ಕನ್ನಡಪ್ರಭವಾರ್ತೆ ಮಧುಗಿರಿ
ಗುರುವಾರ ಇಲ್ಲಿನ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜೀವ್‌ಗಾಂಧಿ ಕ್ರೀಡಾಂಗಣ ನಿರ್ಮಾಣಕ್ಕೆ 10 ಕೋಟಿ ರು.ಮಂಜೂರಾಗಿದ್ದು ಇನ್ನೂ ಹೆಚ್ಚು ಅನುದಾನದ ಅವಶ್ಯಕತೆಯಿದೆ. ಅದನ್ನು ಸಹ ಮಂಜೂರು ಮಾಡಿಸಿ ಸುಸ್ಸಜ್ಜಿತ ಕ್ರೀಡಾಂಗಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದರು.ಸಹಕಾರ ಸಚಿವ ಕೆ.ಎನ್.ರಾಜಣ್ಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹತ್ತಾರು ಯೋಜನೆ ಕನಸು ಕಂಡಿದ್ದು,ಪ್ರಸ್ತುತ ಮಧುಗಿರಿ ಜಿಲ್ಲಾ ಕೇಂದ್ರವಾಗುವ ಎಲ್ಲ ಲಕ್ಷಣಗಳಿದ್ದು, ಅತಿ ಶೀಘ್ರದ್ಲಲೇ ವಿಶ್ವ ಪ್ರಸಿದ್ಧ ಏಕಶಿಲಾ ಬೆಟ್ಟಕ್ಕೆ ರೋಪ್‌ವೇ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ.ಇದಕ್ಕಾಗಿ 18 ಎಕರೆ ಭೂಮಿ ಮೀಸಲಿದ್ದು ಟೆಂಡರ್ ಕಾಲ್ ಮಾಡಿದ್ದು ಕೇಬಲ್ ಕಾರ್ ಅಳವಡಿಸಿ ಮಧುಗಿರಿಯನ್ನು ಪ್ರವಾಸಿ ತಾಣವನ್ನಾಗಿ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಎತ್ತಿಹೊಳೆ ಯೋಜನೆಯಡಿ ತಾಲೂಕಿನ ದೊಡ್ಡೇರಿ ಹೋಬಳಿ ಕೆರೆಗಳು ಸೇರಿ ಒಟ್ಟು 50 ಕೆರೆಗಳಿಗೆ 268 ಕೋಟಿ ಅನುದಾನ ಬಿಡುಗಡೆಯಾಗಿದ್ದು ಉಳಿದ ಕೆರೆಗಳನ್ನು ಸಚಿವರು ಆದ್ಯತೆ ಮೇರೆಗೆ ಅಭಿವೃದ್ಧಿ ಪಡಿಸಲಿದ್ದಾರೆ ಎಂದರು.ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಧ್ವಜಾರೋಹಣ ನೆರವೇರಿಸಿ ತಮ್ಮ ಸಂದೇಶದಲ್ಲಿ ಭಾರತ ದೇಶವು ಮಾಹಿತಿ,ತಂತ್ರಜ್ಞಾನ,ಶಿಕ್ಷಣ,ಕ್ರೀಡೆ ಸೇರಿ ಹತ್ತಾರು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ.ಸ್ವತಂತ್ರ ಭಾರತದ ಪ್ರಜೆಗಳು ನಮಗಿರುವ ಜವಾಬ್ದಾರಿ ಅರಿತು ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಎಲ್ಲರೂ ಪಣ ತೊಡಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸಿಬ್ಗತ್‌ವುಲ್ಲಾ, ಡಿವೈಎಸ್‌ಪಿ ರಾಮಚಂದ್ರಯ್ಯ, ತಾಪಂ ಇಓ ಲಕ್ಷ್ಮಣ್, ಪುರಸಭೆ ಮುಖ್ಯಾಧಿಕಾರಿ ಎಸ್.ಸುರೇಶ್, ಸಿಡಿಪಿಓ ಕಮಲ , ಶಿಕ್ಷಣಾಧಿಕಾರಿ ಎಂ.ವಿ.ರಾಜಣ್ಣ, ಬಿಇಒ ಹನುಮಂತರಾಯಪ್ಪ, ನೌಕರರ ಸಂಘದ ಅಧ್ಯಕ್ಷ ಕೆ.ಟಿ.ಸಿದ್ದೇಶ್ವರ, ಪುರಸಭೆ ಮಾಜಿ ಅಧ್ಯಕ್ಷರಾದ ಎಂ.ಕೆ.ನಂಜುಂಡರಾಜು, ಎನ್.ಗಂಗಣ್ಣ,ಅಯೂಬ್, ಸದಸ್ಯರಾದ ಲಾಲಪೇಟೆ ಮಂಜುನಾಥ್, ಮಂಜುನಾಥ್ ಆಚಾರ್,ಅಲೀಮ್, ಶ್ರೀಧರ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ನಾಗೇಶ್‌ಬಾಬು, ಕಸಾಪ ಅಧ್ಯಕ್ಷೆ ಸಹನಾ ನಾಗೇಶ್, ದಸಾಪ ಅಧ್ಯಕ್ಷ ಡಾ.ಮಹರಾಜ್, ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಕಾಂತ್, ಡಿ.ಎಸ್.ಮುನೀಂದ್ರ ಕುಮಾರ್, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ದೊಡ್ಡೇರಿ ಕಣಿಮಯ್ಯ, ಸಿಪಿಐ ಹನುಮಂತರಾಯಪ್ಪ, ಪಿಎಸ್‌ಐ ವಿಜಯ್‌ಕುಮಾರ್ , ಮುಖಂಡ ಎಂ.ಎಸ್.ಮಲ್ಲಿಕಾರ್ಜುನಯ್ಯ ಸೇರಿದಂತೆ ಇತರರಿದ್ದರು.