ಕನ್ನಡಪ್ರಭ ವಾರ್ತೆ ಹಾಸನ
ಸೆಕ್ಷನ್ ೩೦೭ ಅಡಿ ಆರೋಪಿಯಾಗಿದ್ದ ರಖಿತಾ ಅಲಿಯಾಸ್ ಗುಂಡ (೩೫) ಕೊಲೆಯಾಗಿರುವ ರೌಡಿ ಶೀಟರ್. ರಾತ್ರಿ ಆಟೋದಲ್ಲಿ ಕುಳಿತು ಸ್ನೇಹಿತರೊಂದಿಗೆ ಕಂಠಪೂರ್ತಿ ಕುಡಿದಿದ್ದು, ರೌಡಿ ಶೀಟರ್ ರಖಿತಾ ಕುಡಿದ ಅಮಲಿನಲ್ಲಿ ತನ್ನ ಸ್ನೇಹಿತರೊಂದಿಗೆ ಜಗಳವಾಡಿಕೊಂಡಿದ್ದನು. ಇದಾದ ಸಲ್ಪ ಸಮಯದಲ್ಲೇ ಸ್ನೇಹಿತರು ರಖಿತಾನನ್ನು ಮಾರಕಾಸ್ತ್ರಗಳಿಂದ ಕೊಲೆಗೈದು ಅಲ್ಲಿಂದ ಪರಾರಿಯಾಗಿದ್ದರು.
ಈ ಹಿಂದೆ ಆತನ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಲಾಗಿದೆ.