- ಮಲ್ಪೆ, ಮೊಳಕಾಲ್ಮೂರು ರಾಜ್ಯ ಹೆದ್ದಾರಿ ಅತಿಕ್ರಮಣವಾಗಿದೆ: ಶಾಸಕ ಹೇಳಿಕೆ
ಕನ್ನಡಪ್ರಭ ವಾರ್ತೆ ಜಗಳೂರು
ಪಟ್ಟಣದಲ್ಲಿ ಹಾದುಹೋಗಿರುವ ಮಲ್ಪೆ, ಮೊಳಕಾಲ್ಮೂರು ರಾಜ್ಯ ಹೆದ್ದಾರಿ ಅತಿಕ್ರಮಣವಾಗಿದೆ. ಪಟ್ಟಣದ ರಸ್ತೆ ವಿಸ್ತರಣೆ ಖಚಿತವಾಗಿ ಕಾನೂನಿನ ಪ್ರಕಾರವೇ ಆಗಲಿದೆ. ಅಭಿವೃದ್ಧಿ ವಿಚಾರವಾಗಿ ನನ್ನ ಕತ್ತು ಕುಯ್ದರೂ ನಾನು ರಸ್ತೆ ವಿಸ್ತರಣೆ ಮಾಡಿಯೇ ಸಿದ್ಧ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ವರ್ತಕರ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಚಳ್ಳಕೆರೆ ವೃತ್ತದವರೆಗೆ ರಸ್ತೆ ವಿಸ್ತರಣೆಗೆ ₹20 ಕೋಟಿ ಅನುದಾನ ಬಂದಿದೆ. ಆದರೆ, 63 ವರ್ತಕರು ಅಧಿಕೃತವಾಗಿ ರಸ್ತೆ ವಿಸ್ತರಣೆ ಮಾಡದಂತೆ ಮತ್ತು ಪರಿಹಾರಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎಂದರು.
ನಿಯಮಗಳ ಪ್ರಕಾರ ಭೂ ದಾಖಲೆಗಳನ್ನು ಅಧಿಕೃತವಾಗಿ ಹೊಂದಿರುವ ವರ್ತಕರು ಪರಿಹಾರ ಕೇಳುತ್ತಿದ್ದಾರೆ. ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದಾರೆ. ಅತಿಕ್ರಮಣ ಮಾಡಿಕೊಂಡವರು ಅಡ್ಡಿಪಡಿಸಿದರೆ ಅಧಿಕಾರಿಗಳು ವಾಗ್ವಾದ ಮಾಡಬೇಡಿ. ದಾಖಲೆಗಳ ಸಹಿತ ನನ್ನ ಗಮನಕ್ಕೆ ತನ್ನಿ. ಅಂತಹವರ ವಿರುದ್ಧ ಹೇಗೆ ವರ್ತಿಸಬೇಕು ಎಂಬುದು ನನಗೆ ಗೊತ್ತು. ನನ್ನ ಪ್ರಾಣ ಹೋದರೂ ಅವರ ವಿರುದ್ಧ ಕ್ರಮ ಕಾನೂನು ರೀತಿ ಕ್ರಮ ಕೈಗೊಳ್ಳದೇ ಬಿಡುವುದಿಲ್ಲ ಎಂದು ವರ್ತಕರು ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಎಚ್ಚರಿಕೆ ಸಂದೇಶವನ್ನು ಶಾಸಕರು ರವಾನಿಸಿದರು.
ಸಭೆಯಲ್ಲಿ ಪಿಡಬ್ಯ್ಲೂಡಿ ಎಇ ಪುರುಷೋತ್ತಮ ರೆಡ್ಡಿ ಹೈಕೋರ್ಟ್ ಆದೇಶದ ಪ್ರತಿಯಲ್ಲಿದ್ದ ಮಾಹಿತಿಯನ್ನು ಸಭೆ ಗಮನಕ್ಕೆ ತಂದರು. ಪ.ಪಂ. ಚೀಫ್ ಆಫೀಸರ್ ಲೋಕ್ಯಾನಾಯ್ಕ್, ವರ್ತಕರು ಅತಿಕ್ರಮಿಸಿಕೊಂಡ ಸರ್ಕಾರಿ ಜಾಗದ ಬಗ್ಗೆ ವಿವರಿಸಿದರು. ಮಾಜಿ ಜಿಪಂ ಸದಸ್ಯ ಕೆ.ಪಿ.ಪಾಲಯ್ಯ, ಮಧು, ಇದ್ದರು.
(ಬಾಕ್ಸ್) * 69 ಅಡಿ ಬೇಡ, 50 ಅಡಿವರೆಗೆ ರಸ್ತೆ ವಿಸ್ತರಣೆ ಮಾಡಿ
- - -
ಜಗಳೂರು ಪಟ್ಟಣದಲ್ಲಿ ಹಾದುಹೋಗಿರುವ ಮಲ್ಪೆ-ಮೊಳಕಾಲ್ಮೂರು ರಾಜ್ಯ ಹೆದ್ದಾರಿ ವಿಸ್ತರಣೆ ಕುರಿತು ಶಾಸಕ ಬಿ.ದೇವೇಂದ್ರಪ್ಪ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.