ರೈತ ಸಂಘದಿಂದ ೨೬ರಂದು ರಸ್ತೆತಡೆ

KannadaprabhaNewsNetwork |  
Published : Jan 23, 2025, 12:47 AM IST
22ಎಚ್ಎಸ್ಎನ್11 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರಸೇನೆ ಕಾರ್ಯಕರ್ತರು ಪತ್ರಿಕೆಯೊಂದಿಗೆ ಮಾತನಾಡಿದರು.  | Kannada Prabha

ಸಾರಾಂಶ

ಹಳೇಬೀಡು ಹೋಬಳಿ ಐದಳ್ಳ ಕಾವಲು ಸರ್ವೆ ನಂ. ೧ರ ೨೬೮೦ ಎಕರೆ ಭೂಮಿಗೆಂದು ಅರ್ಜಿ ಸಲ್ಲಿಸಿದ ರೈತರಿಗೆ ನೀಡುವುದು ಸೇರಿದಂತೆ ೪೦ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಜನವರಿ ೨೬ ರಂದು ಬೇಲೂರಿಗೆ ಬೃಹತ್ ಪಾದಯಾತ್ರೆ ಮೂಲಕ ಆಗಮಿಸಿ ಹಾಸನ-ಚಿಕ್ಕಮಗಳೂರು ರಸ್ತೆತಡೆದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಷ್ಟ್ರೀಯ ಸಂಚಾಲಕ ಕನಕಂಚೇನಹಳ್ಳಿ ಪಟೇಲ್ ಪ್ರಸನ್ನ ಕುಮಾರ್ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರಮುಖಬೀದಿಯಲ್ಲಿ ಬೃಹತ್ ಮೆರವಣಿಗೆ ನಡೆಸಿ ಅಂದಿನ ಗಣರಾಜ್ಯೋತ್ಸವದ ಅಂಗವಾಗಿ ಭಾರತಾಂಬೆ ಮತ್ತು ಅಂಬೇಡ್ಕರ್‌ ಭಾವಚಿತ್ರದೊಂದಿಗೆ ರಸ್ತೆತಡೆ ಚಳವಳಿ ನಡೆಸಲು ಮುಂದಾಗುವುದಾಗಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೇಲೂರು

ಹಳೇಬೀಡು ಹೋಬಳಿ ಐದಳ್ಳ ಕಾವಲು ಸರ್ವೆ ನಂ. ೧ರ ೨೬೮೦ ಎಕರೆ ಭೂಮಿಗೆಂದು ಅರ್ಜಿ ಸಲ್ಲಿಸಿದ ರೈತರಿಗೆ ನೀಡುವುದು ಸೇರಿದಂತೆ ೪೦ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಜನವರಿ ೨೬ ರಂದು ಬೇಲೂರಿಗೆ ಬೃಹತ್ ಪಾದಯಾತ್ರೆ ಮೂಲಕ ಆಗಮಿಸಿ ಹಾಸನ-ಚಿಕ್ಕಮಗಳೂರು ರಸ್ತೆತಡೆದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಷ್ಟ್ರೀಯ ಸಂಚಾಲಕ ಕನಕಂಚೇನಹಳ್ಳಿ ಪಟೇಲ್ ಪ್ರಸನ್ನ ಕುಮಾರ್ ಎಚ್ಚರಿಕೆ ನೀಡಿದರು.

ಪಟ್ಟಣದ ಪ್ರವಾಸಿಮಂದಿರದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು ಐದಳ್ಳ ಕಾವಲು ಭೂಮಿ ನ್ಯಾಯಬದ್ಧವಾಗಿ ಅನ್ನದಾತರಿಗೆ ನೀಡಬೇಕು ಎಂಬ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತಸಂಘ ರಾಷ್ಟ್ರಪತಿಗಳು ಸೇರಿದಂತೆ ಎಲ್ಲಾ ಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು ಅವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ. ಆದರೆ ಸ್ಥಳೀಯ ಮಟ್ಟದ ಇಲಾಖೆ ಮಾತ್ರ ಇನ್ನೂ ಮೀನಾಮೇಷ ಎಣಿಸುತ್ತಿದೆ. ಈಗಾಗಲೇ ಸಕಲೇಶಪುರ ಉಪವಿಭಾಗಧಿಕಾರಿಗಳು ಮತ್ತು ಬೇಲೂರು ತಹಸೀಲ್ದಾರ್‌ ಅವರಿಗೆ ಬೃಹತ್ ಪಾದಯಾತ್ರೆ ಮೂಲಕ ಮನವಿ ಸಲ್ಲಿಸಿದೆ. ಪಟ್ಟಣದ ಪ್ರಮುಖಬೀದಿಯಲ್ಲಿ ಬೃಹತ್ ಮೆರವಣಿಗೆ ನಡೆಸಿ ಅಂದಿನ ಗಣರಾಜ್ಯೋತ್ಸವದ ಅಂಗವಾಗಿ ಭಾರತಾಂಬೆ ಮತ್ತು ಅಂಬೇಡ್ಕರ್‌ ಭಾವಚಿತ್ರದೊಂದಿಗೆ ರಸ್ತೆತಡೆ ಚಳವಳಿ ನಡೆಸಲು ಮುಂದಾಗುವುದಾಗಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ
ಹಸೆಮಣೆ ಏರಬೇಕಿದ್ದ ಬಾಲ್ಯದ ಗೆಳತಿಯರು ಬೆಂಕಿಯಲ್ಲಿ ಭಸ್ಮ!