ಮಾಲೂರು: ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ತಾಲೂಕು ಆಡಳಿತ ವತಿಯಿಂದ ಆಚರಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ವತಿಯಿಂದ ಪ್ರತಿ ತಾಲೂಕಿಗೆ ಒಂದು ಲಕ್ಷ ರು. ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಶಾಸಕ ಕೆ.ವೈ. ನಂಜೇಗೌಡ ಹೇಳಿದರು.ನಗರದ ಶಾಸಕರ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಒಕ್ಕಲಿಗ ಸಮುದಾಯದ ವತಿಯಿಂದ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ನಗರದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಜೂ. ೨೭ರಂದು ನಗರದಲ್ಲಿ ಫ್ಲೈಓವರ್ ಕಾಮಗಾರಿ ನಡೆಯುತ್ತಿರುವುದರಿಂದ ಸರಳವಾಗಿ ಆಚರಿಸಲಾಗುವುದು, ಕೆಂಪೇಗೌಡ ಅವರನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಸರಕಾರ ಅವರ ಜನ್ಮಜಯಂತಿಯನ್ನು ಆಚರಣೆ ಮಾಡುತ್ತಿದೆ. ನಗರದ ಮಧ್ಯ ಫ್ಲೈಓವರ್ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ಮೆರವಣಿಗೆಗೆ ಮತ್ತು ಸಾರ್ವಜನಿಕರ ಹೋರಾಟಕ್ಕೆ ತೊಂದರೆ ಉಂಟಾಗುತ್ತದೆ ಎಂಬ ಅಭಿಪ್ರಾಯವನ್ನು ಸಭೆಯಲ್ಲಿ ಎಲ್ಲಾ ಮುಖಂಡರು ವ್ಯಕ್ತಪಡಿಸಿದ್ದರಿಂದ ಫ್ಲೈಓವರ್ ಕಾಮಗಾರಿ ಒಂದು ವರ್ಷದಲ್ಲಿ ಮುಗಿಯಲಿದ್ದು, ಅಲ್ಲಿವರೆಗೆ ನಡೆಯುವ ಎಲ್ಲಾ ಜಯಂತಿ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗುವುದು ನಂತರ ಮುಂದಿನ ವರ್ಷಗಳಲ್ಲಿ ಎಲ್ಲಾ ಜಯಂತಿಗಳನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಹೇಳಿದರು.ಕೆಂಪೇಗೌಡ ಜಯಂತಿ ಕಾರ್ಯಕ್ರಮದ ದಿನದಂದು ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಅರ್ಪಿಸಿ ನಂತರ ನಗರದ ಮುಖ್ಯರಸ್ತೆಯ ಕೆಂಪೇಗೌಡ ವೃತ್ತದಲ್ಲಿ ಕೆಂಪೇಗೌಡ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು, ನಗರ ಸೇರಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಜಯಂತಿ ಆಚರಿಸುವಂತೆ ಆಯಾ ಇಲಾಖೆಗೆ ಸಂಬಂಧಪಟ್ಟಂತ ಅಧಿಕಾರಿಗಳು ಸೂಚಿಸುವಂತೆ ಹೇಳಿದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ಎಂ.ವಿರೂಪ, ತಾಪಂ. ಇ.ಒ.ಕೃಷ್ಣಪ್ಪ, ಬಿಇಓ. ಬಿ.ಪಿ. ಕೆಂಪಯ್ಯ,ನಗರಸಭೆ ಪೌರಾಯುಕ್ತ ಎಂ.ಎಸ್.ಮಹದೇವ, ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿಜಯನರಸಿಂಹ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ವಿ. ಮುನೇಗೌಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಾಳಿಗಾನಹಳ್ಳಿ ಶ್ರೀನಿವಾಸ್, ಒಕ್ಕಲಿಗರ ಸಂಘದ ಅಧ್ಯಕ್ಷ ಪರಮೇಶ್, ಒಕ್ಕಲಿಗರ ಸರಕಾರಿ ನೌಕರ ಸಂಘದ ಅಧ್ಯಕ್ಷ ತಿಮ್ಮರಾಯಪ್ಪ, ಗ್ಯಾಸ್ ರಾಮೇಗೌಡ, ಕೆ. ದಿನೇಶ್‌ಗೌಡ, ಗ್ರಾ.ಪಂ. ಅಧ್ಯಕ್ಷರಾದ ಮಿಂಡಹಳ್ಳಿ ಮುನೇಗೌಡ, ವಿನಯ್‌ಗೌಡ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ.ಎಂ.ವಿಜಯಕುಮಾರ್, ಗೇರುಪುರ ಆಂಜಿಗೌಡ, ಅನಂತು, ಪ್ರಗತಿ ಶ್ರೀನಿವಾಸ್,ಲಕ್ಷ್ಮಿಕಾಂತಗೌಡ, ಜಿವಿಕೆ ಚಂದ್ರು, ಬನಹಳ್ಳಿ ನಾರಾಯಣಸ್ವಾಮಿ, ಹರೀಶ್‌ಗೌಡ, ಕೆ.ಗೋಪಾಲಗೌಡ, ನರಸಿಂಹಗೌಡ, ನಗರಸಭೆ ಮಾಜಿ ಸದಸ್ಯ ಮುರಳಿಧರ್, ದಲಿತ ಮುಖಂಡರಾದ ಆಂಜಿನಪ್ಪ, ಫ್ರೆಂಡ್ಸ್ ಸಂತೋಷ್, ನಾಗಪುರ ನವೀನ್, ಎಸ್‌ಎಂ.ವೆಂಕಟೇಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಬಿಪಿ ಚಂದ್ರಪ್ಪ , ಎಇಇ ಅನ್ಸರ್ ಬಾಷ , ನಾನಾ ಇಲಾಖೆಯ ಅಧಿಕಾರಿಗಳು, ಇನ್ನಿತರರು ಹಾಜರಿದ್ದರು.