ಸಮಾಜ ನಿರ್ಮಾಣದಲ್ಲಿ ವಕೀಲರ ಪಾತ್ರ ಮಹತ್ತರ: ಎಸ್. ಪೊನ್ನಣ್ಣ

KannadaprabhaNewsNetwork |  
Published : Mar 16, 2026, 01:30 AM IST
 | Kannada Prabha

ಸಾರಾಂಶ

ಬೆಂಗಳೂರು ಕೊಡವ ಅಡ್ವಕೇಟ್ ಅಸೋಸಿಯೇಷನ್ ಆಯೋಜಿಸಿದ ಬೆಂಗಳೂರಿನಲ್ಲಿರುವ ಕೊಡವ ವಕೀಲರ ಕೌಟುಂಬಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಬೆಂಗಳೂರು ಕೊಡವ ಅಡ್ವಕೇಟ್ ಅಸೋಸಿಯೇಷನ್ ಆಯೋಜಿಸಿದ ಬೆಂಗಳೂರಿನಲ್ಲಿರುವ ಕೊಡವ ವಕೀಲರ ಕೌಟುಂಬಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಬೆಂಗಳೂರಿನ ವಸಂತ ನಗರದಲ್ಲಿರುವ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಬಲ್ಲನಮಾಡ ಕೆ. ಬೋಪಯ್ಯ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದ ಅತಿಥಿಗಳಾಗಿ ಜಸ್ಟೀಸ್ ಅಜ್ಜಿಕುಟ್ಟಿರ ಎಸ್ ಬೋಪಣ್ಣ, ಮೇರಿಯಂಡ ಸಜನ್ ಪೂವಯ್ಯ ಹಾಗೂ ಬಲ್ಲಚಂಡ ಬೆಳ್ಳಿಯಪ್ಪ ಭಾಗವಹಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಪೊನ್ನಣ್ಣ, ಪ್ರತಿದಿನವೂ ಒತ್ತಡದಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಇಂತಹ ಒಂದು ಕಾರ್ಯಕ್ರಮ ಅವಶ್ಯಕವಾಗಿದೆ. ಸದಾ ತಮ್ಮ ಕಕ್ಷಿದಾರನ ಹಿತದ ಬಗ್ಗೆ ಚಿಂತಿಸುವ ವಕೀಲರಿಗೆ ಬಹುತೇಕ ಸಮಯ ತಮ್ಮ ಕುಟುಂಬದೊಂದಿಗೆ ಕಳೆಯಲು ಸಾಧ್ಯವಾಗುವುದಿಲ್ಲ. ಇಂತಹ ಕಾರ್ಯಕ್ರಮಗಳಿಂದಾಗಿ ಕುಟುಂಬದವರು ಹಾಗೂ ಇತರ ವಕೀಲರೊಂದಿಗೆ ಸಮಯ ಕಳೆಯಲು ಅವಕಾಶ ಒದಗುವುದು. ಅಲ್ಲದೆ ಒತ್ತಡ ಸನ್ನಿವೇಶದ ನಿವಾರಣೆಗೂ ಸಹಕಾರಿಯಾಗಲಿದೆ ಎಂದರು. ಆಧುನಿಕ ಸಮಾಜದಲ್ಲಿ ವಕೀಲರ ಪಾತ್ರ ಬಹುದೊಡ್ಡದು. ತಮ್ಮ ಕಕ್ಷಿದಾರರಿಗೆ ನ್ಯಾಯ ಒದಗಿಸಿಕೊಡುವುದರೊಂದಿಗೆ ಭಾರತದ ಸಂವಿಧಾನದ ಆಶಯವನ್ನು ಎತ್ತಿ ಹಿಡಿಯುವುದರಲ್ಲಿ ವಕೀಲರ ಪಾತ್ರ ಬಹುದೊಡ್ಡದಾಗಿದೆ. ಸಂವಿಧಾನವನ್ನು ಮತ್ತಷ್ಟು ಗಟ್ಟಿಗೊಳಿಸಲು ವಕೀಲರು ಅತ್ಯಂತ ಜಾಗರೂಕರಾಗಿ ಕಾರ್ಯನಿರ್ವಹಿಸುವಲ್ಲಿ ಗಮನಹರಿಸಬೇಕೆಂದು ಸಲಹೆ ನೀಡಿದರು. ಜನಸಾಮಾನ್ಯರಿಗೆ ಕಾನೂನಿನ ಅರಿವನ್ನು ಮೂಡಿಸುವುದರೊಂದಿಗೆ, ಸಮಾಜಕ್ಕೆ ಹಾಗೂ ಕಕ್ಷಿದಾರನಿಗೆ ನ್ಯಾಯ ಒದಗಿಸಿ ಕೊಡುವುದರಲ್ಲಿ ವಕೀಲರ ಪಾತ್ರ ತುಂಬಾ ಮುಖ್ಯವಾಗಿದೆ. ಆಡಳಿತ ವ್ಯವಸ್ಥೆಯಾಗಲಿ, ಸಾರ್ವಜನಿಕರ ಬದುಕಾಗಲಿ ಅಥವಾ ರಾಜ್ಯಾಂಗ, ಕಾರ್ಯಾಂಗದ ಯಾವುದೇ ವಿಷಯ ಬಂದರೂ, ವಕೀಲರ ಸಲಹೆ-ಸೂಚನೆ ಹಾಗೂ ಕೊಡುಗೆ ಬಹುದೊಡ್ಡದಾಗಿದೆ. ನಮ್ಮ ವೃತ್ತಿಯನ್ನು ನಾವು ಗೌರವಿಸಿ ಅದರ ಘನತೆಯನ್ನು ಎತ್ತಿ ಹಿಡಿಯುವ ಕಾರ್ಯದತ್ತ ನಾವೆಲ್ಲರೂ ಬದ್ಧರಾಗೋಣ ಎಂದು ಈ ಸಂದರ್ಭದಲ್ಲಿ ಸಭೆಯಲ್ಲಿ ಉಪಸ್ಥಿತರಿದ್ದ ವಕೀಲ ಸಹೋದ್ಯೋಗಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ಕೊಡವ ವಕೀಲರುಗಳು ಹಾಗೂ ಅವರ ಕುಟುಂಬದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುರುಕುಲ ಮಾದರಿ ಶಿಕ್ಷಣದ ಅಗತ್ಯ: ನಿವೃತ್ತ ಶಿಕ್ಷಕ ಮಾಸಣಗಿ
ಅಸಮಾನತೆಯ ಬದುಕಿಗೆ ವಿದಾಯ ಹೇಳಿ: ಮಹಾಂತೇಶ ಆರಾಧ್ಯಮಠ