ದುಷ್ಕರ್ಮಿಗಳಿಂದ ರೌಡಿ ಶೀಟರ್ ಲೋಕೇಶ್ ಕೊಲೆ

KannadaprabhaNewsNetwork | Published : Oct 16, 2023 1:45 AM

ಸಾರಾಂಶ

ರಾಮನಗರ: ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್‌ ನನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ಕೈಲಾಂಚ ಹೋಬಳಿ ಕೆರೆಮೇಗಳದೊಡ್ಡಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ರಾಮನಗರ: ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್‌ ನನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ಕೈಲಾಂಚ ಹೋಬಳಿ ಕೆರೆಮೇಗಳದೊಡ್ಡಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಗ್ರಾಮದ ಲೋಕೇಶ್‌ (49) ಕೊಲೆಯಾದವನು. ಈತನ ಮನೆ ಬಳಿಯೇ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಲೋಕೇಶ್ ವಿರುದ್ಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ, ಕೊಲೆ ಯತ್ನ ಸೇರಿದಂತೆ ಕೆಲ‌ ಪ್ರಕರಣಗಳು ದಾಖಲಾಗಿದ್ದವು. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರುವ ಅನುಮಾನವಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಡಿವೈಎಸ್ಪಿ ದಿನಕರ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. 15ಕೆಆರ್ ಎಂಎನ್‌ 3.ಜೆಪಿಜಿ ಕೊಲೆಯಾದ ಲೋಕೇಶ್

Share this article