ಮೊಣಕಾಲು ಕೀಲು ಬದಲಾವಣೆಗೆ ರೋಬೋಟ್ ಶಸ್ತ್ರಚಿಕಿತ್ಸೆ

KannadaprabhaNewsNetwork |  
Published : Nov 13, 2026, 03:00 AM IST
12ವ್ದವ,ದವಚದದಸ, | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಚಿಕ್ಕೋಡಿಗ್ರಾಮೀಣ ಭಾಗದ ರೋಗಿಗಳಿಗೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಚಿಕ್ಕೋಡಿಯ ಕೆಎಲ್‌ಇ ಡಾ.ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ರೋಬೋಟ್ ನೆರವಿನಿಂದ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ದೊಡ್ಡ ನಗರಗಳಲ್ಲಷ್ಟೇ ಲಭ್ಯವಿದ್ದ ಈ ಆಧುನಿಕ ಚಿಕಿತ್ಸಾ ಸೌಲಭ್ಯ ಚಿಕ್ಕೋಡಿಯಲ್ಲಿಯೇ ಆರಂಭವಾಗಿರುವುದು ಈ ಭಾಗದ ರೋಗಿಗಳಿಗೆ ವರದಾನವಾಗಲಿದೆ ಎಂದು ಕೆಎಲ್‌ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ಗ್ರಾಮೀಣ ಭಾಗದ ರೋಗಿಗಳಿಗೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಚಿಕ್ಕೋಡಿಯ ಕೆಎಲ್‌ಇ ಡಾ.ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ರೋಬೋಟ್ ನೆರವಿನಿಂದ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ದೊಡ್ಡ ನಗರಗಳಲ್ಲಷ್ಟೇ ಲಭ್ಯವಿದ್ದ ಈ ಆಧುನಿಕ ಚಿಕಿತ್ಸಾ ಸೌಲಭ್ಯ ಚಿಕ್ಕೋಡಿಯಲ್ಲಿಯೇ ಆರಂಭವಾಗಿರುವುದು ಈ ಭಾಗದ ರೋಗಿಗಳಿಗೆ ವರದಾನವಾಗಲಿದೆ ಎಂದು ಕೆಎಲ್‌ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.

ಚಿಕ್ಕೋಡಿ ಕೆಎಲ್‌ಇ ಆಸ್ಪತ್ರೆಯಲ್ಲಿ ನಡೆದ ಶಸ್ತ್ರಚಿಕಿತ್ಸೆಗಳ ಕುರಿತು ಮಾಹಿತಿ ನೀಡಿದ ಅವರು, 2016ರಲ್ಲಿ ಚಿಕ್ಕೋಡಿಯಲ್ಲಿ ಆಸ್ಪತ್ರೆ ಆರಂಭಿಸಿದಾಗ ಗ್ರಾಮೀಣ ಪ್ರದೇಶವಾಗಿದ್ದರಿಂದ ತಜ್ಞ ವೈದ್ಯರ ಲಭ್ಯತೆ ಸವಾಲಾಗಿತ್ತು. ಆದರೆ, ಇಂದು ವಿವಿಧ ವಿಭಾಗಗಳ ತಜ್ಞ ವೈದ್ಯರು ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅದರಲ್ಲೂ ಈ ಭಾಗದ ಉನ್ನತ ಶಿಕ್ಷಣ ಪಡೆದ ತಜ್ಞ ವೈದ್ಯರೇ ಸ್ಥಳೀಯವಾಗಿ ಸೇವೆ ನೀಡುತ್ತಿರುವುದು ಸಂತಸದ ಸಂಗತಿ ಎಂದರು.

ಮೂಳೆ ಮತ್ತು ಕೀಲು ತಜ್ಞ ಡಾ.ಮುರುಗೇಶ ಕುರಣೆ ಮಾತನಾಡಿ, ಚಿಕ್ಕೋಡಿ ಭಾಗದಲ್ಲಿ ಇದೇ ಮೊದಲ ಬಾರಿಗೆ ರೋಬೋಟ್ ನೆರವಿನಿಂದ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಸ್ತ್ರಚಿಕಿತ್ಸೆ ಬಳಿಕ ಕೇವಲ 2 ದಿನಗಳಲ್ಲಿ ರೋಗಿಗಳು ಸಹಜವಾಗಿ ನಡೆಯುವಂತಾಗಿ ಮನೆಗೆ ತೆರಳುತ್ತಿದ್ದಾರೆ. ಇಂತಹ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯವನ್ನು ಚಿಕ್ಕೋಡಿಗೆ ಒದಗಿಸಿದ ಡಾ.ಪ್ರಭಾಕರ ಕೋರೆ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ.ಜಾಲಿ ಮಾತನಾಡಿ, ಆಸ್ಪತ್ರೆಯಲ್ಲಿ ಈಗಾಗಲೇ ವಿವಿಧ ರೀತಿಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವುದರ ಜತೆಗೆ ಇನ್ನಷ್ಟು ಬಗೆಯ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿಯೇ ನಡೆಸಲು ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು. ಇದರಿಂದ ರೋಗಿಗಳು ಶಸ್ತ್ರಚಿಕಿತ್ಸೆಗಾಗಿ ಬೆಳಗಾವಿ ಸೇರಿದಂತೆ ದೂರದ ನಗರಗಳಿಗೆ ತೆರಳುವ ಅನಿವಾರ್ಯತೆ ತಪ್ಪಲಿದೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಬಿ.ಆರ್.ಪಾಟೀಲ, ಡಾ.ಅಭಿಷೇಕ ರಾಯಕರ, ಡಾ.ಶಂಕರ ತೋರಸೆ, ಪ್ರಭಾವತಿ ಮುಗಳಖೋಡ ಸೇರಿದಂತೆ ರೋಗಿಗಳು ಹಾಗೂ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆ
ಚಲ್ಲಘಟ್ಟ ಮೆಟ್ರೋ ಡಿಪೋ ಬಳಿ ಅಂಡರ್‌ಪಾಸ್‌