ಪೋಲಿಯೋ ನಿರ್ಮೂಲನೆಯಲ್ಲಿ ವಿವಿಧ ಇಲಾಖೆ ಪಾತ್ರ ಪ್ರಮುಖ: ಶಾಸಕ ಜಿ.ಎಚ್.ಶ್ರೀನಿವಾಸ್

KannadaprabhaNewsNetwork |  
Published : Jun 29, 2026, 03:00 AM IST
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಗಾಟನೆ | Kannada Prabha

ಸಾರಾಂಶ

ತರೀಕೆರೆಪೋಲಿಯೋ ನಿರ್ಮೂಲನೆಯಲ್ಲಿ ಆರೋಗ್ಯ ಇಲಾಖೆ, ರೋಟರಿ, ಶಿಶು ಅಭಿವೃದ್ಧಿ ಇಲಾಖೆ ಪಾತ್ರಗಳು ಪ್ರಮುಖವಾಗಿವೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ತರೀಕೆರೆ

ಪೋಲಿಯೋ ನಿರ್ಮೂಲನೆಯಲ್ಲಿ ಆರೋಗ್ಯ ಇಲಾಖೆ, ರೋಟರಿ, ಶಿಶು ಅಭಿವೃದ್ಧಿ ಇಲಾಖೆ ಪಾತ್ರಗಳು ಪ್ರಮುಖವಾಗಿವೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಭಾನುವಾರ ಆರೋಗ್ಯ ಇಲಾಖೆಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಅವರಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಆರೋಗ್ಯ ಇಲಾಖೆ ವೈದ್ಯರು, ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಶ್ಲಾಘನೀಯ. ಮಕ್ಕಳಿಗೆ ಪೋಲಿಯೋದಿಂದ ಬರುವ ಶಾಶ್ವತ ಅಂಗವೈಕಲ್ಯ ತಡೆಗೆ ಪೋಲಿಯೋ ಲಸಿಕಾ ಅಭಿಯಾನದಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಬೇಕೆಂದು ಪೋಷಕರಲ್ಲಿ ಮನವಿ ಮಾಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್ ಬಿ.ಜಿ ಮಾತನಾಡಿ ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯ ಉಂಟುಮಾಡುವ ಗಂಭೀರ ವೈರಸ್ ಕಾಯಿಲೆ ಈ ಪೋಲಿಯೊ. ಭಾರತದಲ್ಲಿ ಪೋಲಿಯೋ ನಿರ್ಮೂಲನೆ ಮಾಡುವ ಗುರಿ ಇಟ್ಟುಕೊಂಡು 1995ರಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಪ್ರಾರಂಭಿಸಿದರು. ದೇಶದ ನಿರಂತರ ಪ್ರಯತ್ನ ಸರ್ಕಾರ ಗಳ ಬದ್ಧತೆ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರ ಅವಿರತ ಶ್ರಮ ಎಲ್ಲಾ ಇಲಾಖೆಗಳು, ರೋಟರಿ ಕ್ಲಬ್ ಭಾರತೀಯ ವೈದ್ಯಕೀಯ ಸಂಘ, ಮಾದ್ಯಮ ಮತ್ತು ಸಾರ್ವಜನಿಕರ ಸಹಕಾರದಿಂದ ಭಾರತ ಪೋಲಿಯೋ ಮುಕ್ತ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 2012ರಿಂದ ಒಂದು ಪೋಲಿಯೋ ಪ್ರಕರಣ ನಮ್ಮ ದೇಶದಲ್ಲಿ ವರದಿ ಯಾಗಿಲ್ಲ ಎಂದು ಹೇಳಿದರು.

ಜೂನ್ 28 ರಿಂದ ಜುಲೈ 1 ರ ವರೆಗೆ ನಡೆಯುವ ಅಭಿಯಾನದಲ್ಲಿ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ 15527, 5 ವರ್ಷ ದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಪುರಸಭೆ ಉಪಾಧ್ಬಕ್ಷೆ ಶಮೀಮ್ ಬಾನು, ರೋಟರಿ ಸಂಸ್ಥೆ ಕಾರ್ಯದರ್ಶಿ ಪ್ರವೀಣ್, ಡಾ ಗಿರೀಶ್, ಡಾ ಶರತ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚರಣ್‌ರಾಜ್, ಮಕ್ಕಳ ತಜ್ಞ ಡಾ ದೇವಾನಂದ್, ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ವನಜಾಕ್ಷಮ್ಮ , ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ, ಪ್ರಭಾವತಿ, ಅನುಪಮ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

28ಕೆಟಿಆರ್.ಕೆ. 12ಃ ತರೀಕೆರೆಯಲ್ಲಿ ಆರೋಗ್ಯ ಇಲಾಖೆಯಿಂದ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು.ಪುರಸಭೆ ಉಪಾಧ್ಯಕ್ಷೆ ಶಮೀಮ್. ಬಾನು, ತಾ.ಆರೋಗ್ಯಾಧಿಕಾರಿ ಡಾ.ಬಿ.ಜಿ. ಚಂದ್ರಶೇಖರ್, ಡಾ.ಜಿ.ಸಿ.ಶರತ್, ಡಾ.ಗಿರೀಶ್ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂವಿಧಾನದ ಎಲ್ಲರನ್ನೂ ಮುಖ್ಯವಾಹಿನಿಗೆ ತರುತ್ತದೆ
ಪೋಲಿಯೋ ಮುಕ್ತ ಭಾರತ ವಿಶ್ವಕ್ಕೆ ಮಾದರಿ