ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗವು ಫೊರೆನ್ಸಿಕ್ ನರ್ಸಿಂಗ್ ಕುರಿತು ಪ್ರಾದೇಶಿಕ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿತು.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗವು ಫೊರೆನ್ಸಿಕ್ ನರ್ಸಿಂಗ್ ಕುರಿತು ಪ್ರಾದೇಶಿಕ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಹೆಯ ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್‌ನ ಮನೋವೈದ್ಯಶಾಸ್ತ್ರ ನರ್ಸಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ರೆಂಜುಲಾಲ್ ಯೆಶೋಧರನ್ ಅವರು ಸಮ್ಮೇಳನವನ್ನು ಉದ್ಘಾಟಿಸಿದರು.ವೈದ್ಯಕೀಯ ಕಾನೂನು ಪ್ರಕರಣಗಳಲ್ಲಿ ಸಾಕ್ಷ್ಯ ಸಂರಕ್ಷಣೆ, ಸಂತ್ರಸ್ತರ ಆರೈಕೆ ಮತ್ತು ಕ್ಲಿನಿಕಲ್ ಅಭ್ಯಾಸದಲ್ಲಿ ದಾದಿಯರ ಪಾತ್ರ ನಿರ್ಣಾಯಕವಾಗಿದೆ ಎಂದ ಅವರು, ದಾದಿಯರ ಕಾನೂನು ಜವಾಬ್ದಾರಿಗಳನ್ನು ಒತ್ತಿ ಹೇಳಿದರು ಮತ್ತು ವಿಧಿ ವಿಜ್ಞಾನ ನರ್ಸಿಂಗ್‌ನ ವಿಸ್ತರಿಸುತ್ತಿರುವ ವ್ಯಾಪ್ತಿ ಮತ್ತು ಅದರ ಪ್ರಾಯೋಗಿಕ ಪರಿಣಾಮಗಳನ್ನು ವಿವರಿಸಿದರು.
ಕಾರ್‍ಯಕ್ರಮದಲ್ಲಿ ಐಎಂಜೆ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಎಸ್.ಎನ್. ಭಟ್ ಮಾತನಾಡಿ, ಈ ತರಹದ ಸಮ್ಮೇಳನಗಳು ವಿದ್ಯಾರ್ಥಿಗಳ ಹಾಗೂ ಪ್ರಾಧ್ಯಾಪಕರ ಜ್ಞಾನೋನ್ನತಿಗೆ ಸಹಾಯ ಮಾಡುತ್ತದೆ ಎಂದರು. ಸಂಸ್ಥೆಯ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ ಅವರು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ಪ್ರಶಂಸಿಸಿದರು. ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಸ್ವಾಗತಿಸಿದರು. ಕಾರ್‍ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ.ಎಸ್. ಮತ್ತು ಪ್ರಾದ್ಯಾಪಕರು, ಹಲವು ಕಾಲೇಜನ್ನು ಪ್ರತಿನಿಧಿಸಿದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮ್ಮೇಳನವು ಚರ್ಚೆ, ಜ್ಞಾನ ಹಂಚಿಕೆ, ವೃತ್ತಿಪರ ಅಭಿವೃದ್ಧಿ ಮತ್ತು ಶೈಕ್ಷಣಿಕ ಸಂವಹನಕ್ಕೆ ಅತ್ಯುತ್ತಮ ವೇದಿಕೆಯನ್ನು ಒದಗಿಸಿತು. ಈ ಕಾರ್‍ಯಕ್ರಮಕ್ಕೆ ಕಾಲೇಜಿನ ಅಂತಿಮ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಸಹಯೋಗ ನೀಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.