ಪರಿಸರ ಜಾಗೃತಿಯಲ್ಲಿ ಮಾಧ್ಯಮ ಪಾತ್ರ ಮುಖ್ಯ: ಶಿವರಾಮ್ ಬಾಬು

KannadaprabhaNewsNetwork |  
Published : Jun 21, 2026, 02:45 AM IST
ಡಿಎಫ್‌ಓ ಸಿವರಾಮನ್ ಬಾಬು ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು | Kannada Prabha

ಸಾರಾಂಶ

ಪರಿಸರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೂಡ ನಿರಂತರ ಮಾಡಬೇಕು. ಇದರಲ್ಲಿ ಮಾಧ್ಯಮದವರ ಪಾತ್ರ ಬಹಳ ಮುಖ್ಯ ಎಂದು ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಎಂ. ಹೇಳಿದ್ದಾರೆ.

ಉಡುಪಿ: ಪರಿಸರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೂಡ ನಿರಂತರ ಮಾಡಬೇಕು. ಇದರಲ್ಲಿ ಮಾಧ್ಯಮದವರ ಪಾತ್ರ ಬಹಳ ಮುಖ್ಯ ಎಂದು ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಎಂ. ಹೇಳಿದ್ದಾರೆ.

ಶುಕ್ರವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಂದು ಮುಂಗಾರು ತುಂಬಾ ಕ್ಷಿಣಿಸಿ ಶೇ. 60 ರಷ್ಟು ಮಳೆ ಕಡಿಮೆ ಆಗಿದೆ. ಇದಕ್ಕೆ ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಯೇ ಕಾರಣವಾಗಿದೆ. ಆದುದರಿಂದ ಪರಿಸರವನ್ನು ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಸಂಘದ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ಪತ್ರಿಕಾ ಭವನ ಸಮಿತಿಯ ಸಹಸಂಚಾಲಕ ಗಣೇಶ್ ಕಲ್ಯಾಣಪುರ, ಕೋಶಾಧಿಕಾರಿ ಹರೀಶ್ ಕುಂದರ್ ಇದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಸಂಘದ ಸದಸ್ಯ ಅಜಿತ್ ಆರಾಡಿ ವಂದಿಸಿದರು. ಯಶೋಧಾ ಕೇಶವ ನಿರೂಪಿಸಿದರು.ನಂತರ ಪತ್ರಿಕಾ ಭವನದ ಸುತ್ತಮುತ್ತ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ಈ ಸಸಿಗಳ ಪ್ರಾಯೋಜಕತ್ವವನ್ನು ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿಗೆ ಪಿಎಂವಿಬಿಆರ್‌ವೈನಲ್ಲಿ 3.66 ಕೋಟಿ ರು.: ಕೋಟ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಪ್ರಥಮ ಲಿಂಗ ದೃಢೀಕರಣ ಶಸ್ತ್ರಚಿಕಿತ್ಸೆ ಯಶಸ್ವಿ