ಸರಿದಾರಿಯಲ್ಲಿ ಸಮಾಜ ನಡೆಸುವ ಸಾಮರ್ಥ್ಯ ಮಹಿಳೆಗಿದೆ

KannadaprabhaNewsNetwork |  
Published : Jul 23, 2025, 12:30 AM IST
52 | Kannada Prabha

ಸಾರಾಂಶ

ದೇಶ ಕಟ್ಟುವ ಮುಖ್ಯವಾಹಿನಿಯಲ್ಲಿ ಮಹಿಳೆಯರ ಪಾತ್ರ ಬಹುದೊಡ್ಡದಿದೆ. ಮಹಿಳೆ ಎಂದರೆ ಅಡುಗೆ ಮನೆಗೆ ಸೀಮಿತ ಎನ್ನುವ ಕಾಲ ಈಗಿಲ್ಲ.

ಕನ್ನಡಪ್ರಭ ವಾರ್ತೆ ಹುಣಸೂರು

ಮನೆಯನ್ನು ಸಮರ್ಥವಾಗಿ ಮುನ್ನಡೆಸುವ ಮಹಿಳೆಯರು ಸಮಾಜವನ್ನು ಸರಿದಾರಿಯಲ್ಲಿ ನಡೆಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ರೋಟರಿ ವಿದ್ಯಾಸಂಸ್ಥೆಯ ನಿವೃತ್ತ ಮುಖ್ಯಶಿಕ್ಷಕಿ ಉಮಾ ಶೆಣೈ ಅಭಿಪ್ರಾಯಪಟ್ಟರು.

ಪಟ್ಟಣದ ರೋಟರಿ ಭವನದಲ್ಲಿ ರೋಟರಿ ಇನ್ನರ್‌ ವೀಲ್ ಹುಣಸೂರು ವತಿಯಿಂದ ಮಂಗಳವಾರ ಆಯೋಜಿಸಿದ್ದ 2025-26ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಅವರು ಮಾತನಾಡಿ, ರೋಟರಿ ಸಂಸ್ಥೆಯ ಅಂಗಸಂಸ್ಥೆಯಾಗಿ ಇನ್ನರ್‌ ವೀಲ್ ಮಹಿಳೆಯರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ. ದೇಶ ಕಟ್ಟುವ ಮುಖ್ಯವಾಹಿನಿಯಲ್ಲಿ ಮಹಿಳೆಯರ ಪಾತ್ರ ಬಹುದೊಡ್ಡದಿದೆ. ಮಹಿಳೆ ಎಂದರೆ ಅಡುಗೆ ಮನೆಗೆ ಸೀಮಿತ ಎನ್ನುವ ಕಾಲ ಈಗಿಲ್ಲ. ಸಾಧನೆ ಸಾಧಕನ ಆಸ್ತಿ. ಮಹಿಳೆಯರು ಪ್ರವೇಶಿಸದ ಕ್ಷೇತ್ರವಿಲ್ಲ. ಸಮಾಜದ ಹಳೆಯ ಕಟ್ಟುಪಾಡುಗಳನ್ನು ಬಿಟ್ಟು ಮನೆಯ ಶ್ರೇಯೋಭಿವೃದ್ಧಿಗೆ ದುಡಿದಂತೆ ಸಮಾಜದ ಶ್ರೇಯೋಭಿವೃದ್ಧಿಗಾಗಿಯೂ ದುಡಿದು ಸಾಧಿಸಬಲ್ಲಳು ಎನ್ನುವುದನ್ನು ನೋಡುತ್ತಿದ್ದೇವೆ ಎಂದರು.

ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಜ್ಯೋತಿ ವಿಶ್ವನಾಥ್ ಮಾತನಾಡಿ, ಸಾಮಾಜಿಕ ಸೇವೆ ಎನ್ನುವುದು ಫ್ಯಾಷನ್ ಆಗದೇ ವೃತ್ತಿಪರತೆಯನ್ನು ರೂಢಿಸಿಕೊಂಡು ಮುನ್ನಡೆಯುವ ಅವಶ್ಯಕತೆಯಿದೆ. ಸಮಾಜದಲ್ಲಿ ಏನೂ ಇಲ್ಲದ ಕುಟುಂಬಗಳು ಇಂದಿಗೂ ಇವೆ. ಶಿಕ್ಷಣಪಡೆಯಲಾಗದ ಮಕ್ಕಳೂ ಇದ್ದಾರೆ. ಇಲ್ಲದವರ ಬಾಳಿಗೆ ಕೈಲಾದ ಸಹಾಯಹಸ್ತ ಚಾಚುವುದೇ ನನ್ನ ಗುರಿಯಾಗಿದ್ದು, ಎಲ್ಲ ಸದಸ್ಯರ ಸಹಕಾರ ಮತ್ತು ಅಭಿಪ್ರಾಯಗಳನ್ನು ಗೌರವಿಸಿ ಮುನ್ನಡೆಯಲಿದ್ದೇನೆ ಎಂದರು.

ನಿಕಟಪೂರ್ವ ಅಧ್ಯಕ್ಷೆ ಸ್ಮಿತಾ ದಯಾನಂದ್ ತಮ್ಮ ಅವಧಿಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಕ್ಲಬ್‌ನ ಉಪಾಧ್ಯಕ್ಷೆಯಾಗಿ ಜಯಲಕ್ಷ್ಮೀ, ಕಾರ್ಯದರ್ಶಿಯಾಗಿ ಕನಿಮೋಳಿ ತಂಗಮರಿಯಪ್ಪನ್, ಖಜಾಂಚಿಯಾಗಿ ರಾಜೇಶ್ವರಿ, ಬುಲೆಟಿನ್ ಎಡಿಟರ್ ಆಗಿ ಸುಜಾತ ವರದರಾಜ್ ಮತ್ತು ಐಎಸ್‌ಒ ಆಗಿ ಶಿವಕುಮಾರಿ ಪದಗ್ರಹಣ ಸ್ವೀಕರಿಸಿದರು.

ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಡಾ. ಸರೋಜಿನಿ ವಿಕ್ರಂ, ವಿಜಯ ಕರೀಗೌಡ ಮತ್ತು ಜ್ಯೋತೇಶ್ವರಿ ಚಿಕ್ಕಮಲ್ಲೇಗೌಡರನ್ನು ಸನ್ಮಾನಿಸಲಾಯಿತು.

ರೋಟರಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕಗಳನ್ನು ವಿತರಿಸಲಾಯಿತು. ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರದ ಕಾರ್ಯಕ್ಕಾಗಿ ಬಟ್ಟೆ ಬ್ಯಾಗ್‌ಗಳನ್ನು ವಿತರಿಸಲಾಯಿತು. ಕ್ಲಬ್‌ನ ಸದಸ್ಯರು, ಬೆಂಗಳೂರು, ಕುಶಾಲನಗರ ಮತ್ತು ಮೈಸೂರು ಇನ್ನರ್ ವೀಲ್ ಕ್ಲಬ್ ಸದಸ್ಯರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ