ದೇವಲಾಪುರ ವ್ಯಾಪ್ತಿಯ ಗ್ರಾಮಗಳ ರಸ್ತೆ ಕೆಲಸಗಳು ಪೂರ್ಣ: ಚಲುವರಾಯಸ್ವಾಮಿ

KannadaprabhaNewsNetwork |  
Published : Mar 09, 2026, 01:45 AM IST
8ಕೆಎಂಎನ್ ಡಿ14 | Kannada Prabha

ಸಾರಾಂಶ

ಒಂದು ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಒಂದು ಅವಧಿಯಲ್ಲಿಯೇ ಪೂರ್ಣಗೊಳಿಸುತ್ತಿರುವುದು ರಾಜ್ಯದಲ್ಲಿಯೇ ಮೊದಲು. ಇಷ್ಟೆಲ್ಲಾ ಅಭಿವೃದ್ಧಿ ಕೆಲಸಗಳು ಮುಗಿದ ನಂತರ ಜನರ ಪ್ರೀತಿ ವಿಶ್ವಾಸ ಹೇಗಿರುತ್ತದೆ ಎಂಬುದನ್ನು ನೋಡಬೇಕಿದೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ಮುಂದಿನ ಒಂದು ವರ್ಷದಲ್ಲಿ ದೇವಲಾಪುರ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ರಸ್ತೆ ಅಭಿವೃದ್ಧಿ ಕೆಲಸಗಳು ಪೂರ್ಣಗೊಳ್ಳಲಿವೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ದೇವಲಾಪುರ ಗ್ರಾಪಂ ವ್ಯಾಪ್ತಿಯ ಅರಕೆರೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ, ತಾಲೂಕು ಪಂಚಾಯ್ತಿ ಹಾಗೂ ಸ್ಥಳೀಯ ಗ್ರಾಪಂನ ಅನುದಾನದಲ್ಲಿ ನಿರ್ಮಾಣಗೊಂಡಿರುವ 15 ಲಕ್ಷ ರು. ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಬಳಿಕ ಅರಕೆರೆಯಿಂದ ಶೆಟ್ಟಹಳ್ಳಿ ಮತ್ತು ತಿಬ್ಬನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ 4.95 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಒಂದು ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಒಂದು ಅವಧಿಯಲ್ಲಿಯೇ ಪೂರ್ಣಗೊಳಿಸುತ್ತಿರುವುದು ರಾಜ್ಯದಲ್ಲಿಯೇ ಮೊದಲು. ಇಷ್ಟೆಲ್ಲಾ ಅಭಿವೃದ್ಧಿ ಕೆಲಸಗಳು ಮುಗಿದ ನಂತರ ಜನರ ಪ್ರೀತಿ ವಿಶ್ವಾಸ ಹೇಗಿರುತ್ತದೆ ಎಂಬುದನ್ನು ನೋಡಬೇಕಿದೆ ಎಂದರು.

ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಗ್ರಾಮೀಣ ಪ್ರದೇಶದ ಜನರಿಗೆ ಕುಡಿವ ನೀರು, ರಸ್ತೆ ಚರಂಡಿಯಂತಹ ಮೂಲ ಸೌಕರ್ಯಗಳೂ ಸೇರಿದಂತೆ ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಅದ್ಯತೆ ನೀಡುತ್ತಿದೆ. ಜನರು ಇದನ್ನು ಅರ್ಥೈಸಿಕೊಳ್ಳಬೇಕು ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಹಲವು ರೀತಿಯ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಜನರ ಹಿತಕಾಯುವ ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಈ ವೇಳೆ ತಹಸೀಲ್ದಾರ್ ಜಿ.ಆದರ್ಶ, ತಾಪಂ ಇಒ ಸತೀಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಜಿಲ್ಲಾ ನಿರ್ದೇಶಕಿ ಚೇತನ, ತಾಲೂಕು ಯೋಜನಾಧಿಕಾರಿ ದಿವಾಕರ್, ಮೇಲ್ವಿಚಾರಕ ಪುನಿತ್, ಶಶಿಕಿರಣ್, ಎಎಂಸಿ ಕಂಪನಿಯ ಮೂರ್ತಿ, ಚಲನಚಿತ್ರ ನಿರ್ಮಾಪಕ ಮಾವಿನಕೆರೆ ಸುರೇಶ್, ಮುಖಂಡರಾದ ರಾಜೇಶ್, ನಂದಿರಮೇಶ್, ಕೊಣನೂರು ಹನುಮಂತು, ತಿಬ್ಬನಹಳ್ಳಿ ರಮೇಶ್, ಡಿ.ಕೆ.ಸುರೇಶ್, ವೆಂಕಟೇಶ್ ಸೇರಿದಂತೆ ಹೇಮಾವತಿ ಇಲಾಖೆ ಅಧಿಕಾರಿಗಳು, ಸಂಸ್ಥೆ ಸೇವಾ ಪ್ರತಿನಿಧಿಗಳು ಮತ್ತು ಪ್ರಗತಿಬಂಧು ಸ್ವಹಾಯ ಸಂಘದ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಟಿಪ್ಪರ್‌
ಗಡಿನಾಡು ಬೆಳಗಾವಿ ಕನ್ನಡಿಗರ ದೊಡ್ಡ ಅಸ್ಮಿತೆ