ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಸಂಬಂಧಿತ ಮಾಹಿತಿ ನೀಡಿದ ಮಧುಸೂದನ್, ಫೆ.23 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಇದೇ ಮೊದಲ ಬಾರಿಗೆ ರೋಟರಿ ಜಿಲ್ಲೆ 3181 ನ ರೋಟರಿ ಸದಸ್ಯರಿಗಾಗಿ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ. ಇದೇ ಸಂದರ್ಭ ಮಿಸ್ಟಿ ಹಿಲ್ಸ್ ವತಿಯಿಂದ ರೆಡ್ ಕ್ರಾಸ್ ಕೊಡಗು ಮತ್ತು ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಸ್ಥೆಗಳ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು.
ರೋಟರಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿ ಸಮಿತಿ ಅಧ್ಯಕ್ಷ ಜಯಂತ್ ಪೂಜಾರಿ ಮಾಹಿತಿ ನೀಡಿ, ಫೆ. 23 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಮಡ್ ಕಬಡ್ಡಿ ಪಂದ್ಯಾವಳಿಗೆ ಚಾಲನೆ ದೊರಕಲಿದೆ.ರೋಟರಿ ಜಿಲ್ಲಾ ಮಟ್ಟದ ಮಡ್ ಕಬಡ್ಡಿ ಪಂದ್ಯಾವಳಿಯ ಪ್ರಥಮ ಬಹುಮಾನ ವಿಜೇತರಿಗೆ 25 ಸಾವಿರ ರು. ನಗದು, ದ್ವಿತೀಯ ಬಹುಮಾನವಾಗಿ 15 ಸಾವಿರ ರು. ನಗದು ಮತ್ತು ತೃತೀಯ ಮತ್ತು ಚತುರ್ಥ ಬಹುಮಾನ ವಾಗಿ ತಲಾ 8000 ಸಾವಿರ ರು. ನಗದು ಹಾಗೂ ವಿಜೇತರಿಗೆ ಆಕರ್ಷಕ ಟ್ರೋಫಿ ನೀಡಲಾಗುತ್ತದೆ ಎಂದು ಜಯಂತ್ ಪೂಜಾರಿ ಮಾಹಿತಿ ನೀಡಿದರು.
ಫೆ. 23 ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಕಬಡ್ಡಿ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲೆ 3181 ನ ಗವರ್ನರ್ ವಿಕ್ರಂದತ್ತ, ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ. ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜಾ, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ನಗರಸಭಾ ಪೌರಾಯುಕ್ತ ರಮೇಶ್, ಆಮೆಚೂರ್ ಕಬಡ್ಡಿ ಅಸೋಸಿಯೇಷನ್ ಸೆಕ್ರೆಟರಿ ಹೊಸೋಕ್ಲು ಉತ್ತಪ್ಪ, ರೋಟರಿ ವಲಯ 6 ರ ಸಹಾಯಕ ಗವರ್ನರ್ ದೇವಣಿರ ಕಿರಣ್, ವಲಯ ಸೇನಾನಿ ಅನಿತಾ ಪೂವಯ್ಯ ಪಾಲ್ಗೊಳ್ಳಲಿದ್ದಾರೆ. ಸಂಜೆ 7 ಗಂಟೆಗೆ ಮಡಿಕೇರಿಯ ರೋಟರಿ ಸಭಾಂಗಣದಲ್ಲಿ ರೋಟರಿ ಜಿಲ್ಲಾ ಗವರ್ನರ್ ವಿಕ್ರಂದತ್ತ ಅವರು ವಿಜೇತ ತಂಡಗಳಗೆ ಬಹುಮಾನ ವಿತರಿಸಲಿದ್ದಾರೆ ಎಂದೂ ಕಪಿಲ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನ ಕಬಡ್ಡಿ ಪಂದ್ಯಾವಳಿ ಆಯೋಜಕ ಸಮಿತಿ ಪ್ರಮುಖರಾದ ಮೋಹನ್ ಪ್ರಭು, ಪ್ರಕಾಶ್ ಪೂವಯ್ಯ ಉಪಸ್ಥಿತರಿದ್ದರು.