ಕನ್ನಡಪ್ರಭ ವಾರ್ತೆ ಮಹಾಲಿಂಗಪುರ
ಪಟ್ಟಣದ ಅರಸ್ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.23ರಂದು ಬಸ್ ನಿಲ್ದಾಣದ ಮುಂಭಾಗದ ಗಣೇಶ ದೇವಸ್ಥಾನದಿಂದ ಪುರ ಮೆರವಣಿಗೆ ಮೂಲಕ ರೊಟ್ಟಿ ಜಾತ್ರೆಗೆ ಚಾಲನೆ ದೊರೆಯಲಿದೆ. ಬಸವೇಶ್ವರ ವೃತ್ತದಿಂದ ಮಹಾಲಿಂಗೇಶ್ವರರ ಅನುಭವ ಮಂಟಪದವರೆಗೆ ನಡೆಯುವ ಮೆರವಣಿಗೆಯಲ್ಲಿ ನಗರದ ವಿವಿಧ ಬಡಾವಣೆಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಪಾಲ್ಗೊಳ್ಳಲಿದ್ದಾರೆ ಎಂದರು.
ಸೆ.24ರವರೆಗೆ ರೊಟ್ಟಿ ಕೊಡುಗೆ ಕಾರ್ಯಕ್ರಮ ನಡೆಯಲಿದ್ದು, ಭಕ್ತರು ಜಾತ್ರೆಯ ಅನ್ನಪ್ರಸಾದಕ್ಕೆ ಅಗತ್ಯವಿರುವ ರೊಟ್ಟಿ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಸಮರ್ಪಿಸಲಿದ್ದಾರೆ. ಗ್ರಾಮೀಣ ಭಾಗದ ಜನರು ತಮ್ಮ ಮನೆಗಳಲ್ಲಿ ತಯಾರಿಸಿದ ರೊಟ್ಟಿಯನ್ನು ಅನ್ನಪ್ರಸಾದಕ್ಕಾಗಿ ನೀಡುತ್ತಿರುವುದು ಈ ಬಾರಿಯ ಜಾತ್ರೆಯ ವಿಶೇಷತೆಯಾಗಿದೆ ಎಂದರು.ಸೆ.25ರಂದು ಜಠೋತ್ಸವದೊಂದಿಗೆ ಜಾತ್ರೆಯ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದ್ದು, ಸೆ.26ರಂದು ಪ್ರಥಮ ರಥೋತ್ಸವ ಹಾಗೂ ಸೆ.27ರಂದು ಮರು ರಥೋತ್ಸವ ನಡೆಯಲಿದೆ. ಸೆ.28ರಂದು ರಾಷ್ಟ್ರಮಟ್ಟದ ಜಂಗಿ ನಿಕಾಲಿ ಕುಸ್ತಿ ಆಯೋಜಿಸಿದ್ದು, ವಿವಿಧ ಭಾಗಗಳಿಂದ ಕುಸ್ತಿ ಪಟುಗಳು ಆಗಮಿಸಲಿದ್ದಾರೆ. ಕುಸ್ತಿ ಪಂದ್ಯಾವಳಿ ಜಾತ್ರೆಯ ಪ್ರಮುಖ ಆಕರ್ಷಣೆಯಾಗಲಿದೆ.
ಹಿರಿಯ ಪತ್ರಕರ್ತ ಜಯರಾಮ ಶೆಟ್ಟಿ ಮಾತನಾಡಿದರು. ಇದೇ ವೇಳೆ ಜಾತ್ರೆಯ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳ ವಿವರಗಳನ್ನು ಒಳಗೊಂಡ ಬಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಕೃಷ್ಣೇಗೌಡ ಪಾಟೀಲ ಸ್ವಾಗತಿಸಿದರು. ಬಸವರಾಜ ಪಾಶ್ಚಾಪುರ ವಂದಿಸಿದರು.