ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮುಖ್ಯ: ಮೋಟಮ್ಮ

KannadaprabhaNewsNetwork |  
Published : Jan 01, 2024, 01:15 AM IST
ಚಿಕ್ಕಮಗಳೂರಿನ ಕುವೆಂಪು ವಿದ್ಯಾನಿಕೇತನ ಶಾಲೆಯ ವಾರ್ಷಿಕೋತ್ಸವದಲ್ಲಿ ಮಾಜಿ ಸಚಿವೆ ಮೋಟಮ್ಮ ಅವರು ಮಾತನಾಡಿದರು. | Kannada Prabha

ಸಾರಾಂಶ

ನಗರದ ಕುವೆಂಪು ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಉದ್ಘಾಟಿಸಿದ ಮಾಜಿ ಸಚಿವೆ ಮೋಟಮ್ಮ ಮಕ್ಕಳ ಶಿಕ್ಷಣ ಸಾಧನೆ ಮತ್ತು ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರಿಗಿಂತ ಪೋಷಕರ ಪಾತ್ರ ಬಹಳ ಮುಖ್ಯ ಎಂದು ಹೇಳಿದರು.

ನಗರದ ಕುವೆಂಪು ವಿದ್ಯಾನಿಕೇತನ ಶಾಲೆ ವಾರ್ಷಿಕೋತ್ಸವ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಮಕ್ಕಳ ಶಿಕ್ಷಣ ಸಾಧನೆ ಮತ್ತು ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರಿಗಿಂತ ಪೋಷಕರ ಪಾತ್ರ ಬಹಳ ಮುಖ್ಯ ಎಂದು ಮಾಜಿ ಸಚಿವೆ ಮೋಟಮ್ಮ ಹೇಳಿದರು.

ನಗರದ ಕುವೆಂಪು ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಮಕ್ಕಳನ್ನು ಶಾಲೆಗೆ ಕಳುಹಿಸಿದ ಮಾತ್ರಕ್ಕೆ ಹೆತ್ತವರ ಪಾತ್ರ ಮತ್ತು ಜವಾಬ್ದಾರಿ ಮುಗಿಯುವುದಿಲ್ಲ. ಮಕ್ಕಳ ನಡೆಯನ್ನು ನಿರಂತರವಾಗಿ ಗಮನಿಸಿ, ಅವರನ್ನು ತಿದ್ದಿ ತೀಡಿ ಗುರಿ ಮುಟ್ಟಿಸುವ ಹೊಣೆಗಾರಿಕೆ ಅವರ ಮೇಲಿರುತ್ತದೆ ಎಂದರು. ಪೋಷಕರು ತಮ್ಮ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸಿದರೆ ಮಾತ್ರ ಮಕ್ಕಳು ಉತ್ತಮ ನಾಗರಿಕ ರಾಗುತ್ತಾರೆ. ಸಾಧನೆ ಮಾಡುತ್ತಾರೆ, ಅದಕ್ಕಾಗಿಯೇ ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎಂದು ಹೇಳಲಾಗುತ್ತದೆ ಎಂದು ತಿಳಿಸಿದರು. ಮಕ್ಕಳ ಆಸೆ ಮತ್ತು ನಿರೀಕ್ಷೆಗಳನ್ನು ಹೆತ್ತವರು ತಕ್ಷಣ ಈಡೇರಿಸುವುದರಿಂದ ಮಕ್ಕಳಿಗೆ ಕಷ್ಟ ಎದುರಿಸಲು ಮತ್ತು ತಾಳ್ಮೆ ಬರುವುದಿಲ್ಲ. ಬದುಕನ್ನು ಎದುರಿಸುವುದರಲ್ಲಿ ಅವರು ವಿಫಲರಾಗುತ್ತಾರೆ. ಮಕ್ಕಳ ಹಾದಿ ಯನ್ನು ಪೋಷಕರು ಸೂಕ್ಷ್ಮವಾಗಿ ಗಮನಿಸದಿದ್ದರೆ ಮಕ್ಕಳು ಹಾದಿತಪ್ಪಿ, ಸಂತೋಷ ತರುವ ಬದಲು ದುಃಖದ ಮೂಲವಾಗುತ್ತಾರೆ ಎಂದು ಎಚ್ಚರಿಸಿದರು. ಜಿಲ್ಲಾ ಸರ್ಜನ್‌ ಡಾ.ಮೋಹನ್‌ಕುಮಾರ್ ಮಾತನಾಡಿ, ಶಿಕ್ಷಕರೂ ಸಹ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಅವರನ್ನು ತಿದ್ದಿತೀಡುವ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು. ಶಾಲೆ ಕಾರ್ಯದರ್ಶಿ ಕೆ.ಸಿ.ಶಂಕರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅವರಲ್ಲಿ ಸಂಸ್ಕಾರ ಬೆಳೆಸುವ ಕೆಲಸವನ್ನೂ ಕುವೆಂಪು ವಿದ್ಯಾ ನಿಕೇತನ ಮಾಡುತ್ತಿದೆ ಎಂದರು. ಸಂಸ್ಥೆ ಟ್ರಸ್ಟಿ ಅರ್ಚನಾ ಶಂಕರ್, ಮುಖ್ಯಸ್ಥೆ ಹೊನ್ನಾಂಬಿಕೆ ಉಪಸ್ಥಿತರಿದ್ದರು. ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

31ಕೆಸಿಕೆಎಂ 3ಚಿಕ್ಕಮಗಳೂರಿನ ಕುವೆಂಪು ವಿದ್ಯಾನಿಕೇತನ ಶಾಲೆ ವಾರ್ಷಿಕೋತ್ಸವದಲ್ಲಿ ಮಾಜಿ ಸಚಿವೆ ಮೋಟಮ್ಮ ಮಾತನಾಡಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ