ಕನ್ನಡಪ್ರಭ ವಾರ್ತೆ ಮದ್ದೂರು
ಮದ್ದೂರಿನ ಗ್ರಾಮದೇವತೆ ಶ್ರೀ ಮದ್ದೂರಮ್ಮ ಜಾತ್ರಾ ಮಹೋತ್ಸವ ಹಾಗೂ ಶ್ರೀ ಉಗ್ರ ನರಸಿಂಹ ಸ್ವಾಮಿಯ ರಥೋತ್ಸವದ ಅಂಗವಾಗಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಮದ್ದೂರು ಉತ್ಸವದಲ್ಲಿ ಮಾತನಾಡಿದರು.
ಈ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೇ ಆದ ಹೋರಾಟ ಮಾಡುವ ಮೂಲಕ ಮದ್ದೂರಿನ ಈ ಪುಣ್ಯಭೂಮಿ ಚರಿತ್ರೆಯ ಪುಟಗಳಲ್ಲಿ ದಾಖಲಾಗಿದೆ. ಹಲವು ಘಟಾನುಘಟಿ ನಾಯಕರುಗಳಿಗೆ ಜನ್ಮ ನೀಡಿರುವ ಗಂಡು ಮೆಟ್ಟಿದ ನಾಡಿದು. ಈ ಕ್ಷೇತ್ರದಲ್ಲಿ ಹಲವರು ಜನ ನಾಯಕರು ತಮ್ಮದೇ ಆದ ಅಭಿವೃದ್ಧಿ ಕಾರ್ಯಗಳ ಸಾಕ್ಷಿ ಗುಡ್ಡೆಯನ್ನು ಬಿಟ್ಟು ಹೋಗಿದ್ದಾರೆ ಎಂದರು.ಶಾಸಕ ಉದಯ್ ಆಯ್ಕೆಯಾದ ಮೂರೇ ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ₹2 ಸಾವಿರ ಕೋಟಿ ಅನುದಾನವನ್ನು ತಂದು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಅಭಿವೃದ್ಧಿ ಪರ್ವಕ್ಕೆ ಮುನ್ನುಡಿ ಬರೆಯುತ್ತಿದ್ದಾರೆ ಎಂದು ಶ್ಲಾಘಿಸಿದರು.
₹800 ಕೋಟಿಯನ್ನು ಮದ್ದೂರು ಕ್ಷೇತ್ರಕ್ಕೆ ಬಿಡುಗಡೆ ಮಾಡುವ ಮೂಲಕ ಸೂಳೆಕೆರೆ, ಮದ್ದೂರು ಕೆರೆಗಳ ಒತ್ತುವರಿ ತೆರವು ಮಾಡಿ ಅಭಿವೃದ್ಧಿಗೊಳಿಸಿ ನಾಲೆಗಳ ಆಧುನೀಕರಣ ಮಾಡಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುತ್ತಿದ್ದಾರೆ. ಇನ್ನು ಮೇಕೆದಾಟು ಯೋಜನೆಗೂ ಕೂಡ ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದು, ಈ ಯೋಜನೆ ಜಾರಿಗೆ ಬಂದ ಬಳಿಕ ಈ ಭಾಗದ ನೀರಾವರಿ ಸಮಸ್ಯೆಗೆ ಶಾಶ್ವತ ಮುಕ್ತಿ ಸಿಗಲಿದೆ ಎಂದು ಹೇಳಿದರು.
ರಾಮನಗರ, ತುಮಕೂರು ಜಿಲ್ಲೆಗೆ ಸೀಮಿತವಾಗಿದ್ದ ಉತ್ಸವ ಕಾರ್ಯಕ್ರಮಗಳು ಮಂಡ್ಯ ಜಿಲ್ಲೆಗೂ ಕಾಲಿಟ್ಟಿದ್ದು, ಪ್ರಥಮವಾಗಿ ಮದ್ದೂರು ಉತ್ಸವ ಎಂಬ ಬೃಹತ್ ಕಾರ್ಯಕ್ರಮ ಆಯೋಜಿಸಿ ಮನರಂಜನೆ ಜೊತೆಗೆ ಹಲವು ಪ್ರತಿಭೆಗಳನ್ನು ಗುರುತಿಸುವ ಮೂಲಕ ಅವರನ್ನು ಗೌರವಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕರಾದ ಪಿ.ರವಿಕುಮಾರ್, ವಿನುತಾ ಉದಯ್, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ಸತ್ಯಾನಂದ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸಿ.ಚೆಲುವರಾಜು, ನಿರ್ದೇಶಕ ಪಿ.ಸಂದರ್ಶ, ಮನ್ಮುಲ್ ನಿರ್ದೇಶಕ ಹರೀಶ್, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್ ಭಾಗವಹಿಸಿದ್ದರು.