲಿ 2 ವಿದೇಶಿಗರ ಸಾವು
ಪ್ರಜ್ವಲ್‌ ಜೀವಾವಧಿಗೆ ಕಾರಣ ಆದ ಮೂವರಿಗೆ ಕೇಂದ್ರ ಗೃಹ ಪ್ರಶಸ್ತಿ