ಜಯನಗರ ಶಾಲೆಗೆ ವೇದಿಕೆ ನಿರ್ಮಿಸಿದ ರೋಟರಿ ಕ್ಲಬ್

KannadaprabhaNewsNetwork |  
Published : Jun 16, 2025, 03:20 AM IST
43 | Kannada Prabha

ಸಾರಾಂಶ

ಮೈಸೂರು: ರೋಟರಿ ಕ್ಲಬ್ ಆಫ್ ಮೈಸೂರು ಸೌತ್ ಈಸ್ಟ್ ವತಿಯಿಂದ ಜಯನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 3 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ವೇದಿಕೆಯನ್ನು ಜಿಲ್ಲಾ ಗೌವರ್ನರ್ವಿಕ್ರಂದತ್ತ ಉದ್ಘಾಟಿಸಿದರು.

ಮೈಸೂರು: ರೋಟರಿ ಕ್ಲಬ್ ಆಫ್ ಮೈಸೂರು ಸೌತ್ ಈಸ್ಟ್ ವತಿಯಿಂದ ಜಯನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 3 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ವೇದಿಕೆಯನ್ನು ಜಿಲ್ಲಾ ಗೌವರ್ನರ್ವಿಕ್ರಂದತ್ತ ಉದ್ಘಾಟಿಸಿದರು.

ಶುಕ್ರವಾರ ಬೆಳಗ್ಗೆ ಶಾಲಾ ಆವರಣದಲ್ಲಿ ನಿರ್ಮಿಸಿರುವ ನೂತನ ವೇದಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ರೋಟರಿ ಕ್ಲಬ್ ಆಫ್ ಮೈಸೂರು ಸೌತ್ ಈಸ್ಟ್ ನಲ್ಲಿ ಇದುವರೆಗೂ ಅಧ್ಯಕ್ಷರಾಗಿದ್ದ ಎಲ್ಲರೂ ಉತ್ತಮ ಸಮಾಜಮುಖಿ ಕೆಲಸಗಳನ್ನು ಮಾಡಿ ಗಮನ ಸೆಳೆದಿದ್ದಾರೆ. ಅದೇ ರೀತಿ ಕೆ.ಎ. ಗೋವರ್ಧನ್ ಯಾದವ್ ಅವರೂ ಕೂಡ ಜಯನಗರ ಸರ್ಕಾರಿ ಶಾಲೆಗೆ ಅಗತ್ಯವಾಗಿ ಬೇಕಾದ ವೇದಿಕೆಯನ್ನು 3 ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಟ್ಟಿರುವುದು ಶ್ಲಾಘನೀಯ.

ಈ ವೇದಿಕೆಯಲ್ಲಿ ಮಕ್ಕಳು ಯಾವುದೇ ಸಭೆ ಸಮಾರಂಭ, ಸಾಂಸ್ಕೃತಿಕ ಚಟುವಟಿಕೆ ನಡೆಸಬಹುದು. ಪಠ್ಯ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಮಕ್ಕಳ ಪ್ರತಿಭೆ ಅನಾವರಣವಾಗುತ್ತದೆ. ಮಕ್ಕಳ ಪ್ರತಿಭೆ ಅನಾವರಣಕ್ಕೆ ಈ ವೇದಿಕೆ ಸಹಾಯವಾಗುತ್ತದೆ. ಇಂತಹ ಶಾಶ್ವತ ಉಪಯೋಗಿ ಕಾರ್ಯಕ್ರಮಗಳನ್ನು ನಮ್ಮ ಸಂಸ್ಥೆ ಮಾಡುತ್ತಿದೆ. ಈ ಚಟುವಟಿಕೆ ಕಾರ್ಯದಲ್ಲಿ ಕೈ ಜೋಡಿಸಿದ ಎಲ್ಲರೂ ಅಭಿನಂದನಾರ್ಹರು ಎಂದರು.

ಕಳೆದ ಮಾರ್ಚ್ನಲ್ಲಿ ವೇದಿಕೆ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ನೆರವೇರಿಸಿದ್ದೆ. ಮೂರು ತಿಂಗಳ ಬಳಿಕ ನಾನೇ ಇದನ್ನು ಉದ್ಘಾಟಿಸುತ್ತಿರುವುದು ಸಂತಸ ತಂದಿದೆ. ಮಕ್ಕಳು ತಾವು ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿದ್ದೇವೆ ಎಂಬ ಕೀಳರಿಮೆ ಬಿಟ್ಟು ಉತ್ತಮವಾಗಿ ಕಲಿತು ನಿಮ್ಮ ಶಾಲೆಗೆ ನಾಡಿಗೆ ಪೋಷಕರಿಗೆ ಗೌರವ ತರುವ ಕೆಲಸ ಮಾಡಬೇಕು ಎಂದರು.

ಬಿಇಒ ಸಿ.ಎನ್. ರಾಜು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮ ರೂಪಿಸಿದೆ. ಮಕ್ಕಳಿಗೆ ಬಿಸಿಯೂಟ, ಬಾಳೆಹಣ್ಣು, ಮೊಟ್ಟೆ, ಉಚಿತ ಸಮವಸ್ತ್ರ, ಉಚಿತ ಪುಸ್ತಕ ನೀಡುವುದರ ಜತೆಗೆ ವಿದ್ಯಾರ್ಥಿ ವೇತನವನ್ನು ನೀಡುತ್ತದೆ. ಈ ರೀತಿ ಹಲವು ಕಾರ್ಯಕ್ರಮಗಳನ್ನು ಸರ್ಕಾರ ಒದಗಿಸುತ್ತಿದೆ. ಇದರ ಜತೆಗೆ ಸಂಘ ಸಂಸ್ಥೆಗಳು ಕೂಡ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕರಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಪದಾಧಿಕಾರಿಗಳನ್ನು ಶಾಲೆ ವತಿಯಿಂದ ಸನ್ಮಾನಿಸಲಾಯಿತು. ನಂತರ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಈ ವೇಳೆ ಎಂ. ರಾಜೀವ್, ಎಂ. ಮೋಹನ್, ಕೆ.ಎ. ಗೋವರ್ಧನ್ ಯಾದವ್, ಆರ್. ರಮೇಶ್ರಾವ್, ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ. ನಿಂಗರಾಜ್ ಗೌಡ, ವೆಂಕಟೇಶ್, ನಾಗರಾಜ್, ರಾಕೇಶ್ ಭಟ್, ಮುರಳಿ, ರವೀಂದ್ರ ಸೇರಿದಂತೆ ಶಾಲಾ ಶಿಕ್ಷಕರು ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ