ಚನ್ನಪಟ್ಟಣ: ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಕರ್ನಾಟಕ ಪಬ್ಲಿಕ್ ಶಾಲೆ ಮುಖ್ಯ ಶಿಕ್ಷಕ ಯೋಗೇಶ್ ಚಕ್ಕೆರೆ ಹಾಗೂ ಜ್ಞಾನ ಸರೋವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ರೋಟರಿ ಇಂಟರ್ ನ್ಯಾಷನಲ್ ಜಿಲ್ಲೆ ೩೧೯೧ರ ಬೇಸಿಕ್ ಎಜುಕೇಷನ್ ಆಂಡ್ ಲಿಟರಸಿ ವಿಭಾಗದ ನೇಷನ್ ಬಿಲ್ಡರ್ ಅವಾರ್ಡ್ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪುರಸ್ಕೃತರಿಗೆ ಚನ್ನಪಟ್ಟಣದ ರೋಟರಿ ಟಾಯ್ ಸಿಟಿ ಅಧ್ಯಕ್ಷ ಸಂತೋಷ್ ಪಾಪಣ್ಣ, ಕಾರ್ಯದರ್ಶಿ ಆದರ್ಶ್ ಕುಮಾರ್, ರೋಟರಿ ನಿಕಟ ಪೂರ್ವ ಅಧ್ಯಕ್ಷ ಹಾಗೂ ನಗರಸಭೆ ಅಧ್ಯಕ್ಷ ಬಿ.ಎಂ.ನಾಗೇಶ್, ಮಾಜಿ ಅಧ್ಯಕ್ಷರಾದ ರಾಜೇಶ್, ಬಿ. ಶ್ರೀನಿವಾಸ್, ನಿತಿನ್ ಮೋಹನ್, ತೇಜಸ್, ರಘು, ಜಯರಾಮು, ಲೋಕೇಶ್ ಇತರರು ಅಭಿನಂದನೆ ಸಲ್ಲಿಸಿದ್ದಾರೆ.ಪೊಟೋ೨೮ಸಿಪಿಟಿ೨:
ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಕರ್ನಾಟಕ ಪಬ್ಲಿಕ್ ಶಾಲೆ ಮುಖ್ಯಶಿಕ್ಷಕ ಯೋಗೇಶ್ ಚಕ್ಕೆರೆ ಹಾಗೂ ಜ್ಞಾನ ಸರೋವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ ಅವರಿಗೆ ರೋಟರಿ ಇಂಟರ್‌ನ್ಯಾಷನಲ್ ಜಿಲ್ಲೆ ೩೧೯೧ರ ಬೇಸಿಕ್ ಎಜುಕೇಷನ್ ಆಂಡ್ ಲಿಟರಸಿ ವಿಭಾಗದ ನೇಷನ್ ಬಿಲ್ಡರ್ ಅವಾರ್ಡ್ ಪ್ರದಾನ ಮಾಡಲಾಯಿತು.