ರಸ್ತೆಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಅಭಿವೃದ್ಧಿ ಪಡಿಸಬೇಕು: ಸಚಿವ ಚಲುವರಾಯಸ್ವಾಮಿ

KannadaprabhaNewsNetwork |  
Published : Jul 15, 2025, 11:45 PM IST
15ಕೆಎಂಎನ್ ಡಿ14 | Kannada Prabha

ಸಾರಾಂಶ

ಆದಿಚುಂಚನಗಿರಿ ಶ್ರೀಮಠಕ್ಕೆ ಪ್ರತಿನಿತ್ಯ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಾರೆ. ಇಂತಹ ಧಾರ್ಮಿಕ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮತ್ತು ಚರಂಡಿ ವ್ಯವಸ್ಥೆ ಉತ್ತಮವಾಗಿರಬೇಕೆಂಬ ಉದ್ದೇಶದಿಂದ 1ಕೋಟಿ ರು. ವೆಚ್ಚದಲ್ಲಿ ಮರುಡಾಂಬಕರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ಗ್ರಾಮೀಣ ಪ್ರದೇಶದ ರಸ್ತೆಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಿದರೆ ಜನರಿಗೆ ಬಹಳಷ್ಟು ಅನುಕೂಲವಾಗುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಕ್ಕದಿಂದ ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿವರೆಗೆ ಲೋಕೋಪಯೋಗಿ ಇಲಾಖೆಯ 1 ಕೋಟಿ ರು. ವೆಚ್ಚದ ರಸ್ತೆ ಮರುಡಾಂಬರೀಕರಣ ಕಾಮಗಾರಿಗೆ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಅವರ ಜೊತೆಗೂಡಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಆದಿಚುಂಚನಗಿರಿ ಶ್ರೀಮಠಕ್ಕೆ ಪ್ರತಿನಿತ್ಯ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಾರೆ. ಇಂತಹ ಧಾರ್ಮಿಕ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮತ್ತು ಚರಂಡಿ ವ್ಯವಸ್ಥೆ ಉತ್ತಮವಾಗಿರಬೇಕೆಂಬ ಉದ್ದೇಶದಿಂದ 1ಕೋಟಿ ರು. ವೆಚ್ಚದಲ್ಲಿ ಮರುಡಾಂಬಕರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.

ಯಾವುದೇ ಕಾಮಗಾರಿಯಾಗಲಿ ದೀರ್ಘಕಾಲ ಬಾಳಿಕೆ ಬರುವಂತೆ ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಬಹಳ ಎಚ್ಚರಿಕೆ ವಹಿಸಿ ಕೆಲಸ ಮಾಡಬೇಕು. ಕಳಪೆ ಗುಣಮಟ್ಟ ಕಂಡುಬಂದಲ್ಲಿ ಸಹಿಸುವುದಿಲ್ಲ. ಮುಂದಿನ ಎರಡು ವರ್ಷದಲ್ಲಿ ತಾಲೂಕಿನ ಹಲವೆಡೆ ಶಿಥಿಲಗೊಂಡಿರುವ ಬಹುತೇಕ ರಸ್ತೆಗಳನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದರು.

ಈ ಮಾರ್ಗದಲ್ಲಿ ಮರುಡಾಂಬರೀಕರಣದ ಜೊತೆಗೆ ಎರಡೂ ಬದಿಯಲ್ಲಿ ಹೊಸದಾಗಿ ಚರಂಡಿ ನಿರ್ಮಾಣವಾಗಬೇಕೆಂದು ಪ್ರಸನ್ನನಾಥ ಸ್ವಾಮೀಜಿ ಸಚಿವರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಶೀಘ್ರದಲ್ಲಿಯೇ ರಸ್ತೆಬದಿಯಲ್ಲಿ ಚರಂಡಿ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸುವಂತೆ ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಸಚಿವರ ಪುತ್ರ ಸಚ್ಚಿನ್ ಚಲುವರಾಯಸ್ವಾಮಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲೀಗೌಡ, ಲೋಕೋಪಯೋಗಿ ಇಲಾಖೆಯ ಎಇಇ ನಿಂಗರಾಜು, ಎಇ ಇಮ್ರನ್‌ಖಾನ್, ಮುಖಂಡರಾದ ತಿಮ್ಮರಾಯಿಗೌಡ, ಅಲ್ಪಹಳ್ಳಿ ಡಿ.ಕೃಷ್ಣೇಗೌಡ, ಕೆ.ವಿ.ದಿನೇಶ್, ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.

PREV

Latest Stories

ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಸಂಸ್ಕಾರ ಅಗತ್ಯ
ಕುಮ್ಕಿ ಹಕ್ಕು ರದ್ದುಪಡಿಸಿ ದಲಿತರಿಗೆ ಹಂಚಿ: ಶ್ಯಾಮರಾಜ್‌ ಬಿರ್ತಿ ಆಗ್ರಹ
ದಲಿತರನ್ನು ಭೂಮಿ ಹಕ್ಕಿನಿಂದ ಹೊರಗಟ್ಟಲು ಕುತಂತ್ರ