ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಬೂತ್‌ಮಟ್ಟದ ಕಾರ್ಯಕರ್ತರ ಪಾತ್ರ ಪ್ರಮುಖ: ಬಿವೈವಿ

KannadaprabhaNewsNetwork |  
Published : Nov 22, 2025, 01:45 AM IST
ತರಬೇತಿ ಕಾರ್ಯಾಗಾರವನ್ನು  ಶಾಸಕ ವಿಜಯೇಂದ್ರ ಉದ್ಘಾಟಿಸಿದರು. | Kannada Prabha

ಸಾರಾಂಶ

ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಂಪರ್ಕ ಬೂತ್‌ ಮಟ್ಟದ ಕಾರ್ಯಕರ್ತರಿಂದ ಮಾತ್ರ ಸಾಧ್ಯ. ಪಕ್ಷದ ಅಭ್ಯರ್ಥಿ ಗೆಲುವಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಪಾತ್ರ ಬಹು ಮುಖ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು.

ಶಿಕಾರಿಪುರ: ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಂಪರ್ಕ ಬೂತ್‌ ಮಟ್ಟದ ಕಾರ್ಯಕರ್ತರಿಂದ ಮಾತ್ರ ಸಾಧ್ಯ. ಪಕ್ಷದ ಅಭ್ಯರ್ಥಿ ಗೆಲುವಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಪಾತ್ರ ಬಹು ಮುಖ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು.

ಪಟ್ಟಣದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್ ಐ ಆರ್) ಸಂಬಂಧಿಸಿದಂತೆ ಆಯೋಜಿಸಲಾಗಿದ್ದ ಬಿಎಲ್‌ಎ -2 ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಗಳ ಆರಂಭದಲ್ಲಿ ಪ್ರತಿ ಬೂತ್ ಮಟ್ಟದ ಕಾರ್ಯಕರ್ತರಲ್ಲಿ ಜಾಗೃತಿ ಮೂಡಿಸಬೇಕು. ಪರಿಷ್ಕರಣೆಯ ಪ್ರಥಮ ಹಂತದಲ್ಲಿ ಮತದಾರರ ಪಟ್ಟಿಯಲ್ಲಿ ತಪ್ಪಾಗಿ ನಮೂದಾಗಿರುವ ಹೆಸರುಗಳನ್ನು ಸರಿಪಡಿಸುವ ಮೂಲಕ ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವಂತೆ ಕರೆ ನೀಡಿದರು. ಕಾರ್ಯಕರ್ತರು ಸಮರ್ಪಕ ಪರಿಶೀಲನಾ ವಿಧಾನಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಮತದಾರರೊಂದಿಗೆ ಸಂಪರ್ಕವಿಟ್ಟುಕೊಂಡು ಪಾರದರ್ಶಕವಾಗಿ ಚುನಾವಣಾ ಪ್ರಕ್ರಿಯೆ ನಿರ್ಮಿಸುವಲ್ಲಿ ಅತ್ಯಮೂಲ್ಯ ಪಾತ್ರವಹಿಸಬೇಕು ಎಂದರು.ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆಯ ಬಗ್ಗೆ ಪ್ರತಿಯೊಬ್ಬ ಬೂತ್‌ಮಟ್ಟದ ಕಾರ್ಯಕರ್ತರು ಅರಿವು ಹೊಂದಿರಬೇಕು. ಅತ್ಯಂತ ಸ್ಪಷ್ಟ ಹಾಗೂ ಸ್ವಚ್ಛವಾದ ಮತದಾರರ ಪಟ್ಟಿ ಸಿದ್ಧಪಡಿಸುವುದು ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರತೀಕವಾಗಿದ್ದು, ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಸಂದರ್ಭದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಸಕ್ರೀಯವಾಗಿ ಹಾಜರಿದ್ದು, ಸ್ಪಷ್ಟ ಹಾಗೂ ಸ್ವಚ್ಛ ಮತದಾರರ ಪಟ್ಟಿ ಸಿದ್ಧಪಡಿಸಲು ಸಹಕರಿಸುವಂತೆ ತಿಳಿಸಿದರು.

ಬೂತ್‌ ಮಟ್ಟದಲ್ಲಿ ವಾಸವಿರುವ ಪ್ರತಿಯೊಬ್ಬ ಮತದಾರರ ಹೆಸರು ಸೇರ್ಪಡೆಗೊಂಡಿರುವ ಬಗ್ಗೆ ಸ್ಪಷ್ಟಪಡಿಸಿಕೊಳ್ಳುವಂತೆ ಸೂಚಿಸಿದ ಅವರು, ಬೂತ್‌ ವ್ಯಾಪ್ತಿಯಲ್ಲಿ ಆಗಮಿಸಿದ ಹೊಸ ಕುಟುಂಬದಲ್ಲಿನ ಅರ್ಹ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸುವುದು, ಮನೆ ತೆರವುಗೊಳಿಸಿ ಸ್ಥಳಾಂತರಗೊಂಡ ಮತದಾರರನ್ನು ಪಟ್ಟಿಯಿಂದ ವಜಾಗೊಳಿಸುವುದು, ಯುವ ಮತದಾರರನ್ನು ಕಡ್ಡಾಯವಾಗಿ ಪಟ್ಟಿಗೆ ಸೇರಿಸಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಬಗ್ಗೆ ನಿರ್ಲಕ್ಷಿಸದೆ ತೊಡಗಿಸಿಕೊಳ್ಳುವಂತೆ ತಿಳಿಸಿದರು. ಕಾರ್ಯಾಗಾರದಲ್ಲಿ ಶಾಸಕ ಹರೀಶ್‌ ಪೂಂಜಾ, ಪಕ್ಷದ ಜಿಲ್ಲಾಧ್ಯಕ್ಷ ಜಗದೀಶ್, ಮಾಜಿ ಅಧ್ಯಕ್ಷ ಟಿ.ಡಿ.ಮೇಘರಾಜ್, ಶಿಕಾರಿಪುರ ಮಂಡಲ ಅಧ್ಯಕ್ಷ ಹನುಮಂತಪ್ಪ, ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಗಾಯತ್ರಿದೇವಿ, ಮುಖಂಡ ರಾಮಾನಾಯ್ಕ, ಚನ್ನವೀರಪ್ಪ, ರುದ್ರಪ್ಪಯ್ಯ, ವಸಂತಗೌಡ, ಅಶೋಕ್‌ ಮಾರವಳ್ಳಿ, ನಾಗರಾಜ ಕೊರಲಹಳ್ಳಿ, ಗಣೇಶ್‌ ನಾಗೀಹಳ್ಳಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಬೂತ್ ಮಟ್ಟದ ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV

Recommended Stories

ಕೆಪಿಎಸ್‌ ಶಾಲೆಗಳನ್ನು ಮುಚ್ಚುವ ಹುನ್ನಾರ ಖಂಡಿಸಿ ಪ್ರತಿಭಟನೆ
ರೇಣುಕಾಂಬೆಯ ಸನ್ನಿಧಿಯಲ್ಲಿ ಲಕ್ಷ ದೀಪೋತ್ಸವ ಸಂಪನ್ನ