ಕನ್ನಡಪ್ರಭ ವಾರ್ತೆ ತುಮಕೂರುವೈದ್ಯಕೀಯ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಗೆ ಮತ್ತು ಬದಲಾವಣೆಗೆ ಡಾ.ಬಿ.ಸಿ. ರಾಯ್‌ರವರ ಕೊಟ್ಟ ಕೊಡುಗೆ ಅನನ್ಯ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮತ್ತು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದಂತಹ ಅನೇಕ ಸಂಸ್ಥೆಗಳನ್ನು ಹುಟ್ಟುಹಾಕಿ ವೈದ್ಯಕೀಯ ಕ್ಷೇತ್ರದಲ್ಲಿ ಮಾತ್ರ ಬದಲಾವಣೆ ಮತ್ತು ಅಭಿವೃದ್ಧಿಗೆ ಅವರು ಕಾರಣಿಭೂತರಾಗಿದ್ದಾರೆ ಎಂದು ಶ್ರೀದೇವಿ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಡಾ.ಎಂ.ಆರ್. ಹುಲಿನಾಯ್ಕರ್ ತಿಳಿಸಿದರು.ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ವತಿಯಿಂದ ಮಂಗಳವಾರ ಬೆಳಿಗ್ಗೆ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಆಸ್ಪತ್ರೆಯ ಅಡಿಟೋರಿಯಂ ಸಭಾಂಗಣದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ವೈದ್ಯರಿಗೆ ತಾಯಿ ಹೃದಯದ ಮನೋಭಾವ ಮನೋಭಾವ ಬಂದರೆ ಅದರ ಗೌರವ ಹೆಚ್ಚಾಗಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿ ಭಾರತರತ್ನ ಪ್ರಶಸ್ತಿ ಪಡೆದ ಡಾ.ಭಿದಾನ್ ಚಂದ್ರರಾಯ್ ಅವರನ್ನು ಇಂದಿನ ವೈದ್ಯರು ಆದರ್ಶವಾಗಿಟ್ಟುಕೊಂಡು ಸೇವೆ ಮಾಡಬೇಕು. ಹಿರಿಯರಾದ ಡಾ.ಬಿ.ಸಿ.ರಾಯ್‌ರವರು ಹಾಕಿಕೊಟ್ಟ ಮಾರ್ಗದರ್ಶನ, ಜೀವನಶೈಲಿ, ಸಮಾಜದ ರಾಜಕೀಯವಾಗಿ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನೀಡಿದ ಗಣನೀಯ ಸೇವೆಗಳನ್ನು ಸ್ಮರಿಸುವುದು ಅದೇ ದಾರಿಯಲ್ಲಿ ನಮ್ಮ ವೈದ್ಯರು ಮತ್ತು ವೈದ್ಯಕೇತರ ಸಿಬ್ಬಂದಿ ಕೆಲಸ ನಿರ್ವಹಿಸುವುದು ಹೆಚ್ಚು ಸೂಕ್ತವಾಗಿರುತ್ತದೆ. ಆರೋಗ್ಯ ಸೇವೆಗಳ ಜನಸಾಮಾನ್ಯರಿಗೆ ದೊರಕುವಂತೆ ಸೇವೆ ನಿರ್ವಹಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಡಾ. ರಮಣ್ ಎಂ. ಹುಲಿನಾಯ್ಕರ್ ಮಾತನಾಡಿ, ಆಗಿನ ಕಾಲದಲ್ಲಿ ವಿದೇಶದಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿ ತದ ನಂತರ ಭಾರತಕ್ಕೆ ಮರಳಿ ಜನರ ಸೇವೆಗ ಬದುಕು ಮುಡಿಪಾಗಿಟ್ಟ ಮಹಾನ್ ವೈದ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರತಿ ವರ್ಷವೂ ಭಾರತ ಸರ್ಕಾರ ಡಾ.ಬಿ.ಸಿ.ರಾಯ್‌ರವರ ಹೆಸರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಡಾ.ಬಿ.ಸಿ.ರಾಯ್‌ರವರ ಬದುಕು ಮತ್ತು ಅವರು ಅನುಸರಿಸಿದ ಮಾರ್ಗಗಳು ವೈದ್ಯರಿಗೆ ದಾರಿದೀಪವಾಗಬೇಕು, ಇಂತಹ ನಿಸ್ವಾರ್ಥ ಸಾಧಕರು ಹಾಕಿಕೊಟ್ಟ ಮಾರ್ಗಗಳನ್ನು ನಾವುಗಳೆಲ್ಲ ನಡೆಯುವುದೇ ಡಾ.ಬಿ.ಸಿ.ರಾಯ್‌ರವರ ಅವರಂತಹ ಮಹಾಚೇತನ ನಾವು ಸಲ್ಲಿಸುವ ಅತ್ಯುತ್ತಮ ಗೌರವಿಸಬೇಕು ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಶ್ರೀದೇವಿ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ.ಎಸ್.ಪಾಟೀಲ್ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ವೈದ್ಯರ ಸೇವೆ ಮತ್ತು ವೈದ್ಯರ ಮಹತ್ವ ಏನೆಂದು ಭಾರತಕ್ಕೆ ಮಾತ್ರವಲ್ಲ. ವಿಶ್ವಕ್ಕೆ ಮನವರಿಕೆ ಮಾಡಲಾಗಿತ್ತು. ಆರೋಗ್ಯ ಕ್ಷೇತ್ರದಲ್ಲಿ ವೈದ್ಯರ ಪಾತ್ರ ಅತ್ಯುತ್ತಮವಾದ ಸೇವೆಯಾಗಿದೆ. ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ. ಡಾ.ಬಿ.ಸಿ. ರಾಯ್‌ರವರು ನಿಸ್ವಾರ್ಥಸೇವೆ ಯುವ ವೈದ್ಯರಿಗೆ ದಾರಿದೀಪವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀದೇವಿ ಆಸ್ಪತ್ರೆಯ ಜನರಲ್ ಮೆಡಿಸಿನ್ ವಿಭಾಗದ ಪ್ರೊಫೆಸರ್ ಹಾಗೂ ಮುಖ್ಯಸ್ಥರಾದ ಡಾ. ವಿರೂಪಾಕ್ಷ ಕೆ.ಎಲ್. ಹಾಗೂ ಶ್ರೀದೇವಿ ಆಸ್ಪತ್ರೆಯ ಉಸಿರಾಟ ಔಷಧ ವಿಭಾಗದ ಪ್ರೊಫೆಸರ್ ಹಾಗೂ ಮುಖ್ಯಸ್ಥರಾದ ಡಾ.ಮಂಜು ಎಂ.ಡಿ. ಅವರಿಗೆ 2025 ನೇ ಸಾಲಿನ ಡಾ.ಬಿ.ಸಿ. ರಾಯ್‌ರವರು ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಶ್ರೀದೇವಿ ಚಾರಿಟಬಲ್ ಟ್ರಸ್ಟಿಯಾದ ಅಂಬಿಕಾ ಎಂ ಹುಲಿನಾಯ್ಕರ್, ಶ್ರೀದೇವಿ ಆಸ್ಪತ್ರೆಯ ನೇತ್ರತಜ್ಞರಾದ ಡಾ.ಲಾವಣ್ಯ, ಶ್ರೀದೇವಿ ವೈದ್ಯಕೀಯ ಉಪಪ್ರಾಂಶುಪಾಲರು ಮತ್ತು ಪ್ರಸ್ತೂತಿ ಮತ್ತು ಸ್ತ್ರೀರೋಗ ವೈದ್ಯರಾದ ಡಾ.ರೇಖಾ ಗುರುಮೂರ್ತಿ, ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಎಲ್.ಹರೇಂದ್ರಕುಮಾರ್, ಶ್ರೀದೇವಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಕೆ.ಮೋಹನ್‌ಕುಮಾರ್, ನ್ಯಾಯವಿಧಿ ವಿಜ್ಞಾನಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಆಡಳಿತ ವಿಭಾಗದ ಉಪಪ್ರಾಂಶುಪಾಲ ಡಾ.ಹೇಮಂತ್‌ರಾಜ್ ಎಂ.ಎನ್, ಶ್ರೀದೇವಿ ಆಸ್ಪತ್ರೆಯ ಮನೋವೈದ್ಯರಾದ ಡಾ.ಭಾವನಾ ಪ್ರಸಾದ್ ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು ಸಿಬ್ಬಂದಿ ವರ್ಗ, ವಿದ್ಯಾರ್ಥಿ- ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.