ಸೇವಾಭಾರತಿ ಪುನಶ್ಚೇತನ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಧ. ಗ್ರಾ. ಯೋಜನೆಯಿಂದ 2 ಲಕ್ಷ ರು. ದೇಣಿಗೆ

KannadaprabhaNewsNetwork |  
Published : Nov 18, 2026, 02:45 AM IST
ಸಹಾಯಧಣ | Kannada Prabha

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಎರಡನೇ ಮಹಡಿಯ ಕಟ್ಟಡ ನಿರ್ಮಾಣಕ್ಕಾಗಿ 2 ಲಕ್ಷ ರು. ಸಹಾಯಧನವನ್ನು ಅ. 26ರಂದು ಯೋಜನೆಯ ತಂಡ ಸೇವಾನಿಕೇತನಕ್ಕೆ ಭೇಟಿ ನೀಡಿ ಹಸ್ತಾಂತರಿಸಿದರು.

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಎರಡನೇ ಮಹಡಿಯ ಕಟ್ಟಡ ನಿರ್ಮಾಣಕ್ಕಾಗಿ 2 ಲಕ್ಷ ರು. ಸಹಾಯಧನವನ್ನು ಅ. 26ರಂದು ಯೋಜನೆಯ ತಂಡ ಸೇವಾನಿಕೇತನಕ್ಕೆ ಭೇಟಿ ನೀಡಿ ಹಸ್ತಾಂತರಿಸಿದರು.

ಸೇವಾ ಭಾರತಿಯ ಅಧ್ಯಕ್ಷ ಹಾಗೂ ಸೇವಾಧಾಮದ ಸಂಸ್ಥಾಪಕ ಕೆ. ವಿನಾಯಕ ರಾವ್ ಸಹಾಯಧನವನ್ನು ಸಂಸ್ಥೆಯ ಪರವಾಗಿ ಸ್ವೀಕರಿಸಿ, ಯೋಜನೆಯ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಯಶೋಧರ ಕೆ., ಕನ್ಯಾಡಿ ಒಕ್ಕೂಟದ ಅಧ್ಯಕ್ಷ ರಾಧೇಶ್ ಗೌಡ ಬಜಿಲ, ಗಂಗಾಧರ ಗೌಡ ಬಜಿಲ, ಧರ್ಮಸ್ಥಳ ಶೌರ್ಯ ವಿಪತ್ತು ಘಟಕದ ಸದಸ್ಯ ಶ್ರೀಧರ, ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕ ನೀಲಾಧರ ಶೆಟ್ಟಿ, ಕನ್ಯಾಡಿ ಒಕ್ಕೂಟದ ಕಾರ್ಯದರ್ಶಿ ಹರಿಣಾಕ್ಷಿ, ಧರ್ಮಸ್ಥಳ ವಲಯದ ಮೇಲ್ವಿಚಾರಕ ರವೀಂದ್ರ ಬಿ., ಸೇವಾಪ್ರತಿನಿಧಿ ಪ್ರಮೀಳಾ ಹಾಗೂ ಸೇವಾಭಾರತಿಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಿ
ವಿಶ್ವಮಟ್ಟದ ಶ್ರೇಷ್ಠ ವಾಸ್ತುಶಿಲ್ಪಗಳ ತಾಣ ವಿಜಯಪುರ