ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಸ್ತೆ ಸುರಕ್ಷತಾ ಕಾರ್ಯಕ್ರಮದ ನಿಮಿತ್ತ ಸರ್ವೋಚ್ಚ ನ್ಯಾಯಾಲಯದ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದಂತೆ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆ, ಲೋಕೋಪಯೋಗಿ, ಪೊಲೀಸ್ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ರಸ್ತೆ ಅಪಘಾತದಲ್ಲಿ ರಾಜ್ಯದ ಅಂಕಿ-ಸಂಖ್ಯೆ ಅವಲೋಕನ ಮಾಡಿದಾಗ ರಾಜ್ಯದಲ್ಲಿ ಪ್ರಸಕ್ತ ವರ್ಷ ಮೊದಲ 6 ತಿಂಗಳಲ್ಲಿ 21937 ರಸ್ತೆ ಅಪಘಾತಗಳು ನಡೆದು, 5975 ಸಾವು ಸಂಭವಿಸಿವೆ. 27,456 ಹೆಚ್ಚಿನ ಪ್ರಮಾಣದಲ್ಲಿ ಗಾಯಗಳಾಗಿವೆ. ಅಪಘಾತ ಸಂಖ್ಯೆ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಅರಿವು ಮೂಡಿಸುವ ನಿಟ್ಟಿನಲ್ಲಿ ಒಂದು ತಿಂಗಳ ಕಾಲ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.ಅಪಘಾತಗಳು ವೇಗವಾಗಿ ಹೋಗುವುದು, ಕುಡಿದು ವಾಹನ ಚಲಾಯಿಸುವುದು, ರಸ್ತೆ ನಿಯಮ ಪಾಲನೆ, ಹೆಲ್ಮೆಟ್ ಧರಿಸದೇ ಇರುವುದು ಸೇರಿ ಇತರೆ ಕಾರಣಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಅಪಘಾತ ತಡೆಯುವ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಲು ಅಭಿಯಾನ ರೂಪದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಮಾಸಾಚರಣೆ ಅವಧಿಯಲ್ಲಿ ಪರಿಣಾಮಕಾರಿ ಪ್ರವರ್ತನ ಚಟುವಟಿಕೆ ಕೈಗೊಳ್ಳಲಾಗುತ್ತದೆ. ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲು ಕಾರ್ಯಾಗಾರ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಶಿಬಿರ, ಸೇಫ್ಟಿ ಹಾರ್ನ್ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಪ್ರಬಂಧ ರಚನೆ, ಕಿರು ನಾಟಕ, ಚಿತ್ರಕಲಾ ಸ್ಪರ್ಧೆ, ಸಾಮಾಜಿಕ ಜಾಲತಾಣದಲ್ಲಿ ರಸ್ತೆ ಸುರಕ್ಷತೆಯ ಸ್ಲೋಗನ್‌ಗಳ ಪ್ರದರ್ಶನ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಸುದ್ದಿಗೊಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಇದ್ದರು.