ಆರೋಗ್ಯ ಸೇವೆಗಳಿಗೆ ರೋಟರಿ ಕ್ಲಬ್ ಆದ್ಯತೆ ನೀಡಲಿ

KannadaprabhaNewsNetwork |  
Published : Aug 25, 2026, 01:30 AM IST
ಪೋಟೋ 24hsd1: ಹೊಸದುರ್ಗ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಉಚಿತ ಮಂಡಿ ಚಿಪ್ಪು ಬದಲಾವಣೆ ಹಾಗೂ ಉಚಿತ ಸರ್ವಿಕಲ್ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಶಾಸಕ ಬಿಜಿ ಗೋವಿಂದಪ್ಪ ಉದ್ಘಾಟಿಸಿದರು. | Kannada Prabha

ಸಾರಾಂಶ

Rotary Club should prioritize health services

ಹೊಸದುರ್ಗ: ಮಂಡಿ ನೋವಿನಿಂದ ಬಳಲುತ್ತಿರುವ ಹಿರಿಯರನ್ನು ನಿರ್ಲಕ್ಷಿಸದೆ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವುದು ಪ್ರತಿಯೊಬ್ಬ ಕುಟುಂಬದ ಜವಾಬ್ದಾರಿ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಹೇಳಿದರು.

ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ರೋಟರಿ ಕ್ಲಬ್ ಹೊಸದುರ್ಗ ಹಾಗೂ ಸಂಜಯ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಮಂಡಿ ಚಿಪ್ಪು ಬದಲಾವಣೆ ಹಾಗೂ ಉಚಿತ ಸರ್ವಿಕಲ್ ಕ್ಯಾನ್ಸರ್ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿರುವ ಪಟ್ಟಣದ ರೋಟರಿ ಕ್ಲಬ್ ನಿರಂತರವಾಗಿ ತನ್ನ ಸೇವಾ ಚಟುವಟಿಕೆಯನ್ನು ಮಾಡಿ ಸಾಮಾಜಿಕ ಕಾರ್ಯದಲ್ಲಿ ತೊಡಗಿ ಕೊಳ್ಳಬೇಕು. ಉತ್ತಮ ಯುವಕರ ತಂಡ ರೋಟರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ರೈತರ ಜನಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿ ಉಚಿತ ಮಂಡಿ ಚಿಪ್ಪು ಬದಲಾವಣೆ ಕಾರ್ಯಕ್ರಮವನ್ನ ಮಾಡುತ್ತಿರುವುದು ಶ್ಲಾಘನೀಯ ಎಂದರು.

ರೋಟರಿ ಕ್ಲಬ್ ಚೇರ್ಮನ್ ಸದ್ಗುರು ಪ್ರದೀಪ್ ಮಾತನಾಡಿ ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ಮರಳಿಸುವ ಉದ್ದೇಶದಿಂದ ಈ ಸೇವಾ ಕಾರ್ಯ ಕೈಗೊಳ್ಳಲಾಗಿದೆ. ಮಂಡಿ ನೋವಿನಿಂದ ಬಳಲುತ್ತಿರುವವರಿಗೆ ಮಾತ್ರೆ, ಎಕ್ಸ್‌ರೇ, ಚಿಕಿತ್ಸೆ ಹಾಗೂ ಅಗತ್ಯವಿದ್ದಲ್ಲಿ ಶಸ್ತ್ರಚಿಕಿತ್ಸೆಯನ್ನೂ ಉಚಿತವಾಗಿ ಒದಗಿಸುವ ಉದ್ದೇಶವಿದೆ ಎಂದರು.

ಮಕ್ಕಳ ಭವಿಷ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ಹಿರಿಯರು ಇಂದು ಮಂಡಿ ನೋವಿನಿಂದ ಬಳಲುತ್ತಿದ್ದರೆ, ಅವರನ್ನು ನಿರ್ಲಕ್ಷ್ಯ ಮಾಡಬಾರದು. ಅವರ ತ್ಯಾಗವನ್ನು ನೆನಪಿಸಿಕೊಂಡು ಮಕ್ಕಳಾದ ನಾವು ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಿ, ಆರೋಗ್ಯದಿಂದ ಬದುಕಲು ನೆರವಾಗಬೇಕು ಎಂದರು.

ರೋಟರಿ ಕ್ಲಬ್ ಅಧ್ಯಕ್ಷ ಜ್ಯೋತಿಷ್ ಚೌಧರಿ ಮಾತನಾಡಿ ಮಂಡಿ ನೋವನ್ನು ಸಹಜ ಸಮಸ್ಯೆ ಎಂದು ನಿರ್ಲಕ್ಷಿಸದೆ ಆರಂಭದಲ್ಲೇ ವೈದ್ಯರನ್ನು ಸಂಪರ್ಕಿಸಬೇಕು. ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸರ್ವಿಕಲ್ ಕ್ಯಾನ್ಸರ್‌ನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ನಿಯಮಿತ ತಪಾಸಣೆ ಅತ್ಯಂತ ಮುಖ್ಯ. ಮಹಿಳೆಯರು ಯಾವುದೇ ಮುಜುಗರವಿಲ್ಲದೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಡಾ. ಸಂಜಯ್, ಡಾ. ಸುನಿಲ್, ಡಾ. ಮಂಜುನಾಥ್, ಡಾ. ಶ್ರೀಧರ್, ಡಾ. ನಿಶಾ, ಡಾ. ದರ್ಶನ್ ಸೇರಿದಂತೆ ರೋಟರಿ ಕ್ಲಬ್ ಪದಾಧಿಕಾರಿಗಳು, ಸದಸ್ಯರು, ವೈದ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಪೋಟೋ 24hsd1: ಹೊಸದುರ್ಗ ಪಟ್ಟಣದಲ್ಲಿ ಆಯೋಜಿಸಿದ್ದ ಉಚಿತ ಮಂಡಿ ಚಿಪ್ಪು ಬದಲಾವಣೆ ಹಾಗೂ ಉಚಿತ ಸರ್ವಿಕಲ್ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಶಾಸಕ ಬಿ.ಜಿ. ಗೋವಿಂದಪ್ಪ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿಕ್ಕಬಳ್ಳಾಫುರ ಜಿಲ್ಲೇಲಿ 9,44,623 ಮತದಾರರು
ಕರಾಟೆ ಇನ್ನೊಬ್ಬರ ಮೇಲಿನ ದಾಳಿಗೆ ಉಪಯೋಗಿಸುವಂಥ ಕಲೆಯಲ್ಲ: ಪಿ. ವೈ.ಶಿಹಾನ್ ನಾಸಿರುದ್ದೀನ್