ಹೆಚ್ಚು ಗಿಡಮರ ಪೋಷಿಸುವ ರೋಟರಿ ಕಾರ್ಯ ಶ್ಲಾಘನೀಯ

KannadaprabhaNewsNetwork |  
Published : Aug 20, 2024, 12:56 AM IST
ಶಿವಮೊಗ್ಗ ನಗರದ ರೋಟರಿ ಬಯೋ ಡೈವರ್ಸಿಟಿ ಪಾರ್ಕ್ ನಲ್ಲಿ ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ಹಾಗೂ ಶಿವಮೊಗ್ಗ ನಗರದ ಎಲ್ ಐಸಿ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವನಮೋತ್ಸವ ಕಾರ್ಯಕ್ರಮಕ್ಕೆ ಎಲ್ ಐಸಿ ಸೀನಿಯರ್ ಡಿವಿಜನಲ್ ಮ್ಯಾನೇಜರ್ ಶ್ರೀನಿವಾಸ್ ಅಭಿಮತ ಚಾಲನೆ ನೀಡಿದರು. | Kannada Prabha

ಸಾರಾಂಶ

ಬಯೋ ಡೈವರ್ಸಿಟಿ ಪಾರ್ಕ್ ತುಂಬಾ ಅದ್ಭುತವಾಗಿ ಕಾರ್ಯನಿರ್ವಹಿಸುತ್ತಿದ್ದು, ಸುಮಾರು 10,000 ಗಳಿಗಿಂತ ಹೆಚ್ಚು ಗಿಡಮರಗಳನ್ನು ಪೋಷಣೆ ಮಾಡುತ್ತಿರುವ ರೋಟರಿ ಸಂಸ್ಥೆಯ ಕಾರ್ಯಕ್ಕೆ ಧನ್ಯವಾದ

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಬಯೋ ಡೈವರ್ಸಿಟಿ ಪಾರ್ಕ್ ತುಂಬಾ ಅದ್ಭುತವಾಗಿ ಕಾರ್ಯನಿರ್ವಹಿಸುತ್ತಿದ್ದು, ಸುಮಾರು 10,000 ಗಳಿಗಿಂತ ಹೆಚ್ಚು ಗಿಡಮರಗಳನ್ನು ಪೋಷಣೆ ಮಾಡುತ್ತಿರುವ ರೋಟರಿ ಸಂಸ್ಥೆಯ ಕಾರ್ಯಕ್ಕೆ ಧನ್ಯವಾದಗಳು. ಮುಂದಿನ ದಿನಗಳಲ್ಲಿ ಎಲ್ಐಸಿ ಸಂಸ್ಥೆ ಸಮಾಜಮುಖಿ ಕೆಲಸಗಳಿಗೆ ರೋಟರಿ ಸಂಸ್ಥೆಯೊಂದಿಗೆ ಇರುತ್ತೇವೆ ಎಂದು ಎಲ್ಐಸಿ ಸೀನಿಯರ್ ಡಿವಿಜನಲ್ ಮ್ಯಾನೇಜರ್ ಶ್ರೀನಿವಾಸ್ ಅಭಿಮತ ವ್ಯಕ್ತಪಡಿಸಿದರು.

ನಗರದ ರೋಟರಿ ಸಂಸ್ಥೆ ಪ್ರಾಜೆಕ್ಟ್ ಆದ ರೋಟರಿ ಬಯೋ ಡೈವರ್ಸಿಟಿ ಪಾರ್ಕ್‌ನಲ್ಲಿ ಸುಮಾರು 500 ಸಸಿ ನೆಡುವುದರ ಮೂಲಕ ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ಹಾಗೂ ಶಿವಮೊಗ್ಗ ನಗರದ ಎಲ್ಐಸಿ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವನಮೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ರೋಟರಿ ಸಂಸ್ಥೆಯೊಂದಿಗೆ ಈ ದಿನ ಎಲ್ಐಸಿ ಜೊತೆಗೂಡಿ ವನಮೋತ್ಸವ ಮಾಡುತ್ತಿರುವುದು ಬಹಳ ಸಂತೋಷವಾದ ವಿಚಾರವಾಗಿದೆ. ಇಂತಹ ಸಮಾಜಮುಖಿ ಕೆಲಸಗಳಲ್ಲಿ ಯಾವಗಲೂ ನಿಮ್ಮ ಜೊತೆಗೂಡಿರುತ್ತೇವೆ ಎಂದರು.

ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್‌ ಅಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ, ಸಸಿ ನೆಡುವುದು ಮುಖ್ಯವಲ್ಲ, ಅದನ್ನು ಜತನದಿಂದ ಪೋಷಣೆ ಮಾಡುವುದು ಬಹಳ ಮುಖ್ಯವಾದ ಕೆಲಸ. ಆ ನಿಟ್ಟಿನಲ್ಲಿ ರೋಟರಿ ಬಯೋ ಡೈವರ್ಸಿಟಿ ಪಾರ್ಕ್ ನೋಡಿಕೊಳ್ಳುತ್ತಿರುವ ಉಮೇಶ್ ರವರ ಶ್ರಮ ಶ್ಲಾಘನೀಯವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಸದಸ್ಯರಾದ ಗಿರೀಶ್ ಅವರು 5,000 ಗಳನ್ನು ಬಯೋ ಡೈವರ್ಸಿಟಿ ಪಾರ್ಕ್ ಗೆ ಧೇಣಿಗೆಯಾಗಿ ನೀಡಿದರು. ಕಾರ್ಯಕ್ರಮದಲ್ಲಿ ಬಯೋಡೈವರ್ಸಿಟಿ ಪಾರ್ಕಿನ ಉಪಾಧ್ಯಕ್ಷ ಪಿಡಿಜಿ ಪ್ರಕಾಶ್, ಕಾರ್ಯದರ್ಶಿ ಈಶ್ವರ್, ಜೈಶೀಲ್ ಶೆಟ್ಟಿ, ಬಸವರಾಜ್, ಮಂಜುನಾಥ್ ಹೆಗಡೆ, ಗುರುರಾಜ್, ಜಗದೀಶ್, ಮಾಜಿ ಅಸಿಸ್ಟೆಂಟ್ ಗವರ್ನರ್ ರವಿ ಕೋಟೋಜಿ, ಆನ್ಸ್ ಕ್ಲಬ್ನ ಅಧ್ಯಕ್ಷರಾದ ಗೀತಾ ಜಗದೀಶ್, ಎಲ್‍ಐಸಿ ಸಂಸ್ಥೆಯ ಗಣೇಶ್ ಭಟ್, ಆನಂದ್, ಇತರೆ ಸಿಬ್ಬಂದಿ ವರ್ಗದವರು ಹಾಗೂ ರೋಟರಿ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ