ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿಗೆ 20 ಲಕ್ಷ ರುಪಾಯಿ

KannadaprabhaNewsNetwork |  
Published : Sep 08, 2025, 01:00 AM IST
7ಎಚ್ಎಸ್ಎನ್17 : ಬೇಲೂರು ತಾಲೂಕು  ಕಾರ್ಯನಿರತ ಪತ್ರಕರ್ತರ ಸಂಘದಿಂದ  ಮಾದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ  ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಪತ್ರಕರ್ತರ ಆರೋಗ್ಯ, ಚಿಕಿತ್ಸೆಗಾಗಿ ತಾಲೂಕು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿಗೆ 20 ಲಕ್ಷಕ್ಕೂ ಹೆಚ್ಚು ಹಣವನ್ನು ಕ್ರೂಡೀಕರಿಸಿ ಕೊಡುವುದಾಗಿ ಶಾಸಕ ಸುರೇಶ್ ಹೇಳಿದರು. ನಿವೇಶನ ರಹಿತ ಪತ್ರಕರ್ತರಿಗೆ ಆಶ್ರಯ ಯೋಜನೆಯಡಿ ನಿವೇಶನ ನೀಡಲು ತಾವು ಈಗಲೂ ಬದ್ಧರಾಗಿದ್ದೇವೆ. ಆದರೆ ಕೆಲ ಪ್ರಭಾವಿ ರಾಜಕಾರಣಿಗಳು ತಮ್ಮ ಸ್ವಾರ್ಥದಿಂದ ನಿವೇಶನ ನೀಡಲು ಅಡ್ಡಗಾಲು ಹಾಕಿದ್ದಾರೆ. ನಿವೇಶನ ಹಂಚಿಕೆ ವಿಚಾರದಲ್ಲಿ ಸೇಡಿನ ರಾಜಕೀಯ ಮಾಡಬಾರದು. ಇಂತಹ ಭೂಮಾಫಿಯಾ ಮಾಡುವರಿಗೆ ತಾವು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕನ್ನಡಪ್ರಭ ವಾರ್ತೆ ಬೇಲೂರು

ಪತ್ರಕರ್ತರ ಆರೋಗ್ಯ, ಚಿಕಿತ್ಸೆಗಾಗಿ ತಾಲೂಕು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿಗೆ 20 ಲಕ್ಷಕ್ಕೂ ಹೆಚ್ಚು ಹಣವನ್ನು ಕ್ರೂಡೀಕರಿಸಿ ಕೊಡುವುದಾಗಿ ಶಾಸಕ ಸುರೇಶ್ ಹೇಳಿದರು.

ಪಟ್ಟಣದ ಬಸ್ ನಿಲ್ದಾಣ ಮುಂಭಾಗ ಇರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಧ್ಯಮ ದಿನಾಚರಣೆ ಅಂಗವಾಗಿ ಪತ್ರಿಕಾ ಮಿತ್ರರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು. ಪತ್ರಕರ್ತರ ಆರೋಗ್ಯ ಹಾಗೂ ಚಿಕಿತ್ಸೆಗೆ ಶಾಸಕರು ಸ್ಪಂದಿಸಿ ಆರೋಗ್ಯ ನಿಧಿಗೆ ಸಹಾಯಧನ ನೀಡಬೇಕು ಎಂದು ಮನವಿ ಮಾಡಿದ್ದು, ಹಗಲಿರುಳು ತಾಲೂಕಿನ ಅಭಿವೃದ್ಧಿಗೆ ಶ್ರಮಿಸುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 20 ಲಕ್ಷಕ್ಕೂ ಹೆಚ್ಚು ಹಣವನ್ನು ತಮ್ಮ ಹಾಗೂ ಇತರ ಮೂಲಗಳಿಂದ ಸಂಗ್ರಹಿಸಿ ಕೊಡುವುದಾಗಿ ಹೇಳಿದರು.

ನಿವೇಶನ ರಹಿತ ಪತ್ರಕರ್ತರಿಗೆ ಆಶ್ರಯ ಯೋಜನೆಯಡಿ ನಿವೇಶನ ನೀಡಲು ತಾವು ಈಗಲೂ ಬದ್ಧರಾಗಿದ್ದೇವೆ. ಆದರೆ ಕೆಲ ಪ್ರಭಾವಿ ರಾಜಕಾರಣಿಗಳು ತಮ್ಮ ಸ್ವಾರ್ಥದಿಂದ ನಿವೇಶನ ನೀಡಲು ಅಡ್ಡಗಾಲು ಹಾಕಿದ್ದಾರೆ. ನಿವೇಶನ ಹಂಚಿಕೆ ವಿಚಾರದಲ್ಲಿ ಸೇಡಿನ ರಾಜಕೀಯ ಮಾಡಬಾರದು. ಇಂತಹ ಭೂಮಾಫಿಯಾ ಮಾಡುವರಿಗೆ ತಾವು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ‌ ಎಂ.ಎ.ನಾಗರಾಜ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಮದನಗೌಡ ಮಾತನಾಡಿದರು. ಮಾಜಿ ಶಾಸಕ ಕೆ.ಎಸ್ ಲಿಂಗೇಶ್, ಪುರಸಭಾ ಅಧ್ಯಕ್ಷ ಉಷಾ ಸತೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಲ್.ರಾಜೇಗೌಡ, ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ರಘುನಾಥ್, ತಹಸೀಲ್ದಾರ್ ಶ್ರೀಧರ ಕಂಕಣವಾಡಿ, ಜಿಲ್ಲಾ ಗ್ರಾಮೀಣ ಉಪಾಧ್ಯಕ್ಷ ಡಿ.ಬಿ.ಮೋಹನ್ ಕುಮಾರ್‌, ಮಾಜಿ ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಪ್ರಾಸ್ತಾವಿಕ ನುಡಿ, ಸ್ವಾಗತವನ್ನು ಪ್ರಧಾನ ಕಾರ್ಯದರ್ಶಿ ಬಿ.ಬಿ.ಶಿವರಾಜ್ ಹಾಗೂ ನಿರೂಪಣೆಯನ್ನು ನಿರ್ದೇಶಕ ಮಲ್ಲೇಶ, ವಂದನಾರ್ಪಣೆಯನ್ನು ಖಜಾಂಚಿ ಎನ್.ಅನಂತು ನಡೆಸಿಕೊಟ್ಟರು.

ಇದೇ ಸಂದರ್ಭದಲ್ಲಿ ಪತ್ರಕರ್ತರಾದ ರವಿಹೊಳ್ಳ, ಎಂ.ರಮೇಶ್, ಸುನಿ ಪಡುವಳಲು, ಬಿ.ಕೆ.ರಮೇಶ್, ಬಿ ಆರ್.ಮಹೇಶ್, ವಿತರಕರಾದ ಸಚಿನ್ ಮತ್ತು ಪ್ರವೀಣ ಕುಮಾರ್‌ ಅವರನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''