ತರೀಕೆರೆ: ಲಿಂಗದಹಳ್ಳಿ ಹೋಬಳಿಯಾದ್ಯಂತ ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ಲಿಂಗದಹಳ್ಳಿಯಿಂದ ಕೆಮ್ಮಣ್ಣುಗುಂಡಿ ಗಿರಿಧಾಮಕ್ಕೆ ಸಂಪರ್ಕ ಕಲ್ಪಿಸುವ ಲೋಕೋಪಯೋಗಿ ಇಲಾಖಾ ರಸ್ತೆ ಮೇಲೆ ಕೆಸರು ನೀರು ಹರಿಯುತ್ತಿದೆ.
ಸಂಬಂಧಟ್ಟ ಇಲಾಖಾ ಅಧಿಕಾರಿಗಳು ಕೂಡಲೇ ಜಮೀನುಗಳಿಗೆ ತೆರಳಿ ಅಡಕೆ ಸೇರಿದಂತೆ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ತಿಗಡ ಗ್ರಾಮ ಪಂಚಾಯಿತಿ ಸದಸ್ಯ ತಣಿಗೆಬೈಲು ರಮೇಶ್ ಗೋವಿಂದೇಗೌಡ ಮನವಿ ಮಾಡಿದ್ದಾರೆ.-ಬಾಕ್ಸ್--
ಶೃಂಗೇರಿ ನಿಲ್ಲದ ಮಳೆ: ಕೃಷಿಕರಲ್ಲಿ ಆತಂಕಶೃಂಗೇರಿ: ತಾಲೂಕಿನಾದ್ಯಂತ ಕಳೆದ ಕೆಲ ದಿನಗಳಿಂದ ಹಿಂಗಾರು ಮಳೆ ಸುರಿಯುತ್ತಿದ್ದು ಶುಕ್ರವಾರವೂ ತಾಲೂಕಿನೆಲ್ಲೆಡೆ ಎಡೆಬಿಡದೆ ಮಳೆಯಾಗಿದೆ.ಗುರುವಾರ ಶೃಂಗೇರಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದ ವಿವಿಧೆಡೆ ಉತ್ತಮ ಮಳೆಯಾದರೂ ನೆಮ್ಮಾರು, ಕೆರೆಕಟ್ಟೆ ಸುತ್ತಮುತ್ತಲ ಪ್ರದೇಶಗಳಲ್ಲೂ ಗಾಳಿ ಸಹಿತ ರಾತ್ರಿಯಿಡೀ ಮಳೆ ಬಂದಿದೆ.ಶಕ್ರವಾರ ಬೆಳಿಗ್ಗೆಯಿಂದಲೂ ಮುಂದುವರಿದ ಮಳೆ ಮಧ್ಯಾಹ್ನದ ವರೆಗೆ ಸುರಿಯಿತು. ಸತತ ಮಳೆ ಸುರಿಯುತ್ತಿರುವುದರಿಂದ ತುಂಗಾ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ದೀಪಾವಳಿಯ ಮೂರ್ನಾಲ್ಕು ದಿನಗಳಲ್ಲಿ ಬಿಡುವು ನೀಡದ ಮಳೆ, ಈಗ ಅಡಕೆ ಕೊಯಿಲಿಗೂ ಅಡ್ಡಿಯಾಗುತ್ತಿದೆ. ಅಡಕೆ, ಕಾಳು ಮೆಣಸು, ಕಾಫಿ ಬೆಳೆಗಳಿಗೆ ಕೊಳೆ ರೋಗ ತಗುಲಿದ್ದು ರೈತರಲ್ಲಿ ಆತಂಕ ಹೆಚ್ಚಿಸಿದೆ. ಅಳಿದುಳಿದ ಫಸಲುಗಳು ರೈತರ ಕೈಸೇರಲು ಬಿಡದೇ ಅಡ್ಡಿಯಾಗಿದೆ. ಮಳೆಯಿಂದ ತೋಟಗಳಲ್ಲಿ ವ್ಯಾಪಕ ಹಾನಿಯಾಗುತ್ತಿದೆ.24ಕೆಟಿಆರ್.ಕೆ.4ಃಲಿಂಗದಹಳ್ಳಿಯಿಂದ ಕೆಮ್ಮಣ್ಣುಗುಂಡಿಗೆ ಸಂಪರ್ಕ ಕಲ್ಪಿಸುವ ಲೋಕೋಪಯೋಗಿ ಇಲಾಖಾ ರಸ್ತೆಯ ಮೇಲೆ ಮಳೆ ನೀರು ನಿಂತಿರುವುದು. 24ಕೆಟಿಆರ್.ಕೆ.5ಃ