ಸಮಾಜವನ್ನು ಕಟ್ಟುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು

KannadaprabhaNewsNetwork |  
Published : Sep 27, 2025, 12:00 AM IST
್ಿ್ಿ್ಿ್ಿ್ಿ | Kannada Prabha

ಸಾರಾಂಶ

ಸರ್ಕಾರ ಮತ್ತು ಜನಗಳ ನಡುವೆಉತ್ತಮ ಸಂಬಂಧ ಏರ್ಪಡುವಂತೆ ಮಾಡಲು ಒಳ್ಳೆಯ ಪತ್ರಕರ್ತರಿಂದ ಮಾತ್ರ ಸಾಧ್ಯ. ಮಾಧ್ಯಮಗಳು ಅವರ ನಡುವಿನ ಸೇತುವೆಯಾಗಬೇಕುಎಂದು ಚಿಕ್ಕನಾಯಕನಹಳ್ಳಿ ವಿಧಾನಸಭಾಕ್ಷೇತ್ರದ ಶಾಸಕ ಸುರೇಶ್ ಬಾಬು ಸಿ.ಬಿ. ಹೇಳಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಸರ್ಕಾರ ಮತ್ತು ಜನಗಳ ನಡುವೆಉತ್ತಮ ಸಂಬಂಧ ಏರ್ಪಡುವಂತೆ ಮಾಡಲು ಒಳ್ಳೆಯ ಪತ್ರಕರ್ತರಿಂದ ಮಾತ್ರ ಸಾಧ್ಯ. ಮಾಧ್ಯಮಗಳು ಅವರ ನಡುವಿನ ಸೇತುವೆಯಾಗಬೇಕುಎಂದು ಚಿಕ್ಕನಾಯಕನಹಳ್ಳಿ ವಿಧಾನಸಭಾಕ್ಷೇತ್ರದ ಶಾಸಕ ಸುರೇಶ್ ಬಾಬು ಸಿ.ಬಿ. ಹೇಳಿದರು. ಚಿಕ್ಕನಾಯಕನಹಳ್ಳಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕನ್ನಡ ಸಾಹಿತ್ಯ ಪರಿಷತ್,ಎಸ್. ಬಿ. ಚಾರಿಟೇಬಲ್ ಟ್ರಸ್ಟ್, ಸುವರ್ಣಮುಖಿ ಮಾಧ್ಯಮ ಅಧ್ಯಯನ ಕೇಂದ್ರ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಯೋಗದಲ್ಲಿ ಶುಕ್ರವಾರ ಆರಂಭಗೊಂಡ ಎರಡು ದಿನಗಳ ಜಿಲ್ಲಾ ಮಟ್ಟದ ಗ್ರಾಮೀಣ ಪತ್ರಿಕೋದ್ಯಮ ಕಾರ್ಯಗಾರ ಹಾಗೂ ದಿ.ಎನ್. ಬಸವಯ್ಯ ಜೀವಮಾನ ಸಾಧನೆ ದತ್ತಿಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಯುವಜನತೆ ಮಾಧ್ಯಮ ರಂಗದಲ್ಲಿ ತೊಡಗಿಸಿಕೊಂಡು ಸಮಾಜವನ್ನು ಒಳ್ಳೆಯ ಹಂತಕ್ಕೆ ಕೊಂಡೊಯ್ಯಲು ಶ್ರಮಿಸಬೇಕು.ಮಾಧ್ಯಮರಂಗಕ್ಕೆ ನೈತಿಕಪ್ರಜ್ಞೆ, ಬದ್ಧತೆ ಹಾಗೂ ಪರಿಶ್ರಮ ಹೊಂದಿರುವ ಯುವಕರ ಅಗತ್ಯವಿದೆ ಎಂದರು.ತುಮಕೂರು ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಮಾತನಾಡಿ, ಪತ್ರಿಕೆ ಮತ್ತು ಸಾಹಿತ್ಯಒಂದೇ ನಾಣ್ಯದ ಎರಡು ಮುಖಗಳಾಗಿವೆ. ಸಾಹಿತ್ಯ ಲೋಕ ವಿಸ್ತಾರವಾಗುವಲ್ಲಿ, ಭಾಷೆ ಬೆಳೆಯುವಲ್ಲಿ ಮಾಧ್ಯಮಗಳ ಕೊಡುಗೆ ಅಪಾರ ಎಂದರು.ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿ.ನಿ. ಪುರುಷೋತ್ತಮ್ ಮಾತನಾಡಿ, ಸಮಾಜದಲ್ಲಿ ಪತ್ರಿಕೋದ್ಯಮದ ಮಹತ್ವವನ್ನು ಎತ್ತಿತೋರಿಸುವ ನಿಟ್ಟಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳು ಜಾಗೃತರಾಗಬೇಕು. ಪತ್ರಿಕೋದ್ಯಮಕ್ಕೆ ಬರುವ ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಹೆಚ್ಚು ಆಸಕ್ತಿಯನ್ನು ಬೆಳೆಸಿಕೊಂಡು ಉತ್ತಮ ಅಧ್ಯಯನ ನಡೆಸಬೇಕು ಎಂದರು. ಡಾ. ಸಿಬಂತಿ ಪದ್ಮನಾಭ ಕೆ.ವಿ., ಗ್ರಾಮೀಣ ಪತ್ರಕರ್ತರು ಪ್ರಜಾಪ್ರಭುತ್ವದ ನಿಜವಾದಆಧಾರ ಸ್ತಂಭಗಳು. ಜನಸಾಮಾನ್ಯರಜತೆಗಿದ್ದುಕೊಂಡು, ಸಾಮಾಜಿಕ ವ್ಯವಸ್ಥೆಯ ಒಳಗಿದ್ದುಕೊಂಡು ಅಭ್ಯುದಯಲ್ಲಿ ಭಾಗಿಗಳಾಗುವ ಅವಕಾಶ ಅವರಿಗಿದೆಎಂದರು.ಹಿರಿಯ ಪತ್ರಕರ್ತ, ಉದಯವಾಣಿ ಮಣಿಪಾಲ ಸಂಪಾದಕ ಅರವಿಂದ ನಾವಡ ಹಳ್ಳಿಗಳಾಗುತ್ತಿರುವ ಪಟ್ಟಣಗಳು: ಗ್ರಾಮೀಣ ಪತ್ರಕರ್ತರ ಸವಾಲುಗಳು ಕುರಿತು ದಿಕ್ಸೂಚಿ ಭಾಷಣ ಮಾಡಿದರು. ಪತ್ರಿಕೋದ್ಯಮ: ಏನು, ಏಕೆ, ಹೇಗೆ?’ಕುರಿತು ಕುವೆಂಪು ವಿವಿ ಪತ್ರಿಕೋದ್ಯಮ ಪ್ರಾಧ್ಯಾಪಕ ಪ್ರೊ.ಸತೀಶ್‌ಕುಮಾರ್‌ ಅಂಡಿಂಜೆ, ಮಾಧ್ಯಮರಂಗದ ಉದ್ಯೋಗಾವಕಾಶಗಳ ಬಗ್ಗೆ ದೂರದರ್ಶನದ ಹಿರಿಯ ವಾರ್ತಾವಾಚಕಿ ಚೇತನಾ ರಾಜೇಂದ್ರ, ಬರವಣಿಗೆಯ ಆರಂಭಿಕ ಹೆಜ್ಜೆಗಳ ಕುರಿತು ಡಾ.ಸಿಬಂತಿ ಪದ್ಮನಾಭ ಹಾಗೂ ತುಮಕೂರು ವಿವಿಯ ಸಮಾಜಕಾರ್ಯ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಕೆ.ಜಿ. ಪರಶುರಾಮ ಮಾತನಾಡಿದರು.ಪತ್ರಕರ್ತರ ರಾಷ್ಟ್ರೀಯ ಮಂಡಳಿ ಸದಸ್ಯ ಟಿ.ಎನ್.ಮಧುಕರ್, ತಾಲೂಕು ಕ.ಸಾ.ಪ ಅಧ್ಯಕ್ಷ ಎಂ.ಎಸ್. ರವಿಕುಮಾರ್,ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ. ಯೋಗೀಶ್, ಪತ್ರಕರ್ತ ಸಿ.ಗುರುಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

PREV

Recommended Stories

ಹತ್ತು ವರ್ಷವಾದ್ರೂ ನೇಕಾರರ ಮನೆಗಳಿಗಿಲ್ಲ ಮುಕ್ತಿ
ಭೀಮಾನದಿ ನೀರಿನ ಹರಿವು ಮತ್ತೆ ಏರಿಕೆ