ಗಾಂಧಿ ಜಯಂತಿಯ ಪ್ರಯುಕ್ತ ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್ ಹಾಗೂ ಪುರಸಭೆಯ ಸಹಭಾಗಿತ್ವದಲ್ಲಿ ಶುಕ್ರವಾರ ಮೂಡುಬಿದಿರೆಯಲ್ಲಿ ನಡೆದ ಬೃಹತ್ ಸ್ವಚ್ಛತಾ ಜಾಗೃತಿ ಅಭಿಯಾನದಂಗವಾಗಿ ಕಾಮಧೇನು ಸಭಾಭವನದಲ್ಲಿ ಪುರಸಭೆಯ ಪೌರಕಾರ್ಮಿಕರಿಗೆ ಆಯುಷ್ಮಾನ್ ಕಾರ್ಡ್ ವಿತರಿಸಿ
ಮೂಡುಬಿದಿರೆ: ಬೆಳಿಗ್ಗೆ ನಾವೆಲ್ಲರೂ ಎದ್ದೇಳುವ ಮೊದಲೇ ನಮ್ಮ ಊರು, ಪರಿಸರ ಸ್ವಚ್ಛತೆಗೊಳಿಸುವ ಮೂಲಕ ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುವವರು ಪೌರಕಾರ್ಮಿಕರು ಎಂದು ರೋಟರಿ ಜಿಲ್ಲಾ ರಾಜ್ಯಪಾಲ ಸತೀಶ್ ಬೋಳಾರ ಹೇಳಿದರು. ಗಾಂಧಿ ಜಯಂತಿಯ ಪ್ರಯುಕ್ತ ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್ ಹಾಗೂ ಪುರಸಭೆಯ ಸಹಭಾಗಿತ್ವದಲ್ಲಿ ಶುಕ್ರವಾರ ಮೂಡುಬಿದಿರೆಯಲ್ಲಿ ನಡೆದ ಬೃಹತ್ ಸ್ವಚ್ಛತಾ ಜಾಗೃತಿ ಅಭಿಯಾನದಂಗವಾಗಿ ಕಾಮಧೇನು ಸಭಾಭವನದಲ್ಲಿ ಪುರಸಭೆಯ ಪೌರಕಾರ್ಮಿಕರಿಗೆ ಆಯುಷ್ಮಾನ್ ಕಾರ್ಡ್ ವಿತರಿಸಿ, ಸನ್ಮಾನಿಸಿ ಮಾತನಾಡಿದರು.
ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಕೆ. ಪಿ. ಸುಚರಿತ ಶೆಟ್ಟಿ ಮಾತನಾಡಿ, ಸ್ವಚ್ಛ ಪರಿಸರದ ಕಲ್ಪನೆ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಪುರಸಭೆಯ ಮಾಜಿ ಉಪಾಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯ ಪಿ. ಕೆ. ಥೋಮಸ್, ಪರಿಸರ ಅಭಿಯಂತರೆ ಶಿಲ್ಪಾ, ರೋಟರಿ ಕ್ಲಬ್ ನ ಅಧ್ಯಕ್ಷ ಡಾ. ಆಶೀರ್ವಾದ್, ಇನ್ನರ್ ವ್ಹೀಲ್ ಕ್ಲಬ್ ನ ಉಪಾಧ್ಯಕ್ಷೆ ಅನಿತಾ ಶೆಟ್ಟಿ, ರೋಟರಿ ಕ್ಲಬ್ ಮಿಡ್ ಟೌನ್ ಅಧ್ಯಕ್ಷ ಮುರಳೀಧರ್ ಕೋಟ್ಯಾನ್, ರೋಟರಿ ಕ್ಲಬ್ ಝೋನ್ 4ರ ಸಹಾಯಕ ಗವರ್ನರ್ ಶ್ರೀಕಾಂತ್ ಕಾಮತ್, ಝೋನ್ 4ರ ವಲಯ ಸೇನಾನಿ ಪೂರ್ಣಚಂದ್ರ ಜೈನ್, ಮೂಡುಬಿದಿರೆ ಪ್ರೆಸ್ ಕ್ಲಬ್ ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ನವೀನ್ ಕರ್ಕೇರಾ, ಪವರ್ ಫ್ರೆಂಡ್ಸ್ ಬೆದ್ರದ ಅಧ್ಯಕ್ಷ ವಿನಯ್ ಕುಮಾರ್, ಜವನೆರ್ ಬೆದ್ರದ ಅಧ್ಯಕ್ಷ ಅಮರ್ ಕೋಟೆ, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷ ನಿತಿನ್ ಬೆಳುವಾಯಿ, ಜೈನ್ ಮಿಲನ್ ನ ಅಧ್ಯಕ್ಷ ಮಹೇಂದ್ರ ಕುಮಾರ್ ಜೈನ್ ಇದ್ದರು. ರೋಟರಿ ಮೂಡುಬಿದಿರೆ ಟೆಂಪಲ್ ಟೌನ್ ನ ಅಧ್ಯಕ್ಷ ಡೆನ್ನಿಸ್ ಪಿರೇರಾ ಸ್ವಾಗತಿಸಿದರು. ಪುರಸಭೆಯ ಮುಖ್ಯಾಧಿಕಾರಿ ಇಂದು ಎಂ. ಪ್ರಾಸ್ತಾವಿಕವಾಗಿ ಮಾತನಾಡಿ ನಂತರ ಪ್ರಮಾಣ ವಚನ ಬೋಧಿಸಿದರು. ಪುರಸಭೆಯ ಆಶಾ ವಿವಿಧ ಕ್ರೀಡಾ ಸ್ಪಧೆ೯ಗಳ ಬಹುಮಾನಿತರ ವಿವರ ನೀಡಿದರು. ಪ್ರವೀಣ್ ಪಿರೇರಾ ಕಾಯ೯ಕ್ರಮ ನಿರೂಪಿಸಿದರು. ರೋಟರಿ ಮೂಡುಬಿದಿರೆ ಟೆಂಪಲ್ ಟೌನ್ ನ ಕಾರ್ಯದರ್ಶಿ ಜಯಪ್ರಕಾಶ್ ಭಂಡಾರಿ ವಂದಿಸಿದರು.
ಇದಕ್ಕೂ ಮೊದಲು ರೋಟರಿ ಸಂಸ್ಥೆಯ ಬಳಿಯಿಂದ ಸ್ವರಾಜ್ಯ ಮೈದಾನದವರೆಗೆ ಸ್ವಚ್ಛತಾ ಜಾಗೃತಿ ಜಾಥಾ ನಡೆಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.