ಕಡಂದಲೆ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ ₹15 ಕೋಟಿ ಯೋಜನೆ

KannadaprabhaNewsNetwork |  
Published : Sep 29, 2026, 02:45 AM IST
ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ ₹15 ಕೋಟಿ ಯೋಜನೆಜಾತ್ರೆಯ ಬಳಿಕ ಕಾಮಗಾರಿ ಆರಂಭಿಸಲು ಭಕ್ತರ ಸಭೆಯಲ್ಲಿ ನಿರ್ಣಯ | Kannada Prabha

ಸಾರಾಂಶ

ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಕಡಂದಲೆ–ಪಾಲಡ್ಕ ಗ್ರಾಮದ ಭಕ್ತರ ಸಭೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಮೂಡುಬಿದಿರೆ : ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಕಡಂದಲೆ–ಪಾಲಡ್ಕ ಗ್ರಾಮದ ಭಕ್ತರ ಸಭೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಸಭೆಯಲ್ಲಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೈಗೊಳ್ಳಲಾಗಿರುವ ಅಷ್ಟಮಂಗಲ ಪ್ರಶ್ನೆ ಹಾಗೂ ನಂತರ ನೆರವೇರಿಸಬೇಕಾಗಿದ್ದ ಪ್ರಾಯಶ್ಚಿತ್ತ ಕಾರ್ಯಕ್ರಮಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ವಿವಿಧ ಕಾಮಗಾರಿಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಯಿತು.

ದೇವಸ್ಥಾನದ ಸಮಗ್ರ ಜೀರ್ಣೋದ್ಧಾರಕ್ಕಾಗಿ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಈಗಾಗಲೇ ನೀಲಿ ನಕಾಶೆ ಸಿದ್ಧಪಡಿಸಲಾಗಿದ್ದು, ಸುಮಾರು ₹15 ಕೋಟಿ ವೆಚ್ಚದ ಜೀರ್ಣೋದ್ಧಾರ ಯೋಜನೆ ರೂಪಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ದೇವಸ್ಥಾನದ ಮೂಲ ಪರಂಪರೆ ಹಾಗೂ ಧಾರ್ಮಿಕ ಮಹತ್ವವನ್ನು ಉಳಿಸಿಕೊಂಡು ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಕುರಿತು ಸಭೆಯಲ್ಲಿ ವಿಚಾರ ವಿನಿಮಯ ನಡೆಯಿತು.

ಶ್ರೀ ಸುಬ್ರಹ್ಮಣ್ಯ ಸೃಷ್ಟಿ ಮತ್ತು ಕಿರು ಸೃಷ್ಟಿ ಜಾತ್ರೆ ಮುಗಿದ ಬಳಿಕ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಯನ್ನು ಆರಂಭಿಸುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಜೀರ್ಣೋದ್ಧಾರ ಕಾರ್ಯಕ್ಕೆ ಭಕ್ತರು ಹಾಗೂ ಊರಿನ ಪರ ಊರಿನ ಜನರ ಸಹಕಾರ ಅತ್ಯಗತ್ಯವಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಕುರಿತು ಚರ್ಚಿಸಲಾಯಿತು.ಸಭೆಯಲ್ಲಿ ಹಲವಾರು ಭಕ್ತರು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ವ್ಯಕ್ತಪಡಿಸಿ, ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಚಾರಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ದೇವಸ್ಥಾನದ ಅರ್ಚಕ ರಾಘವೇಂದ್ರ ಭಟ್ , ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಬ್ಬಯ್ಯ ಶೆಟ್ಟಿ, ಸುಂದರ ಗೌಡ, ವಿಮಲಾ ಲೀಲಾದರ್ ಪೂಜಾರಿ, ನಮೃತಾ ಸತೀಶ್ ಮಾರ್ಲ, ಕೇಶವ ಬಾರಬೆಟ್ಟು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಡಂದಲೆ–ಪಾಲಡ್ಕ ಗ್ರಾಮದ ನೂರಾರು ಭಕ್ತರು ಸಭೆಯಲ್ಲಿ ಭಾಗವಹಿಸಿ ಜೀರ್ಣೋದ್ಧಾರ ಕಾರ್ಯದ ಕುರಿತು ತಮ್ಮ ಬೆಂಬಲ ಹಾಗೂ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಸುರೇಂದ್ರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸಭೆಯ ಉದ್ದೇಶ ಹಾಗೂ ಜೀರ್ಣೋದ್ಧಾರದ ಮುಂದಿನ ಕಾರ್ಯಯೋಜನೆ ಕುರಿತು ಮಾಹಿತಿ ನೀಡಿದರು. ರಂಜಿತ್ ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತ ಚೋರಿ ಮಾಡಿ ಚುನಾವಣೆ ಗೆಲ್ಲುವ ಹುನ್ನಾರ: ಸಚಿವ ಎಂ.ಬಿ.ಪಾಟೀಲ
ಕೂಲಿ ಮಾಡಿ ಸಿಎಂಗೆ ₹3000 ಕಳಿಸಿದ ರೈತರು