ಉಡುಪಿ ಸಂಸ್ಕೃತ ಕಾಲೇಜಿನಲ್ಲಿ ರೋಹಿತ್ ಚಕ್ರತೀರ್ಥ ಉಪನ್ಯಾಸ

KannadaprabhaNewsNetwork |  
Published : Aug 25, 2026, 03:00 AM IST
24ರೋಹಿತ್ | Kannada Prabha

ಸಾರಾಂಶ

ಶ್ರೀಮನ್ಮಧ್ವ ಸಿದ್ಧಾಂತ ಪ್ರಬೋಧಿನೀ ಸಂಸ್ಕೃತ ಮಹಾ ಪಾಠ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ‘ಸಂವಿಧಾನ ಅಂದು ಹಾಗೂ ಇಂದು’ ಎಂಬ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉಡುಪಿ: ಇಲ್ಲಿನ ಶ್ರೀಮನ್ಮಧ್ವ ಸಿದ್ಧಾಂತ ಪ್ರಬೋಧಿನೀ ಸಂಸ್ಕೃತ ಮಹಾ ಪಾಠ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ‘ಸಂವಿಧಾನ ಅಂದು ಹಾಗೂ ಇಂದು’ ಎಂಬ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಸಿದ್ಧ ಅಂಕಣ ಬರಹಗಾರರೂ ವಾಗ್ಮಿಗಳೂ ಆಗಿರುವ ರೋಹಿತ್ ಚಕ್ರತೀರ್ಥ ಅವರು ಉಪನ್ಯಾಸ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರಾಚೀನ ಕಾಲದಲ್ಲಿ ಇದ್ದ ಶಾಸ್ತ್ರಿಯ ಸಂವಿಧಾನದ ಜೊತೆಗೆ ಅರ್ವಾಚೀನ ಸಂವಿಧಾನದ ವಿಚಾರಗಳನ್ನು ಪ್ರಸ್ತಾಪಿಸಿದರು, ಈ ಸಂದರ್ಭ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.ಎಸ್‌ಎಂಎಸ್‌ಪಿ ಸಭೆಯ ಕಾರ್ಯದರ್ಶಿಗಳಾದ ವಿ. ಗೋಪಾಲ ಜೋಯಿಸರು, ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಡಿ. ಎಸ್. ಅಮೃತೇಶಾಚಾರ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಾಯೋಜಕರೂ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ವಿ. ಹರ್ಗ ಹರಿಪ್ರಸಾದ ಭಟ್ ಅವರು ಸ್ವಾಗತ ಪೂರ್ವಕವಾಗಿ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿಗಳಾದ ಡಾ. ರಾಧಾಕೃಷ್ಣ ಬಿ. ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನವೋದಯ ಸಹಕಾರ ಸಂಘ: ಶೇ.9 ಡಿವಿಡೆಂಡ್ ಘೋಷಣೆ
ಭಾಗಮಂಡಲ ವಲಯ ಪ್ರೌಢಶಾಲೆ ವಿಭಾಗ ಕ್ರೀಡಾಕೂಟ