ಕನ್ನಡಪ್ರಭ ವಾರ್ತೆ ನಾಪೋಕ್ಲು
ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಐಕ್ಯೂಎಸಿ, ಎನ್.ಎಸ್.ಎಸ್ ಹಾಗೂ ಮತದಾರರ ಸಾಕ್ಷರತಾ ಘಟಕಗಳ ವತಿಯಿಂದ ಜರುಗಿದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಭಾರತವು ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ನಮ್ಮ ಸರ್ಕಾರ ಹಾಗೂ ಮತದಾನದ ಪದ್ಧತಿಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ ಎಂದರು.
ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವದ ನಡುವಿನ ವ್ಯತ್ಯಾಸ ತಿಳಿಸಿದ ಅವರು, ಸ್ವತಂತ್ರ, ಸಮಾನತೆ, ನ್ಯಾಯ, ಭ್ರಾತೃತ್ವ ಪ್ರಜಾಪ್ರಭುತ್ವದ ಮೂಲ ಆಧಾರ ಅಂಶಗಳಾಗಿವೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರ ಸಹಕಾರ ಮುಖ್ಯವಾಗಿದ್ದು, ಪ್ರತಿಯೊಬ್ಬರು ಮತವನ್ನು ಚಲಾಯಿಸಬೇಕು ಎಂದರು.ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಇಡೀ ವಿಶ್ವವೇ ಭಾರತದ ಚುನಾವಣೆಯನ್ನು ಬಹಳ ಕುತೂಹಲದಿಂದ ನೋಡುತಿದ್ದು ಭಾರತದ ಪ್ರಜಾಪ್ರಭುತ್ವ ವಿಶ್ವಕ್ಕೆ ಮಾದರಿಯಾಗಿದೆ. ಚುನಾವಣೆ ಎಲ್ಲರ ಹಕ್ಕಾಗಿದ್ದು ನಮ್ಮ ಹಕ್ಕನ್ನು ನಾವು ಚಲಾಯಿಸುವುದು ಮುಖ್ಯವಾಗುತ್ತದೆ ಎಂದರು.
ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸಿ ಎಂದು ಕರೆ ಕೊಟ್ಟರು. ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಬಿ.ಎನ್. ಶಾಂತಿಭೂಷಣ್ ಪ್ರಾಸ್ತಾವಿಕ ಮಾತನಾಡಿದರು.
ಉಪನ್ಯಾಸಕರಾದ ಹೇಮ ಬಿ.ಡಿ., ಶಶಿಕಲಾ ಇದ್ದರು.