ಮಿಜಾರು ಶಾಲೆ ಆವರಣದಲ್ಲಿ ಕೊಠಡಿ ಕಾಮಗಾರಿ: ಸ್ಥಳೀಯರ ವಿರೋಧ

KannadaprabhaNewsNetwork |  
Published : Jun 23, 2026, 03:00 AM IST
ಮಿಜಾರು ಕೆಪಿಎಸ್ ಶಾಲಾ ಮೈದಾನದಲ್ಲಿ ತರಗತಿ ಕೊಠಡಿ ಕಾಮಗಾರಿ: ಆಟದ ಮೈದಾನ ಉಳಿಸಿ-ಸ್ಥಳೀಯರ ಆಗ್ರಹ | Kannada Prabha

ಸಾರಾಂಶ

ತೆಂಕಮಿಜಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಡಾರಿನಲ್ಲಿರುವ ಮಿಜಾರು ಕೆಪಿಎಸ್ ಶಾಲಾ ಆವರಣದಲ್ಲಿ ಪ್ರಾಥಮಿಕ ಶಾಲೆಯ ನಾಲ್ಕು ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಸ್ಥಳೀಯರು ಶನಿವಾರ ವಿರೋಧ ವ್ಯಕ್ತಪಡಿಸಿದರು.

ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಡಾರಿನಲ್ಲಿರುವ ಮಿಜಾರು ಕೆಪಿಎಸ್ ಶಾಲಾ ಆವರಣದಲ್ಲಿ ಪ್ರಾಥಮಿಕ ಶಾಲೆಯ ನಾಲ್ಕು ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಸ್ಥಳೀಯರು ಶನಿವಾರ ವಿರೋಧ ವ್ಯಕ್ತಪಡಿಸಿದರು.ಮಿಜಾರು ಶಾಲೆ (ಬಂಗಬೆಟ್ಟು ಶಾಲೆ) ಹೆಸರಿನಲ್ಲಿ 2.95 ಎಕರೆ ಜಾಗವಿದ್ದು, ಅದರಲ್ಲಿ 95 ಸೆಂಟ್ಸ್ ಜಾಗವನ್ನು ಮಿಜಾರು ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿಗೆ ನೀಡಲಾಗಿತ್ತು. ಉಳಿದ ಜಾಗವನ್ನು ಶಾಲಾ ಮಕ್ಕಳ ಆಟದ ಮೈದಾನ ಹಾಗೂ ಸಾರ್ವಜನಿಕ ಕ್ರೀಡಾ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ.

ಪ್ರಾಥಮಿಕ ಶಾಲೆಗೆ ಮಂಜೂರಾದ ನಾಲ್ಕು ಕೊಠಡಿಗಳನ್ನು ಆಟದ ಮೈದಾನದ ಒಂದು ಭಾಗದಲ್ಲಿ ನಿರ್ಮಿಸಲು ಕಾಮಗಾರಿ ಆರಂಭಿಸಿರುವುದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದರು. ಈ ಹಿಂದೆ ಗುದ್ದಲಿಪೂಜೆ ಸಂದರ್ಭದಲ್ಲಿಯೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರು. ಇದೀಗ ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳ ಸೂಚನೆಯಂತೆ ಕಾಮಗಾರಿ ಆರಂಭಿಸಲಾಗಿದೆ ಎಂದು ತಿಳಿದುಬಂದಿದೆ.ಪಂಚಾಯಿತಿ ಮಾಜಿ ಸದಸ್ಯ ದಿವಾಕರ ಶೆಟ್ಟಿ ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿ, ಶಾಲೆ ಹಾಗೂ ಮೈದಾನ ನಿರ್ಮಾಣಕ್ಕೆ ಊರಿನವರ ಕೊಡುಗೆ ಅಪಾರವಾಗಿದೆ. ಈ ಭಾಗದಲ್ಲಿ ಇದೊಂದೇ ಆಟದ ಮೈದಾನವಾಗಿದ್ದು, ಇಲ್ಲಿ ಕಟ್ಟಡ ನಿರ್ಮಾಣವಾದರೆ ಸುಮಾರು 700 ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗಳಿಗೆ ತೊಂದರೆಯಾಗಲಿದೆ. ಶಾಲೆಯ ಅಭಿವೃದ್ಧಿಗೆ ವಿರೋಧವಿಲ್ಲ, ಪ್ರೌಢಶಾಲೆಯ ಹಳೆಯ ಕಟ್ಟಡದ ಸ್ಥಳದಲ್ಲಿ ಬಹುಮಹಡಿ ಕಟ್ಟಡ ನಿರ್ಮಿಸಿ ಕೊಠಡಿಗಳನ್ನು ನಿರ್ಮಿಸಬೇಕು ಎಂದು ಹೇಳಿದರು.

ತಾಪಂ ಮಾಜಿ ಸದಸ್ಯ ಎಂ.ಜಿ. ಮುಹಮ್ಮದ್, ಗ್ರಾ.ಪಂ. ಮಾಜಿ ಸದಸ್ಯ ಹರಿಪ್ರಸಾದ್ ಶೆಟ್ಟಿ, ಎಂ.ಎ. ಅಶ್ರಫ್, ಹಫೀಝ್ ತೋಡಾರ್, ಇಸ್ಮಾಯಿಲ್, ರಿಝ್ವಾನ್ ಸಹಿತ ಸ್ಥಳೀಯರು ಸ್ಥಳದಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಬಿಜೆಪಿ ಬೃಹತ್ ಪ್ರತಿಭಟನೆ
ನಿಪ್ಪಾಣಿಯಲ್ಲಿ ಅಕ್ರಮ ಪಡಿತರ ಅಕ್ಕಿ ದಂಧೆ ಬಯಲು