ನರಸಿಂಹರಾಜಪುರ: ರಸ್ತೆ ಅಗಲೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 60 ಕೋಟಿ ರುಪಾಯಿ ಮಂಜೂರು ಮಾಡಿದ್ದು ರಸ್ತೆ ಅಗಲೀಕರಣ ಕಾಮಗಾರಿಗೆ ಪಟ್ಟಣ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಮನವಿ ಮಾಡಿದರು.
ವರ್ತಕರ ಸಂಘದ ಅಧ್ಯಕ್ಷ ಜಗದೀಶ್ ಮಾತನಾಡಿ, ವರ್ತಕರ ಬಹಳ ದಿನಗಳ ಬೇಡಿಕೆ ಈಡೇರಿದೆ.ಜನರ ಭಾವನೆಗೆ ಸ್ಪಂದಿಸಿ ಮುಖ್ಯಮಂತ್ರಿಗಳಿಂದ ರಸ್ತೆ ಅಗಲೀಕರಣಕ್ಕಾಗಿ 60 ಕೋಟಿ ರುಪಾಯಿ ಮಂಜೂರು ಮಾಡಿಸಿಕೊಂಡಿರುವುದಕ್ಕೆ ವರ್ತಕರ ಸಂಘದಿಂದ ಕೃತಜ್ಞತೆ ತಿಳಿಸುತ್ತೇವೆ ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತಶೆಟ್ಟಿ, ಉಪಾಧ್ಯಕ್ಷೆ ಉಮಾ, ಸದಸ್ಯರಾದ ಮನೋಹರ್ ಪಾಷಾ, ವಸೀಂ, ಮುಕಂದ, ಸುರೈಯಾ ಭಾನು, ಸೋಜ,ಕುಮಾರಸ್ವಾಮಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್, ರೆವಿನ್ಯೂ ಇನ್‌ಸ್ಪೆಕ್ಟರ್ ವಿಜಯಕುಮಾರ್, ಪಟ್ಟಣದ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಪಿ.ಆರ್.ಸದಾಶಿವ,ಲಕ್ಷ್ಮಣಶೆಟ್ಟಿ, ಮುಖಂಡರಾದ ಮಾಳೂರು ದಿಣ್ಣೆ ರಮೇಶ್, ನಾರಾಯಣಮೂರ್ತಿ, ವರ್ಥಕರ ಸಂಘದ ಖಜಾಂಚಿ ವಾಸಪ್ಪಗೌಡ ಇದ್ದರು.ಪಟ್ಟಣ ಪಂಚಾಯಿತಿ ಸದಸ್ಯರು ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಅವರನ್ನು ಗೌರವಿಸಿದರು.ನಂತರ ಪಟ್ಟಣ ಪಂಚಾಯಿತಿ ಸದಸ್ಯರು, ಮುಖಂಡರು ಹೊಸದಾಗಿ ನಿರ್ಮಾಣವಾಗುತ್ತಿರುವ ಹೊನ್ನೇಕೊಡಿಗೆ ಸಂಪರ್ಕ ಸೇತುವೆಗೆ ಬೇಟಿ ನೀಡಿ ವೀಕ್ಷಣೆ ಮಾಡಿದರು.