ಶಿವಮೊಗ್ಗ: ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಹಿನ್ನೆಲೆ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಬಂಧಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಬುಧವಾರ ಸಂಜೆ ಜಯನಗರ ಠಾಣೆಗೆ ಬಂದು ಪೊಲೀಸರಿಗೆ ಮಂಜು ಓಲಂಗ ಶರಣಾಗಿದ್ದ. ರಾತ್ರಿ ಹಲ್ಲೆ ನಡೆಸಿದ್ದ ಪ್ರದೇಶಕ್ಕೆ ಮಹಜರಿಗೆ ಕರೆದುಕೊಂಡು ಹೋದ ವೇಳೆ ರೌಡಿಶೀಟರ್ ಮಂಜು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗೆ ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಆರೋಪಿ ಮಂಜುನಾಥ ಅಲಿಯಾಸ್ ಓಲಂಗನನ್ನು ಬಂಧಿಸಿದರು. ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
- - -(ಸಾಂದರ್ಭಿಕ ಚಿತ್ರ)