ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ

KannadaprabhaNewsNetwork |  
Published : Nov 12, 2025, 01:30 AM IST
ಚಿತ್ರ 11ಬಿಡಿಆರ್54 | Kannada Prabha

ಸಾರಾಂಶ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಪೊಲೀಸ್ ಉಪಾಧೀಕ್ಷಕರ ಕಚೇರಿ ಎದುರುಗಡೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಬೀದರ್‌: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಪೊಲೀಸ್ ಉಪಾಧೀಕ್ಷಕರ ಕಚೇರಿ ಎದುರುಗಡೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಈ ಕುರಿತು ರಾಜ್ಯಪಾಲರಿಗೆ ಬರೆದ ಮನವಿ ಡಿವೈಎಸ್ಪಿ ಅವರಿಗೆ ಸಲ್ಲಿಸಿ ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್ ಆಗಿ, ಮನರಂಜನಾ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್‌ಐ ಏಜೆಂಟರು, ಮುಸ್ಲಿಂ ಮೂಲಭೂತವಾದಿಗಳು-ಇವರೆಲ್ಲರಿಗೂ ಪರಪ್ಪನ ಅಗ್ರಹಾರ ಜೈಲು ಮನರಂಜನಾ ಕ್ಲಬ್ ಆಗಿದೆ. ಇಂಥ ದೇಶದ್ರೋಹಿಗಳಿಗೆ ಟಿ.ವಿ., ಮೊಬೈಲ್ ಫೋನ್, ಗುಂಡು ತುಂಡುಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಎಲ್ಲವೂ ಬಹಳ ಸರಾಗವಾಗಿ ನಡೆಯುತ್ತಿದೆ ಎಂದು ಬೀದರ ಬಿಜೆಪಿ ಯುವ ಮೋರ್ಚಾ ಆರೋಪಿಸಿದೆ.

ರಾಜ್ಯ ಸರಕಾರವು ಕಣ್ಮುಚ್ಚಿ ಕುಳಿತಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಈ ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ದೇಶದ್ರೋಹಿಗಳಿಗೆ ಐಷಾರಾಮಿ ವ್ಯವಸ್ಥೆಗಳನ್ನು ಪರಪ್ಪನ ಅಗ್ರಹಾರ ಜೈಲಲ್ಲಿ ಮಾಡಲಾಗಿದೆ. ಪತ್ರಿಕೆಗಳಲ್ಲಿ ದೃಶ್ಯ ಮಾಧ್ಯಮಗಳಲ್ಲಿ ಮಾಹಿತಿ ಬಂದ ನಂತರ ಪರಪ್ಪನ ಅಗ್ರಹಾರ ಜೈಲಿನ ಮೇಲೆ ನಿನ್ನೆ ದಾಳಿ ಮಾಡಿದ್ದಾರೆ ಎಂದು ಟೀಕಿಸಿದರು.

ಇದಕ್ಕೆ ರಾಜ್ಯದ ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ನೇರ ಹೊಣೆಗಾರರು. ಹೀಗೇ ಬಿಟ್ಟರೆ ಸಿದ್ದರಾಮಯ್ಯರ ಸರ್ಕಾರ ದೇಶದ್ರೋಹಿಗಳ ಕೇಸನ್ನು ಹಿಂಪಡೆ ಯಲೂ ಹೇಸುವುದಿಲ್ಲ. ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಯುವ ಮೋರ್ಚಾ ಆಗ್ರಹಿಸಿದೆ.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಕಲ್ಲೂರ್ ನೇತೃತ್ವದಲ್ಲಿ ಹೋರಾಟ ನಡೆಯಿತು. ಬಿಜೆಪಿ ಯುವ ಮೋರ್ಚಾ ಬೀದರ್‌ ದಕ್ಷಿಣ ಮಂಡಲದ ಅಧ್ಯಕ್ಷ ಶಿವು ಸುಲ್ತಾನಪುರೇ, ಹುಮನಬಾದ ಮಂಡಲ ಅಧ್ಯಕ್ಷ ಡಿ.ಎನ್ ಪತ್ರಿ, ಯುವ ಮೋರ್ಚಾ ಜಿಲ್ಲಾ ಪದಾಧಿಕಾರಿಗಳಾದ ಸತೀಶ ಶಟಗೊಂಡೆ, ಬಸವರಾಜ ಬೆಂಬುಳಗೆ, ವೀರೇಂದ್ರ ಪಾಟೀಲ್, ಬಾಲಾಜಿ ಪಾಟೀಲ್ ನಾವದಗೇರಿ, ಬಿಜೆಪಿ ಯುವ ಮೋರ್ಚಾ ಬೀದರ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಪುಷ್ಪಕಕುಮಾರ ಜಾಧವ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

PREV

Recommended Stories

ಪರಪ್ಪನ ಅಗ್ರಹಾರ ಜೈಲಿಗೆ ಅಂಶು ಕುಮಾರ್‌ ಅಧೀಕ್ಷಕ
ಬಟ್ಟೆ ವ್ಯಾಪಾರ ಸೋಗಲ್ಲಿ 1 ಕೋಟಿಯ ಬುಲೆಟ್‌ ಬೈಕ್‌ ಕದ್ದ