ಮೊರಾರ್ಜಿ ಶಾಲೆ ಕಟ್ಟಡ ನಿರ್ಮಾಣಕ್ಕೆ 16 ಕೋಟಿ ಬಿಡುಗಡೆ: ಶಾಸಕ ಶ್ರೀನಿವಾಸ ಮಾನೆ

KannadaprabhaNewsNetwork |  
Published : Feb 26, 2026, 02:15 AM IST
ಫೋಟೊ: 25ಎಚ್‌ಎನ್‌ಎಲ್2 | Kannada Prabha

ಸಾರಾಂಶ

ಹಾನಗಲ್ಲ ತಾಲೂಕಿನ ಬ್ಯಾತನಾಳ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ₹5 ಕೋಟಿ ವೆಚ್ಚದಲ್ಲಿ ಸಿಬ್ಬಂದಿ ವಸತಿ ಗೃಹ ನಿರ್ಮಾಣಕ್ಕೆ ಶಾಸಕ ಮಾನೆ ಭೂಮಿಪೂಜೆ ನೆರವೇರಿಸಿದರು.

ಹಾನಗಲ್ಲ: ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ₹16 ಕೋಟಿ ಮತ್ತು ಸಿಬ್ಬಂದಿ ವಸತಿ ಗೃಹ ನಿರ್ಮಾಣಕ್ಕೆ ₹5 ಕೋಟಿ ಹಾಗೂ ಶಂಕರಿಕೊಪ್ಪ ಗ್ರಾಮದಲ್ಲಿ ವಸತಿ ಕಾಲೇಜು ಕಟ್ಟಡ ನಿರ್ಮಾಣಕ್ಕೆ ₹16 ಕೋಟಿ ಬಿಡುಗಡೆಯಾಗಿದ್ದು, ಕಾಮಗಾರಿಗಳು ಶೀಘ್ರ ಚಾಲನೆ ಪಡೆಯಲಿವೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ತಾಲೂಕಿನ ಬ್ಯಾತನಾಳ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ₹5 ಕೋಟಿ ವೆಚ್ಚದಲ್ಲಿ ಸಿಬ್ಬಂದಿ ವಸತಿ ಗೃಹ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಅವರು, ನರೇಗಲ್, ತಿಳವಳ್ಳಿ ಗ್ರಾಮಗಳಿಗೆ ಮೌಲಾನಾ ಆಜಾದ್ ಮಾದರಿ ಶಾಲೆಗಳು ಮಂಜೂರಿಯಾಗಿವೆ. ಹಾನಗಲ್ ನಗರದ ಮೌಲಾನಾ ಆಜಾದ್ ಮಾದರಿ ಶಾಲೆಯ ಆವರಣ ಗೋಡೆ ನಿರ್ಮಾಣಕ್ಕೆ ಒಂದು ಕೋಟಿ ಬಿಡುಗಡೆಯಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸುವಲ್ಲಿ ಕಾಳಜಿ ವಹಿಸಲಾಗಿದೆ. ತಾಲೂಕಿನಲ್ಲಿ ಹೊಸದಾಗಿ 3 ಸರ್ಕಾರಿ ಪ್ರೌಢಶಾಲೆಗಳು, ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯಲ್ಲಿ 11 ಶಾಲೆಗಳನ್ನು ಉನ್ನತೀಕರಿಸಿ ಒಂದೇ ಸೂರಿನಡಿ ಎಲ್‌ಕೆಜಿಯಿಂದ ದ್ವಿತೀಯ ಪಿಯಸಿವರೆಗೆ ಶಿಕ್ಷಣ ಸಿಗುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಅಬ್ದುಲ್‌ ರಶೀದ್ ಇಮಿರಜೆಣ್ಣನವರ, ಪ್ರಾಚಾರ್ಯ ಸಕ್ಲೇನ್‌ಅಹ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ತಾಪಂ ಮಾಜಿ ಸದಸ್ಯ ಫಯಾಜ್ ಲೋಹಾರ, ಮುಖಂಡರಾದ ಗೋಪಾಲ ಕಾನಮನಿ, ಲೋಕೇಶ ಅಗಸಿಬಾಗಿಲ, ಪರಮೇಶಪ್ಪ ಜಿಗಡಿ, ಕೃಷ್ಣ ಮಡ್ಲೂರ, ವೆಂಕಟೇಶ ಅಗಸಿಬಾಗಿಲ, ರಮೇಶ ಮುದಿಯಣ್ಣನವರ, ಕರಿಯಪ್ಪ ತಹಸೀಲ್ದಾರ್, ನಾಗಪ್ಪ ಪೂಜಾರ, ಬಸವರಾಜ ಮಾಳಣ್ಣನವರ, ಹರೀಶ ರೊಟ್ಟಿ, ಬಸವಂತ ನಾಯ್ಕ, ಬಸವರಾಜ ಚವ್ಹಾಣ, ನಿಲಯ ಪಾಲಕ ಮಾರುತಿ ತಳವಾರ, ಗುತ್ತಿಗೆದಾರ ಅಲ್ಲಾರೆಡ್ಡಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಂಪ್ಲಿ ಸಮಗ್ರ ಅಭಿವೃದ್ಧಿಗೆ ಸಿದ್ದು ಬಜೆಟ್‌ನಲ್ಲಿ ಹಣ ಕೊಡೋದು ಎಷ್ಟು?
ನುಗ್ಗೆ ಕೃಷಿಗೆ ಪ್ರತಿ ಹಂತದಲ್ಲೂ ಶುದ್ಧತೆ, ಗುಣಮಟ್ಟಕ್ಕೆ ಆದ್ಯತೆ ನೀಡಿ: ನುಗ್ಗೆ ಕೃಷಿಕ ಬ್ಯಾಲಿಹಾಳ ಬಸಯ್ಯ ಹಿರೇಮಠ