-ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ಬಿಜೆಪಿ, ವಿಶ್ವಹಿಂದೂ ಪರಿಷತ್, ಭಜರಂಗದಳದಿಂದ ರಸ್ತೆ ತಡೆ, ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಸಾಗರ
ಮಂಗಳೂರಿನ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಸಂಜೆ ಬಿಜೆಪಿ, ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಶಿವಪ್ಪನಾಯಕ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಲಾಯಿತು.ಪ್ರತಿಭಟನೆಯಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹೆಚ್.ಹಾಲಪ್ಪ ಮಾತನಾಡಿ, ಹಾಡುಹಗಲೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಮುಸ್ಲಿಂ ಜಿಹಾದಿಗಳ ಕೃತ್ಯ ಖಂಡನೀಯ. ಸುಹಾಸ್ ಶೆಟ್ಟಿ ಅವರ ಹತ್ಯೆ ಮಾಡಿದವರನ್ನು ಬಂಧಿಸಿ ಠಾಣೆಯಲ್ಲಿರಿಸಿ ರಾಜಾತಿಥ್ಯ ಕೊಡುವುದು ಬೇಡ. ಹತ್ಯೆಕೋರರನ್ನು ಕಂಡಲ್ಲಿ ಗುಂಡಿಕ್ಕಿ ಕೊಲ್ಲಿ, ಹಿಂದೂಗಳ ಹತ್ಯೆ ಹೆಚ್ಚುತ್ತಿರುವ ಕಾಲಘಟ್ಟದಲ್ಲಿ ಪೊಲೀಸರ ಕೈಗೆ ಬಂದೂಕು ಕೊಟ್ಟಿರುವುದು ಅಲಂಕಾರಕ್ಕಲ್ಲ. ಹತ್ಯೆ ಮಾಡಿದವರನ್ನು ನಿರ್ಧಾಕ್ಷಿಣ್ಯವಾಗಿ ಸಾಯಿಸುವ ಮೂಲಕ ಇಂತಹ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳಿ. ಸಾರ್ವಜನಿಕವಾಗಿ ಕ್ರೌರ್ಯ ಮೆರೆಯುವವರು, ದೇಶವನ್ನು ಒಡೆಯುವವರನ್ನು ಹುಡುಕಿಕೊಂಡು ಹೋಗಿ ಗುಂಡಿಕ್ಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ ಮಾತನಾಡಿ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಿರುವ ಜಿಹಾದಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.
ರಸ್ತೆ ತಡೆ ಪ್ರತಿಭಟನೆಯಲ್ಲಿ ಹೆಚ್.ಹಾಲಪ್ಪ ಮಾತನಾಡಿದರು