ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ

KannadaprabhaNewsNetwork |  
Published : Nov 06, 2026, 02:45 AM IST
ಬೆಂಗಳೂರಿನಲ್ಲಿ ರೋಹನ್‌ ಕಾರ್ಪೊರೇಶನ್‌ನ ನೂತನ ಕಚೇರಿ ಉದ್ಘಾಟಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌  | Kannada Prabha

ಸಾರಾಂಶ

ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೋರೇಶನ್ ಬೆಂಗಳೂರಿನಲ್ಲಿ ತನ್ನ ನೂತನ ಕಚೇರಿಯನ್ನು ಆರಂಭಿಸುವ ಮೂಲಕ ಕರ್ನಾಟಕದ ರಾಜಧಾನಿಯಲ್ಲಿ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಿದೆ. ನಗರದ ಕನ್ನಿಂಗ್‌ಹ್ಯಾಮ್ ರಸ್ತೆಯ ಸ್ಯಾಂಕಿ ರಸ್ತೆ ಕ್ರಾಸ್‌ನಲ್ಲಿರುವ ದಿ ಕನ್ನಿಂಗ್‌ಹ್ಯಾಮ್ ಕಮರ್ಷಿಯಲ್‌ನ ಮೊದಲ ಮಹಡಿಯಲ್ಲಿ ಸ್ಥಾಪಿಸಲಾಗಿರುವ ನೂತನ ಕಚೇರಿಯನ್ನು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು.

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೋರೇಶನ್ ಬೆಂಗಳೂರಿನಲ್ಲಿ ತನ್ನ ನೂತನ ಕಚೇರಿಯನ್ನು ಆರಂಭಿಸುವ ಮೂಲಕ ಕರ್ನಾಟಕದ ರಾಜಧಾನಿಯಲ್ಲಿ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಿದೆ. ನಗರದ ಕನ್ನಿಂಗ್‌ಹ್ಯಾಮ್ ರಸ್ತೆಯ ಸ್ಯಾಂಕಿ ರಸ್ತೆ ಕ್ರಾಸ್‌ನಲ್ಲಿರುವ ದಿ ಕನ್ನಿಂಗ್‌ಹ್ಯಾಮ್ ಕಮರ್ಷಿಯಲ್‌ನ ಮೊದಲ ಮಹಡಿಯಲ್ಲಿ ಸ್ಥಾಪಿಸಲಾಗಿರುವ ನೂತನ ಕಚೇರಿಯನ್ನು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೆಂಗಳೂರು ದೇಶದ ಪ್ರಮುಖ ಉದ್ಯಮ ಮತ್ತು ಹೂಡಿಕೆ ಕೇಂದ್ರವಾಗಿ ಬೆಳೆಯುತ್ತಿದ್ದು, ವಿವಿಧ ಕ್ಷೇತ್ರಗಳ ಉದ್ಯಮಿಗಳು ಮತ್ತು ಹೂಡಿಕೆದಾರರಿಗೆ ವಿಫುಲ ಅವಕಾಶಗಳನ್ನು ಒದಗಿಸುತ್ತಿದೆ. ಇಂತಹ ಸಂದರ್ಭದಲ್ಲಿ ರೋಹನ್ ಕಾರ್ಪೋರೇಶನ್ ಬೆಂಗಳೂರಿಗೆ ಪ್ರವೇಶಿಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಸಂಸ್ಥೆಯ ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದರು.

ರೋಹನ್ ಕಾರ್ಪೋರೇಶನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೊ ಮಾತನಾಡಿ, ಬೆಂಗಳೂರಿನಲ್ಲಿ ಕಚೇರಿ ಆರಂಭಿಸಿರುವುದು ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಇಲ್ಲಿನ ಗ್ರಾಹಕರಿಗೆ ಸಂಸ್ಥೆಯ ಯೋಜನೆಗಳನ್ನು ಪರಿಚಯಿಸುವುದರೊಂದಿಗೆ ವಿಶ್ವಾಸಪೂರ್ಣ ಸಂಬಂಧಗಳನ್ನು ಬೆಳೆಸುವುದು ಮತ್ತು ಹೊಸ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ಸಂಸ್ಥೆಯ ನಿರ್ದೇಶಕ ಡಿಯಾನ್ ಮೊಂತೆರೊ ಮಾತನಾಡಿ, ಬೆಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮನೆ ಖರೀದಿದಾರರ ನಿರೀಕ್ಷೆಗಳು ಮತ್ತು ಜೀವನಶೈಲಿಯ ಅಗತ್ಯಗಳು ನಿರಂತರವಾಗಿ ಬದಲಾಗುತ್ತಿವೆ. ಈ ಬದಲಾವಣೆಗಳನ್ನು ಅರಿತು ಗ್ರಾಹಕರ ಅಗತ್ಯಗಳಿಗೆ ಅನುಗುಣವಾಗಿ ಗುಣಮಟ್ಟದ ವಸತಿ ಯೋಜನೆಗಳನ್ನು ಪರಿಚಯಿಸುವುದು ಸಂಸ್ಥೆಯ ಗುರಿಯಾಗಿದೆ ಎಂದು ತಿಳಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬೆಂಗಳೂರು ಮಹಾಧರ್ಮಪ್ರಾಂತ್ಯದ ಸಹಾಯಕ ಬಿಷಪ್ ಡಾ. ಜೋಸೆಫ್ ಸುಸೈನಾಥನ್ ಸೇರಿದಂತೆ ಹಲವು ಗಣ್ಯರು ಇದ್ದರು. ಖ್ಯಾತ ನಿರೂಪಕಿ ರೀನಾ ಡಿಸೋಜಾ ನಿರೂಪಿಸಿದರು.ಇಂದಿನಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್

ನೂತನ ಕಚೇರಿಯ ಉದ್ಘಾಟನೆಯ ಅಂಗವಾಗಿ ರೋಹನ್ ಕಾರ್ಪೋರೇಶನ್ ನವೆಂಬರ್ 6, 7 ಮತ್ತು 8 ರಂದು ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್ ಆಯೋಜಿಸಿದೆ.

ಪ್ರದರ್ಶನದಲ್ಲಿ ಸಂಸ್ಥೆಯ ವಿವಿಧ ವಸತಿ ಹಾಗೂ ರಿಯಲ್ ಎಸ್ಟೇಟ್ ಯೋಜನೆಗಳ ಮಾಹಿತಿ ಪಡೆಯಲು, ಸಂಸ್ಥೆಯ ಪ್ರತಿನಿಧಿಗಳೊಂದಿಗೆ ನೇರವಾಗಿ ಸಮಾಲೋಚಿಸಲು ಗ್ರಾಹಕರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಆಯ್ದ ಯೋಜನೆಗಳನ್ನು ವಿಶೇಷ ಹಾಗೂ ಆಕರ್ಷಕ ದರಗಳಲ್ಲಿ ಖರೀದಿಸುವ ಅವಕಾಶವೂ ಇರಲಿದೆ.

1994ರಿಂದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ರೋಹನ್ ಕಾರ್ಪೋರೇಶನ್, ತನ್ನ ಮೂರು ದಶಕಗಳಿಗೂ ಮೀರಿದ ಅನುಭವ ಮತ್ತು ಗ್ರಾಹಕರ ವಿಶ್ವಾಸದೊಂದಿಗೆ ಇದೀಗ ಬೆಂಗಳೂರಿನ ಮಾರುಕಟ್ಟೆಯಲ್ಲೂ ತನ್ನ ಛಾಪು ಮೂಡಿಸಲು ಮುಂದಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸುಬ್ರಹ್ಮಣ್ಯ: ನೀರಿಗೆ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ ಮಹಿಳೆ
ಬ್ರಹ್ಮಾವರ: ಬಾಳೆಕುದ್ರು ಮಠದ ಶ್ರೀಗಳು ನಾಪತ್ತೆ !