ಮಕ್ಕಳ ಶೈಕ್ಷಣಿಕ ಏಳಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಚಿಂದಾನಂದಗುರುಸ್ವಾಮಿ

KannadaprabhaNewsNetwork |  
Published : Sep 06, 2024, 01:03 AM IST
ಹರಪನಹಳ್ಳಿ ಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.ಎಸಿ ಚಿದಾನಂದಗುರುಸ್ವಾಮಿ, ಬಿಇಒ ಲೇಪಾಕ್ಷಪ್ಪ, ಎಂ.ವಿ.ಅಂಜಿನಪ್ಪ, ಬಸವರಾಜ ಸಂಗಪ್ಪನವರ್ ಇದ್ದರು. | Kannada Prabha

ಸಾರಾಂಶ

ತಾಲೂಕಿನಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ.

ಹರಪನಹಳ್ಳಿ: ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳ ಶೈಕ್ಷಣಿಕ ಏಳಿಗೆಗೆ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಕಂದಾಯ ಉಪವಿಭಾಗಾಧಿಕಾರಿ ಚಿದಾನಂದಗುರುಸ್ವಾಮಿ ಹೇಳಿದರು. ಪಟ್ಟಣದ ತರಳಬಾಳು ಕಲ್ಯಾಣ ಮಂಟಪದಲ್ಲಿ ಗುರುವಾರ ಶಿಕ್ಷಕರ ಸಂಘಟನೆ ಹಾಗೂ ಇತರ ಸಂಘಟನೆಗಳ ಆಶ್ರಯದಲ್ಲಿ ಶಾಲಾ ಶಿಕ್ಷಣ ಇಲಾಖೆ ಡಾ. ಸರ್ವಪಲ್ಲಿ ರಾಧಕೃಷ್ಣ ಅವರ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಾರತೀಯ ಪರಂಪರೆಯಲ್ಲಿ ಗುರುಗಳಿಗೆ ವಿಶಿಷ್ಠ ಸ್ಥಾನವಿದೆ ಎಂದ ಅವರು, ತಾಲೂಕಿನಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದರು.

ಪುರಸಭೆ ಸದಸ್ಯ ಎಂ.ವಿ. ಅಂಜಿನಪ್ಪ ಮಾತನಾಡಿ, ಸಮ ಸಮಾಜ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದು. ತಾಲೂಕಿನಲ್ಲಿ ಶಾಲೆಗಳ ಮೂಲ ಸೌಕರ್ಯ ನೀಗಿಸಲು ಶಾಸಕರು ಒತ್ತು ನೀಡಿದ್ದಾರೆ ಎಂದು ಹೇಳಿದರು.

ತಾಪಂ ಇಒ ಚಂದ್ರಶೇಖರ ಮಾತನಾಡಿ, ಶಿಕ್ಷಕರು ಮೊದಲು ಕೇಳುಗರಾಗಬೇಕು, ನಂತರ ನಿರಂತರವಾಗಿ ಓದುಗರಾಗಬೇಕು. ಹಾಗಾದರೆ ಮಾತ್ರ ಕ್ರಿಯಾಶೀಲ ಶಿಕ್ಷಕರಾಗುತ್ತಾರೆ ಎಂದರು.

ಬಿಇಒ ಎಚ್. ಲೇಪಾಕ್ಷಪ್ಪ ಮಾತನಾಡಿ, ಪ್ರಸಕ್ತ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಲು ವಿವಿಧ ಕಾರ್ಯಕ್ರಮ ಹಾಕಿಕೊಂಡಿದ್ದೇವೆ. ಶೇ. 85ಕ್ಕೂ ಹೆಚ್ಚು ಫಲಿತಾಂಶ ಪಡೆಯಲು ಗುರಿ ಹೊಂದಿದ್ದೇವೆ. ಒಟ್ಟಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ ಮಾತನಾಡಿ, ನಾವು ಕಲಿಸುವ ವಿದ್ಯೆ ಜನರ ಒಳಿತಿಗಾಗಿ ಇರಬೇಕು. ಮಕ್ಕಳನ್ನು ಮನಸ್ಸಿನ ಮೂಲಕ ತಿದ್ದಬೇಕು ಎಂದ ಅವರು, ಮಾನವೀಯ ಮೌಲ್ಯಗಳ ಬಗ್ಗೆ ತಿಳಿಸಬೇಕು ಎಂದರು.

ನಿವೃತ್ತ ಬಿಇಒ ಬಸವರಾಜಪ್ಪ ಅವರಿಗೆ ವಿಶೇಷ ಸನ್ಮಾನ ನೀಡಿ ಗೌರವಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಬಿಇಒ ಕಚೇರಿ ಬಳಿಯಿಂದ ರಾಧಾಕೃಷ್ಣನ್‌ ಅವರ ಭಾವಚಿತ್ರವನ್ನು ಟ್ರ್ಯಾಕ್ಟರ್‌ನಲ್ಲಿ ಇಟ್ಟುಕೊಂಡು ಮೆರವಣಿಗೆ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿದರು.

ಪುರಸಭೆ ಸದಸ್ಯರಾದ ಲಾಟಿದಾದಾಪೀರ, ಉದ್ದಾರ ಗಣೇಶ, ಜಾಕೀರ ಹುಸೇನ್, ಕ್ಷೇತ್ರಸಮನ್ವಯಾಧಿಕಾರಿ ಹೊನ್ನತ್ತೆಪ್ಪ, ಅಕ್ಷರ ದಾಸೋಹದ ನಿರ್ದೇಶಕ ನಾಗರಾಜ, ದೈಹಿಕ ಶಿಕ್ಷಣ ಪರಿವೀಕ್ಷಕ ಷಣ್ಮುಖಪ್ಪ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಸಂಗಪ್ಪನವರ, ರಾಜ್ಯ ಉಪಾಧ್ಯಕ್ಷೆ ಜಿ. ಪದ್ಮಲತಾ, ನೌಕರರ ಸಂಘದ ಅಧ್ಯಕ್ಷ ಎಸ್. ರಾಮಪ್ಪ, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಿ. ರಾಜಶೇಖರ, ಶಿಕ್ಷಕರ ಪತ್ತಿನ ಸಂಘದ ಅಧ್ಯಕ್ಷ ಬಿ. ಚಂದ್ರಮೌಳಿ, ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಚ್.ಕೆ. ಚಂದ್ರಪ್ಪ, ಶಿಕ್ಷಣ ಸಂಯೋಜಕ ಗಿರಜ್ಜಿ ಮಂಜುನಾಥ, ಬಿ. ಗುರುಮೂರ್ತಿ, ಸಾವಿತ್ರಿ ಬಾಯಿ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಟಿ.ಎಚ್.ಎಂ. ಲತಾ, ಶಿಕ್ಷಕರ ಹಾಗೂ ಇತರ ಸಂಘಟನೆಗಳ ಪದಾಧಿಕಾರಿಗಳಾದ ಹನುಮಂತಪ್ಪ ಸೊಪ್ಪಿನ, ಕೆ. ನಟರಾಜ, ಲತಾ ರಾಥೋಡ, ಎಂ. ಆಂಜನೇಯ, ಅರ್ಜುನಪರಸಪ್ಪ, ಜಯಣ್ಣ ಪೂಜಾರ, ಮಂಜುನಾಥ ಪೂಜಾರ, ಎಎಸ್‌ಎಂ ಗುರುಪ್ರಸಾದ, ಬಿ. ಪದ್ಮರಾಜ,ಮಕಬುಲ್ಭಾಷ. ಪಿ. ಗಣೇಶ, ಪಿ. ಅಂಜಿನಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PREV

Recommended Stories

ದಸರಾ ಹಬ್ಬ ಅದ್ಧೂರಿ ಆಚರಣೆಗೆ ಎಲ್ಲರೂ ಸಹಕರಿಸಿ: ಏಗಪ್ಪ ಸವದಿ
ಬಿಡಿಸಿಸಿ ಬ್ಯಾಂಕ್‌ ಹಿತರಕ್ಷಣೆಗೆ ನಾವು ಬದ್ಧ